ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಮಾಸಿಕ ಸಂತೆ ವರದಾನವಾಗಲಿದೆ ತಾಲುಯಕು ಕಾರ್ಯಕ್ರಮ ವ್ಯವಸ್ಥಾಪಕ ಬಾಲರಾಜ್.

by | 25/12/23 | ಆರ್ಥಿಕ


ಪರಶುರಾಂಪುರ ಡಿ.25ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ, ಅವರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ‘ಮಾಸಿಕ ಸಂತೆ’ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ ಎಂದು ತಾಲುಯಕು ಕಾರ್ಯಕ್ರಮ ವ್ಯವಸ್ಥಾಪಕ ಬಾಲರಾಜ್ ಹೇಳಿದರು.

ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ. ತಾಲೂಕು ಪಂಚಾಯ್ .ಗ್ರಾಮಪಂಚಾಯಿತಿ ಹಾಗೂ ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಸಂತೆಗೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ.
ಈಗಾಗಲೆ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಾಸಿಕ ಸಂತೆ ನಡೆಸಿ ಇಂದು ಪರಶುರಾಂಪುರದಲ್ಲಿ ನಡೆಸಲಾಗುತ್ತಿದೆ..ತಾಲುಯಕಿನ ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳನ್ನು ಸಂತೆಯಲ್ಲಿ ಪ್ರದರ್ಶನ ಹಾಗೂ ಮಾರಾಟ ಮಾಡುವ ಮೂಲಕ‌ ಆರ್ಥಕ ವಾಗಿ ಮುಂದೆ ಬರುವಂತೆ ತಿಳಿಸಿದರು.‌ ‌
ತಾಲೂಕು ಸಂಪನ್ಮೂಲ ವ್ಯಕ್ತಿ ರೀನಾ ಎನ್ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ ನೀಡುವ ಮೂಲಕ ಸ್ವಯಂ ಉದ್ಯೋಗ. ಗುಡಿ ಕೈಗಾರಿಕೆ ಸ್ಥಾಪನೆಗೆ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಸಂತೆಗಳನ್ನು ನಡೆಸುವ ಗುರಿ ಹೊಂದಲಾಗಿದೆ ಮಹಿಳೆಯರು ಆರ್ಥಿಕವಾಗಿ ಮುನ್ನಡೆ ಸಾಧಿಸಲು ಬೇಕಾದ ನೆರವನ್ನೂ ನೀಡಲಾಗುವುದು‌’ ಎಂದು ತಿಳಿಸಿದರು.
ಇಂತಹ ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ಗುಣಮಟ್ಟದ ಹಾಗೂ ಪರಿಶುದ್ಧವಾದ ಉತ್ಪನ್ನ ತಯಾರಿಸಬೇಕು. ಉತ್ಪನ್ನಗಳ ಬ‌ಗ್ಗೆ ಪ್ರಚಾರವನ್ನೂ ಮಾಡಬೇಕು’ ಎಂದು ಸಲಹೆ ನೀಡಿದರು ಕಾರ್ಯಕ್ರಮದಲ್ಲಿ . – ತಾಲ್ಲೂಕು ವ್ಯವಸ್ಥಾಪಕ ತಿಪ್ಪೇಸ್ವಾಮಿ. – ವಲಯ ಮೇಲ್ವಿಚಾರಕರು ಮಹೇಶ್ ಹಾಗೂ ಗ್ರಾಪಂ ಅಧ್ಯಕ್ಷರು ಸದಸ್ಯರು. ಮಹಿಳಾ ಒಕ್ಕೂಟದ ಅಧ್ಯಕ್ಷರು ಸದಸ್ಯ .ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page