ಮಹಿಳೆಯರು ಆರೋಗ್ಯಶಿಬಿರಗಳ ಸದುಪಯೋಗವನ್ನು ಪಡೆಯಬೇಕು : ಶಾಸಕರಾದ ಪೂರ್ಣಿಮಾ ಶ್ರೀನಿವಾಸ್

by | 27/02/23 | ಆರೋಗ್ಯ

ಹಿರಿಯೂರು :
ಮನುಷ್ಯನಿಗೆ ಜೀವನದಲ್ಲಿ ಆರೋಗ್ಯ ಬಹಳ ಪ್ರಾಮುಖ್ಯವಾದದ್ದು, ಆದರೆ ನಾವು ನಮ್ಮ ಬದುಕಿನ ಒತ್ತಡದಲ್ಲಿ ಆರೋಗ್ಯದ ಕಡೆ ಗಮನ ನೀಡುವುದಿಲ್ಲ, ಅದರಲ್ಲೂ ಮಹಿಳೆಯರು ತಮ್ಮ ಮನೆ, ಮಕ್ಕಳು, ಕುಟುಂಬ ನೋಡಿಕೊಳ್ಳುವ ಭರದಲ್ಲಿ ಆರೋಗ್ಯದ ಕಡೆ ಗಮನ ಹರಿಸುವುದಿಲ್ಲ, ಹೀಗಾಗದಂತೆ ಮಹಿಳೆಯರು ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬುದಾಗಿ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ನೆಹರು ಮೈದಾನದಲ್ಲಿ ಕಿರ್ಲೋಸ್ಕರ್ ಇಂಡಸ್ಟ್ರೀಸ್ ಲಿಮಿಟೆಡ್, ಭರವಸೆ ಚಾರಿಟಿಯಲ್ ಪೌಂಡೇಶನ್ಸ್, ಜಿಲ್ಲಾ ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಕಾನೂನು ಸೇವಾ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಬೃಹತ್ ಆರೋಗ್ಯಮೇಳವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕಿರ್ಲೋಸ್ಕರ್ ಸಮೂಹ ಸಂಸ್ಥೆಗಳು, ಬರೀ ತಮ್ಮ ವ್ಯಾಪಾರ ವ್ಯವಹಾರ ಅಭಿವೃದ್ಧಿ ಕಡೆಗೆ ಗಮನ ಹರಿಸದೆ ನಗರದ ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ, ಮಹಿಳೆಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ, ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ ಎಂದರಲ್ಲದೆ,
ಮುಂದಿನ ದಿನಗಳಲ್ಲಿ ಮಾರ್ಚ್ ತಿಂಗಳಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದಂದು ನಾವು ನಗರದಲ್ಲಿ ಸಹ ಬೃಹತ್ ಉಚಿತ ಆರೋಗ್ಯಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಆರೋಗ್ಯ ಶಿಬಿರಕ್ಕೂ ಕಿರ್ಲೋಸ್ಕರ್ ಕಂಪನಿಯವರು ಕೈಜೋಡಿಸಿ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂಬುದಾಗಿ ಮನವಿ ಮಾಡಿದರು.
ಖ್ಯಾತ ಮಹಿಳಾ ತಜ್ಞ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ಮಾತನಾಡಿ, ಇಂದಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯರು ಮನೆ ಮಕ್ಕಳು, ಸಂಸಾರ ನಿರ್ವಹಣೆಯಲ್ಲಿ ಹೆಚ್ಚು ಒತ್ತಡದಿಂದ ಬಳಲುತ್ತಿದ್ದು, ಮುಟ್ಟಿನ ಸಮಸ್ಯೆ, ಗರ್ಭದಾರಣೆ ಸಮಸ್ಯೆ, ಋತುಬಂಧ, ದಾಂಪತ್ಯ ಸಮಸ್ಯೆ ಇರಬಹುದು, ಈ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಈ ಬಗ್ಗೆ ಯಾವುದೇ ಸಂಕೋಚವಿಲ್ಲದೆ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮೂಲಕ ತಜ್ಞ ವೈದ್ಯರ ಸಲಹೆ ಸೂಚನೆಗಳನ್ನು ಪಡೆದು ಆರೋಗ್ಯ ಸುಧಾರಿಸಿಕೊಳ್ಳುವ ಮೂಲಕ ಈ ಆರೋಗ್ಯ ಶಿಬಿರಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದರಲ್ಲದೆ,
ಯಾವುದೇ ಕಾಯಿಲೆಗಳಿಗೆ ಆರಂಭದಲ್ಲಿಯೇ ತೋರಿಸಿಕೊಂಡರೆ ಅಗತ್ಯ ಚಿಕಿತ್ಸೆ ಪಡೆದು ಕಾಯಿಲೆ ಗುಣಪಡಿಸಿಕೊಳ್ಳಬಹುದು, ಆದರೆ ತಡವಾಗಿ ತೋರಿಸಿಕೊಂಡರೆ, ಸ್ಟೇಜ್ ದಾಟಿ ವೈದ್ಯರ ಬಳಿ ಬಂದರೆ ಯಾರು ಗುಣಪಡಿಸಲು ಸಾಧ್ಯವಿಲ್ಲ, ಆದ್ದರಿಂದ ಮಹಿಳೆಯರು, ತಮ್ಮ ಸಮಸ್ಯೆಗಳ ಬಗ್ಗೆ ತಜ್ಞ ವೈದ್ಯರನ್ನು ಭೇಟಿ ಮಾಡಿ, ಅಗತ್ಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ವಕೀಲರಾದ ಟಿ.ಸಂಜಯ್ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾಜಿ.ತಿಮ್ಮಾಪುರ, ವಕೀಲರಾದ ಮೀನಾಕ್ಷಿ, ಕಿರ್ಲೋಸ್ಕರ್ ಕಂಪನಿಯ ಪಿ.ನಾರಾಯಣ, ಕೆ.ಚಂದ್ರಶೇಖರಾಚಾರಿ, ಹರೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಕಾಂತರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page