ಮಹಿಳಾ ನಿಲಯದಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟ ದಿವ್ಯ ಮತ್ತು ನಾಗರಾಜ್ ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ನಡೆದ ಮದುವೆ ಬೀಗರಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು

by | 22/02/24 | ಸುದ್ದಿ


ದಾವಣಗೆರೆ; ಫೆ.21 ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಮಹಿಳಾ ನಿಲಯದ ದಿವ್ಯ ಎಂ ಇವರ ಮದುವೆಯು ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಗ್ರಾಮದ ನಾಗರಾಜ.ಟಿ ಇವರೊಂದಿಗೆ ಬುಧವಾರ ದಾವಣಗೆರೆ ರಾಮನಗರದಲ್ಲಿನ ರಾಜ್ಯ ಮಹಿಳಾ ನಿಲಯದಲ್ಲಿ ಅತ್ಯಂತ ಸರಳ, ಕ್ರಮಬದ್ದವಾಗಿ ಮದುವೆ ನಡೆದು ಅಧಿಕಾರಿಗಳು ಬೀಗರಾಗಿ ಭಾಗವಹಿಸಿ ಎಲ್ಲಾ ಮದುವೆ ಶಾಸ್ತ್ರಗಳನ್ನು ಪೂರೈಸಿ ನವ ದಂಪತಿಗಳಿಗೆ ಶುಭ ಹಾರೈಸಿದರು.
ನೂತನ ದಂಪತಿಗಳಿಗೆ ಶುಭ ಹಾರೈಸಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಮಾತಾನಾಡಿ ಕುವೆಂಪುರವರು ಹಾಕಿ ಕೊಟ್ಟಿರುವಂತಹ ಸರಳವಾದ ಮಂತ್ರ ಮಾಂಗಲ್ಯದಲ್ಲಿ ಇಬ್ಬರು ನವ ದಂಪತಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ಬಹಳ ವಿಶೇಷವಾಗಿ ಇಡೀ ಸಮಾಜಕ್ಕೆ ಮಾದರಿಯಾಗಿದೆ. ವಧು ಕಡೆಯಿಂದ ನಮ್ಮ ಅಧಿಕಾರಿಗಳು ಬಂಧುಗಳಾಗಿ ಕೆಲಸ ನಿರ್ವಹಿಸಿದ್ದಾರೆ. ವರನ ಕಡೆಯಿಂದ ಅವರ ಅಕ್ಕ, ಮಾವಂದಿರು ಭಾಗವಹಿಸಿ ಈ ಮದುವೆಗೆ ಸಾಕ್ಷೀಕರಿಸಿದ್ದಾರೆ. ಇವರು ನವದಂಪತಿಗಳಿಗೆ ಸಂವಿಧಾನ ಪ್ರಸ್ತಾವನೆಯುಳ್ಳ ಪೋಟೋ ಪ್ರೇಮ್ ನೀಡುವ ಮೂಲಕ ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು.ಎಸ್.ಬಳ್ಳಾರಿ, ಉಪವಿಭಾಗಾಧಿಕಾರಿ ದುರ್ಗಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಅಧಿಕಾರಿಗಳು ಆಗಮಿಸಿ ವಧುವರರಿಗೆ ಶುಭ ಕೋರಿದರು.
ರಾಜ್ಯ ಮಹಿಳಾ ನಿಲಯದಲ್ಲಿ ಕಳೆದ 5 ವರ್ಷಗಳ ಕಾಲ ಆಶ್ರಯ ಪಡೆದ ದಿವ್ಯ.ಎಂ (24 ವರ್ಷ} ಮತ್ತು ನಾಗರಾಜ ಎಂಬುವರ ಜೊತೆ ವಿಶೇಷ ರೀತಿಯಲ್ಲಿ ಸಾಂಪ್ರದಾಯವನ್ನು ಕೈಬಿಟ್ಟು, ಪುರೋಹಿತರನ್ನು ಕರೆಸದೇ ಸರಳ ವಿಧಾನದಲ್ಲಿ ವಿವಾಹ ಮಹೋತ್ಸವವನ್ನು ನೆರವೇರಿಸಲಾಯಿತು.
ಚಿತ್ರದುರ್ಗ ತಾ; ಮುದ್ದಾಪುರ ಗ್ರಾಮದ ನಿವಾಸಿ ನಾಗರಾಜ್.ಟಿ. ತಂದೆ ದಿವಂಗತ.ತಿಮ್ಮಣ್ಣ ಇವರು ವ್ಯವಸಾಯ ವೃತ್ತಿ ಮಾಡುತ್ತಾರೆ. ಆರ್ಥಿಕವಾಗಿ ಸದೃಡವಾಗಿರುತ್ತಾರೆ. ಇವರಿಗೆ ತಂದೆ, ತಾಯಿ ಇಬ್ಬರೂ ಸಹ ಇರುವುದಿಲ್ಲ. ಅಜ್ಜನ ಜೊತೆ ವಾಸವಿದ್ದಾರೆ.
ಕಚೇರಿಯ ಸೂಪರ್‍ಡೆಂಟ್ ಮಲ್ಲಿಕಾರ್ಜುನ್, ರಾಜ್ಯ ಮಹಿಳಾ ನಿಲಯ ಅಧೀಕ್ಷಕರಾದ ಶಕುಂತಲಾ ಬಿ ಕೋಳೂರ ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞೆ ಸ್ವೀಕರಿಸಲಾಯಿತು.
(ಫೋಟೋ ಇದೆ.)

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page