ಮಲ್ಲಾಡಿಹಳ್ಳಿಯಲ್ಲಿ ಮಾ.10ರಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಸರ್ವ ಸದಸ್ಯರ ಸಭೆ

by | 08/03/24 | ಸುದ್ದಿ

ಚಳ್ಳಕೆರೆ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಮಾ.10 ಭಾನುವಾರದಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿಟಿ ವೀರಭದ್ರ ಸ್ವಾಮಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಪರಿಷತ್ತಿನ ಸರ್ವ ಸದಸ್ಯರು ಆಗಮಿಸಲಿದ್ದು ತಾಲೂಕಿನಲ್ಲಿಪರಿಷತ್ತಿನ ಆಜೀವ ಸದಸ್ಯತ್ವ ಪಡೆದ ಸದಸ್ಯರು ಸಭೆಗೆ ಹಾಜರಾಗಲು ಇಚ್ಚಿಸಿದ್ದಲ್ಲಿ ತಾಲೂಕು ಕಸಪ್ಪ ವತಿಯಿಂದ ವಾಹನವನ್ನು ಏರ್ಪಡಿಸಲು ತೀರ್ಮಾನಿಸಿದ್ದು ಶನಿವಾರದೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಲ್ಲಿ ಕಳುಹಿಸಿಕೊಡುವ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿದರು ಹೆಚ್ಚಿನ ಮಾಹಿತಿಗಾಗಿ ಕಸಾಪ ಅಧ್ಯಕ್ಷರಾದ ಜಿ ಟಿ ವೀರಭದ್ರ ಸ್ವಾಮಿಯವರ ದೂರವಾಣಿ ಸಂಖ್ಯೆ 8050311363ಗೆ ಸಂಪರ್ಕಿಸಲು ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಶಾಸಕ ಟಿ ರಘುಮೂರ್ತಿಯವರಿಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಅನುದಾನಿತ ಶಾಲೆಗಳ ನೌಕರರ ಸಂಘ ವತಿಯಿಂದ ಶನಿವಾರ 11:00 ಗಂಟೆಗೆ ರೋಟರಿ ಬಾಲ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಯಾನಂದ ಡಿ ಈರಣ್ಣ ಶಿವಮೂರ್ತಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page