ಚಿತ್ರದುರ್ಗ ಜ. 30 :
ಮಹಾತ್ಮಾ ಗಾಂಧೀಜಿಯವರ ಪುಣ್ಯ ತಿಥಿ ಅಂಗವಾಗಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಗಾಂಧೀಜಿಯವರ ಪುಣ್ಯತಿಥಿ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಎರಡು ನಿಮಿಷಗಳ ಮೌನ ಆಚರಿಸಿ, ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಆಹಾರ ಇಲಾಖೆ ಜಂಟಿನಿರ್ದೇಶಕ ಮಧುಸೂಧನ್ ಕೆ.ಪಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನಮನ ಸಲ್ಲಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments