ಮರಡಿಹಳ್ಳಿ: ಜಿಲ್ಲಾಮಟ್ಟದ ಕಲಿಕಾ ಹಬ್ಬ ಮುಕ್ತ ವಾತಾವರಣದಿಂದ ಅರ್ಥಪೂರ್ಣ ಕಲಿಕೆ

by | 13/02/23 | ವಿಜ್ಞಾನ ತಂತ್ರಜ್ಞಾನ

ಮರಡಿಹಳ್ಳಿ ಫೆ.13:
ಕಲಿಕೆಯನ್ನು ಅತಿ ಶಿಸ್ತಿನ ಚೌಕಟ್ಟಿನೊಳಗೆ ಮಾಡದೆ, ಮುಕ್ತ ವಾತಾವರಣದಲ್ಲಿ ಆಟದೊಂದಿಗೆ ಮಾಡಿದರೆ ಅರ್ಥಪೂರ್ಣವಾದ ಕಲಿಕೆಯಾಗುತ್ತದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪಯೋಜನ ಸಮನ್ವಯಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದಲ್ಲಿ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಆಟದೊಂದಿಗೆ ಕಲಿಸಬಹುದಾಗಿದೆ. ಎಷ್ಟು ಓದಿದರೂ ಅರ್ಥವಾಗದೇ ಪರಿಕಲ್ಪನೆಗಳನ್ನು ಚಟುವಟಿಕೆ ಮಾಡುವುದರ ಮುಖಾಂತರ, ಪರಿಸರವನ್ನು ಅಧ್ಯಯನ ಮಾಡುವುದರ ಮುಖಾಂತರ ಕಲಿಸಬಹುದಾಗಿದೆ ಎಂದರು.
ಕಲಿಕಾ ಹಬ್ಬವು 152 ಕ್ಲಸ್ಟರ್‍ಗಳಲ್ಲಿ ನಡೆದು ಈಗ ಜಿಲ್ಲಾ ಹಂತದಲ್ಲಿ ನಡೆಯುತ್ತಿದ್ದು, ಒಟ್ಟು 18,300 ಮಕ್ಕಳು ಕಲಿಕಾ ಹಬ್ಬದಲ್ಲಿ ಭಾಗವಹಿಸಿದ್ದಾರೆ. ಈ ಕಲಿಕಾ ಹಬ್ಬಗಳನ್ನು 830 ಜನ ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಟ್ಟಿದ್ದಾರೆ. ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ, ಪೆÇೀಷಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಅಪಾರ ಪೆÇ್ರೀತ್ಸಾಹ ಸಿಕ್ಕಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿಯ ವಿದ್ಯಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ ಮಾತನಾಡಿ, ಕಲಿಕಾ ಹಬ್ಬದ ಪ್ರಾರಂಭದಲ್ಲಿ ನಡೆದ ಮೆರವಣಿಗೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಅದ್ಭುತವಾಗಿ ಪ್ರದರ್ಶನ ಮಾಡುವ ವೇದಿಕೆಯಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾಧಿಕಾರಿ ಎಂ.ಮಂಜುನಾಥ ಸ್ವಾಮಿ ಮಾತನಾಡಿ, ಕಲಿಕಾ ಹಬ್ಬವು ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯಲ್ಲಿ ತಿಳಿಸಿರುವ ಮೌಲ್ಯಗಳಿಗೆ ಅನುಸಾರವಾಗಿ ನಡೆಯುತ್ತಿದೆ. ಕೊರೊನಾ ಸಂದರ್ಭದಲ್ಲಿ ಉಂಟಾದ ಕಲಿಕೆಯ ಕೊರತೆಯನ್ನು ಈ ಹಬ್ಬದ ಮೂಲಕ ಸರಿಪಡಿಸಲಾಗುತ್ತಿದೆ ಎಂದರು.
ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಮಾತನಾಡಿ, ಕಲಿಕಾ ಹಬ್ಬ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನಾ ಗ್ರಾಮದಲ್ಲಿ ಅದ್ದೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ವೇಷ ಭೂಷಣಗಳಿಂದ ಅಲಂಕೃತರಾದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ಕಲಾ ತಂಡಗಳು ಗ್ರಾಮಸ್ಥರನ್ನು ಬೆರಗಾಗುವಂತೆ ಮಾಡಿದವು.
ಕಾರ್ಯಕ್ರಮದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ರಘುನಾಥ ರೆಡ್ಡಿ, ಜಿಲ್ಲಾ ಕಲಿಕಾ ಹಬ್ಬದ ನೋಡಲ್ ಅಧಿಕಾರಿಗಳಾದ ಎಂ.ಜಿ.ಮಂಜುನಾಥ್, ಕುಸುಮ, ಗ್ರಾಮದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೃಷ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *