ಮಹಿಳೆಯರು ದೌರ್ಜನ್ಯ ಖಂಡಿಸಿ ಕಾನೂನಿನ ಅಡಿಯಲ್ಲಿ ನ್ಯಾಯವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣವಾಗಲೂ ಸಾಧ್ಯ: ವೈ. ತಿಪ್ಪೇಸ್ವಾಮಿ

by | 25/06/24 | ಕಾನೂನು

ಚಳ್ಳಕೆರೆ: ದೇಶದ ಮಹಿಳೆಯರು ಸಂವಿಧಾನ ಮತ್ತು ಕಾನೂನನ್ನು ತಿಳಿದುಕೊಂಡು ತಮ್ಮ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕಾನೂನಿನ ಅಡಿಯಲ್ಲಿ ಹೋರಾಟ ನಡೆಸಿ ನ್ಯಾಯವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. 

ನಗರದ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಹೆಚ್ ಪಿಪಿಸಿ ಕಾಲೇಜಿನ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಬಲೀಕರಣ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣಿನ ಶೋಷಣೆಯ ಬಗ್ಗೆ ಮಾತನಾಡಲು ಸಹ ವಿಷಾದವಾಗುತ್ತದೆ ಜಗತ್ತಿನ ಸೃಷ್ಟಿಗೆ ಕಾರಣವಾಗುವ ಹೆಣ್ಣನ್ನು ನಿರ್ದಯವಾಗಿ ನಡೆಸಿಕೊಳ್ಳುತ್ತಿರುವುದು ಬೇಸರದ ಸಂಗತಿಯಾಗಿದೆ ಸಂವಿಧಾನವು ಮಹಿಳೆಯರಿಗೆ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಕ್ಕನ್ನು ನೀಡಿದ್ದು ಇವುಗಳನ್ನು ಬಳಸಿಕೊಂಡು ಇಂದು ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಸ್ಥಾನಮಾನ ಗಳಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಆದರೂ ಸಹ ಪುರುಷ ಪ್ರಧಾನ ಸಮಾಜವು ಹೆಣ್ಣನ್ನು ತುಚ್ಯ ಮನೋಭಾವದಿಂದ ಕಾಣುತ್ತಿರುವುದು ಸರಿಯಲ್ಲ ಸ್ತ್ರೀಯರು ದೌರ್ಜನ್ಯಕ್ಕೆ ಒಳಗಾದಾಗ ಹೆದರದೆ ಪೋಷಕರಿಗೆ ತಿಳಿಸಿ ಕಾನೂನಿನ ಅಡಿಯಲ್ಲಿ ನ್ಯಾಯ ಪಡೆಯಬೇಕು ಜಿಲ್ಲೆಯಲ್ಲಿ ಬಾಲ ತಾಯಂದಿರ ಪ್ರಕರಣಗಳು ಹೆಚ್ಚಾಗುತ್ತಿದ್ದು ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ದೊರೆಯುತ್ತಿದ್ದು ತಮ್ಮ ಬದುಕನ್ನು ಹಸನು ಮಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಬಿಎಸ್ ಮಂಜುನಾಥ್ ಮಾತನಾಡಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ ಒಂದು ಮನೆಗೆ ಶಕ್ತಿಯಾಗಿ ಇಂದು ಸ್ತ್ರೀಯರು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಪೋಷಕರು ಬಾಲ್ಯ ವಿವಾಹಗಳಿಂದ ಹೆಣ್ಣು ಮಕ್ಕಳನ್ನು ದೂರವಿರಿಸಿ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ತಮ್ಮ ಗುರಿಯನ್ನು ಮುಟ್ಟಲು ಬೆಂಬಲ ನೀಡಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ಭಾರ್ಗವಿ ಮಹಿಳೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು ಹಾಗೂ ಮಹಿಳಾ ಸಬಲೀಕರಣ ಘಟಕದ ಸಂಚಾಲಕರಾದ ಡಾ. ಜಯಮ್ಮ ಕಾರ್ಯಕ್ರಮದ ಕುರಿತು ಮಾತನಾಡಿದರು. 

ಈ ವೇಳೆ ಎಂಕಾಂನಲ್ಲಿ ರಾಂಕ್ ಪಡೆದ ಕೃಷ್ಣ ಕುಮಾರಿ ಎಂಎ ಸಮಾಜ ಶಾಸ್ತ್ರದಲ್ಲಿ ಭಾನುಪ್ರಿಯ ಎಂಎ ಕನ್ನಡ ವಿಭಾಗದಲ್ಲಿ ಅರ್ಚನಾ ಬಿಬಿಎ ರಕ್ಷಿತಾ ಬಿಕಾಂ ಮಸ್ಕಾನ್ ಬಿ ಎ ಕಮಲಾಕ್ಷಿ ಬಿ ಎಸ್ ಸಿ ಮೌನಿಕ ರವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೊ. ಜಗದೀಶ್ವರಿ ಪ್ರೊ. ಎಚ್ ತಿಪ್ಪೇಸ್ವಾಮಿ ನಾಗಶ್ರೀ ಬಿ ಡಾ. ಪಾಪಣ್ಣ ಬಸಣ್ಣ ಗೌಡ ವಿನೇಶ್ ಪ್ರೊ. ಶಿಲ್ಪಾ ಪ್ರೊ. ಶಶಿಕಲಾ ಜಿಟಿ, ಕೆ ಚಿತ್ತಯ್ಯ ದೇವಪ್ಪ ಶರಣಪ್ಪ ರಂಗಸ್ವಾಮಿ ಜಮುನಾ ರಾಣಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page