ಮಾದಿಗ ಸಮಾಜವನ್ನು ಕಡೆಗಣಿಸಿದ ಕಾಂಗ್ರೆಸ್ ಸೋಲಿಸಿ- ಉತ್ತಮ ಸ್ಥಾನ ಮಾನ ಹಾಗೂ ಒಳ ಮೀಸಲಾತಿ ಹೆಚ್ಚಿಸಿದ ಬಿಜೆಪಿಯನ್ನು ಗೆಲ್ಲಿಸಿಮಾದಿಗ ದಂಡೋರಾ ಸಂಸ್ಥಾಪಕ ಮಂದಕೃಷ್ಣ ಮಾದಿಗ ಕರೆ ನೀಡಿದರು.

by | 17/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಜನಧ್ವನಿ ವಾರ್ತೆ ಏ 17 ಒಳ ಮೀಸಲಾತಿ ಕಲ್ಪಿಸಬೇಕೆಂಬ ಮಾದಿಗರ ದಶಕಗಳ ಬೇಡಿಕೆ ಬಿಜೆಪಿ ಈಡೇರಿಸಿದೆ ಎಂದು ಮಾದಿಗ ದಂಡೋರಾ ಸಂಸ್ಥಾಪಕ ಮಂದಕೃಷ್ಣ ಮಾದಿಗ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.
ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಗೋವಿಂದಕಾರಜೋಳ ಪರ ಮಾದಿಗ ಸಮುದಾಯದ ಮುಖಂಡರು ಆಯೋಜಿಸಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಾದಿಗ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆಗೆ ಬಿಜೆಪಿ ಶ್ರಮಿಸುತ್ತಿದೆ. ಮಾದಿಗ ಸಮಾಜದ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಬಿಜೆಪಿ ಪಕ್ಷದವತಿಯಿಂದ ದಲಿತ ನಾಯಕ ಗೋವಿಂದಕಾರಜೋಳ ಇವರಿಗೆ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ನೀಡಿದೆ. ಬಿಜೆಪಿ ಮುಸ್ಲಿಂ ವಿರೋಧಿ ಎಂದು ಕಾಂಗ್ರೆಸ್ ವಿರೋಧಿಸುತ್ತಿದೆ ಆದರೆ ಮುಸ್ಲಿಂ ಸಮುದಾಯ ಡಾ.ಎ.ಜೆ. ಅಬ್ದುಲ್ ಕಲಾಂ ಇವರನ್ನು ರಾಷ್ಟ್ರ ಪತಿಯನ್ನು ಮಾಡಿದೆ , ದಲಿತ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದೆ ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರಕಾರದ ಅವಧಿಯಲ್ಲಿ ಮಾದಿಗ ಸಮುದಾಯದವರಿಗೆ ಸಚಿವ ಸ್ಥಾನ ನೀಡಿ ಉತ್ತಮ ಸ್ಥಾನ ನೀಡಿದೆ.
ಕಾಂಗ್ರೆಸ್ ಸರಕಾರದಲ್ಲಿ ಡಾ,ಜಿ,ಪರಮೇಶ್ವರ ಇವರಿಗೆ ಮುಖ್ಯ ಮಂತ್ರಿ ಅಥವಾ ಉಪಮುಖ್ಯ ಸ್ಥಾನ ನೀಡಿಲ್ಲ, ಮಲ್ಲಿಕಾರ್ಜುನ ಖರ್ಗೆ ಇವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದೆ ಮಾದಿಗ ಸಮುದಾಯವನ್ನು ಕಾಂಗ್ರೆಸ್ ಕಡೆಗಣಿಸಿದೆ. ಒಳ ಮೀಸಲಾತಿ ಕಲ್ಪಿಸುವ ಮೂಲಕ ಅಭಿವೃದ್ಧಿಯಿಂದ ವಂಚಿತ ಸಮಾಜದ ಸರ್ವಾಂಗೀಣ ಪ್ರಗತಿಗೆ ಬಿಜೆಪಿ ಮುನ್ನುಡಿ ಬರೆದಿದೆ. ಆದರೆ, ಶೋಷಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಬೇಕು. ಕೇಂದ್ರ ಸಚಿವ ಸಂಪುಟದಲ್ಲೂ ದಲಿತರಿಗೆ ಸೂಕ್ತ ಸ್ಥಾನ ಬಿಜೆಪಿ ಒದಗಿಸಿದೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿದರೆ ಗೋವಿಂದ ಕಾರಜೋಳ ಕೇಂದ್ರ ಸಚಿವರಾಗುವುದು ಗ್ಯಾರೆಂಟಿ ಈಗಾಗಲೆ ಜಿಪಿಪಿ ನಾಯಕರು ಘೋಷಣೆ ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಕಿಡಿಕಾರಿದ ಮಂದ ಕೃಷ್ಣ ಮಾದಿಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸು ಮತ್ತು ಅನುಭವವಾಗಿದೆ ಆದರೆ ಉಪಯೋಗವಿಲ್ಲ ಮಾದಿಗ ಸಮುದಾಯಕ್ಕೆ ಮೀಸಲಾತಿ ದೊರೆಯುವುದನ್ನು ಸಹಿಸಲಿಲ್ಲ ಪ್ರತಿ ಬಾರಿಯೂ ಅಡ್ಡಿಪಡಿಸುತ್ತಲೆ ಬಂದಿದ್ದಾರೆ. ವಾಜಪೇಯಿ ನೇತೃತ್ವದ ಸರ್ಕಾರ ಮಾದಿಗ ಸಮುದಾಯಕ್ಕೆ ಮೀಸಲಾತಿಯನ್ನು ನೀಡಿತ್ತು ಆದರೆ 2004 ರಿಂದ 2014ರ ವರೆಗೆ ಇದ್ದ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ಮೀಸಲಾತಿಯನ್ನು ನೀಡಲು ಮಲ್ಲಿಕಾರ್ಜುನ ಖರ್ಗೆ ಅವರೇ ಅಡ್ಡಿಪಡಿಸಿದ್ದರು ಕೇಂದ್ರದಲ್ಲಿ ಮಂತ್ರಿ ಸ್ಥಾನದಲ್ಲಿದ್ದರೂ ಸಹ ಮಾದಿಗ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಲಿಲ್ಲ ಇದರಿಂದಾಗಿ ಮಾದಿಗ ಸಮುದಾಯ ಇಂದಿಗೂ ಸಹ ಮೀಸಲಾತಿಗಾಗಿ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಹೈದರಾಬಾದಿನಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶಕ್ಕೆ ಬಂದು ಮೀಸಲಾತಿಯ ಭರವಸೆ ನೀಡಿದರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಆರು ಸ್ಥಾನ ನೀಡಿದರೆ ಬಿಜೆಪಿ 12 ಸ್ಥಾನಗಳನ್ನು ನೀಡಿತು ಇದರಿಂದಲೇ ಗೊತ್ತಾಗುತ್ತದೆ ಕಾಂಗ್ರೆಸ್ ಪಕ್ಷ ಮಾದಿಗ ಸಮುದಾಯವನ್ನು ಯಾವ ಮಟ್ಟಿಗೆ ನೋಡಿಕೊಳ್ಳುತ್ತಿದೆ ಎಂಬುದನ್ನು ತಿಳಿಯಬೇಕಾಗಿದೆ ಕಳೆದ ಬಾರಿಯ ಬಿಜೆಪಿ ಸರ್ಕಾರದ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ 17% ಮೀಸಲಾತಿಯನ್ನು ಮಾದಿಗ ಸಮುದಾಯಕ್ಕೆ ನೀಡಿದೆ ಸದಾಶಿವ ಆಯೋಗವನ್ನು ರಚಿಸಿದ ಕಾಂಗ್ರೆಸ್ ಸರ್ಕಾರ ಅದರ ವರದಿಯನ್ನೇ ಒಪ್ಪಲು ಸಿದ್ಧವಿಲ್ಲ ಇಂತಹ ಕಾಂಗ್ರೆಸ್ ಪಕ್ಷಕ್ಕೆ ಮಾದಿಗ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ ನೀಡುವ ಬದಲು ಬಿಜೆಪಿಗೆ ಮತ ನೀಡಿದರೆ ಪ್ರಧಾನ ನರೇಂದ್ರ ಮೋದಿಯವರ ಸರ್ಕಾರ ಆಡಳಿತಕ್ಕೆ ಬಂದು ಮೀಸಲಾತಿ ಕಲ್ಪಿಸುತ್ತದೆ ಎಂದರು. 
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಜೆಡಿಎಸ್ ಮುಖಂಡರಾದ ಎಂ.ರವೀಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಆನಂದಪ್ಪ ,ಕರಿಕೆರೆತಿಪ್ಪೇಸ್ವಾಮಿ, ಬಿಜೆಪಿ ಮುಂಡರಾದ ಅನಿಲ್ ಕುಮಾರ್,ಕೆ.ಟಿ,ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತಯಾಚನೆ ಮಾಡಿದರಲ್ಲದೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಅಕ್ರೋಶಹೊರಹಾಕಿದ್ದಾರೆ. ರಾಮದಾಸ್ , ಜಯಪಾಲಯ್ಯ, ಮಂಜುನಾಥ್ ,ಇಂದ್ರೇಶ್ ,.ವಿ ವೈ ಪ್ರಮೋದ್, , ನರಸಿಂಹಪ್ಪ ರವಿಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮಾದಿಗ ಸಮಾಜದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page