ಮಾಧ್ಯಮ ಕಾರ್ಯಾಗಾರದಲ್ಲಿ ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿಕೆ ಡೆಂಗೀ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯಕ

by | 30/05/24 | ಆರೋಗ್ಯ


ಚಿತ್ರದುರ್ಗ ಮೇ.30:
ಜಿಲ್ಲೆಯಲ್ಲಿ ಡೆಂಗೀ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಡೆಂಗೀ ಹರಡುವ ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾ ಮತ್ತು ದೃಶ್ಯ ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾದ ಮಲೇರಿಯಾ ಮತ್ತು ಇತರೆ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಲಾರ್ವ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತಿ ಮನೆ ಮನೆಗಳಿಗೂ ತೆರಳಿ ಸೊಳ್ಳೆಗಳ ನಿಯಂತ್ರಣ ಮಾಡುವ ಬಗ್ಗೆ ಜನರಿಗೆ ತಿಳಿ ಹೇಳಲಾಗುತ್ತಿದೆ. ಆದಾಗ್ಯೂ ಸಾರ್ವಜನಿಕರು ಸೊಳ್ಳೆಗಳ ನಿಯಂತ್ರಣದ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗೀ ಸೇರಿದಂತೆ ಹಲವು ರೋಗಗಳು ಹರಡುತ್ತಿವೆ. ಇದರಿಂದ ಚಿಕಿತ್ಸೆ ನೀಡುವಲ್ಲಿ ತೊಂದರೆ ಉಂಟಾಗುತ್ತಿದೆ. ರೋಗದ ಚಿಕಿತ್ಸೆಗಾಗಿ ಜನರು ಸಹ ಆರ್ಥಿಕವಾಗಿ ಸಂಕಷ್ಟ ಎದುರಿಸುವಂತಾಗುತ್ತದೆ. ಡೆಂಗೀ ಹಾಗೂ ಮಲೇರಿಯಾ ಪ್ರಕರಣಗಳು ಹೆಚ್ಚಾದ ತಕ್ಷಣ ಆರೋಗ್ಯ ಇಲಾಖೆ ಕಾರ್ಯ ವೈಖರಿ ಬಗ್ಗೆ ಎಲ್ಲರೂ ಪ್ರಶ್ನಿಸುತ್ತಾರೆ. ಆದರೆ ಆರೋಗ್ಯ ಇಲಾಖೆ ಹೇಳುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದಿಲ್ಲ ಎಂದು ಡಾ.ರೇಣುಪ್ರಸಾದ್ ಬೇಸರ ವ್ಯಕ್ತಪಡಿಸಿದರು.
ಡೆಂಗೀ ಹರಡುವ ಈಡಿಸ್ ಸೊಳ್ಳೆ ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತದೆ. ಅದ್ದರಿಂದ ತುಂಬು ತೋಳಿನ ಶರ್ಟ್ ಧರಿಸಿ ಕೆಲಸ ಮಾಡುವುದು ಉತ್ತಮ ಅಭ್ಯಾಸವಾಗಿದೆ. ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಬೇಕು. ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇರಿಸಿಕೊಳ್ಳಬೇಕು. ಮಳೆಯ ನೀರು ತೆಂಗಿನ ಚಿಪ್ಪು, ಟಯರ್ ಸೇರಿದಂತೆ ಇತರೆ ವಸ್ತುಗಳಲ್ಲಿ ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಡೆಂಗೀ ಹಾಗೂ ಮಲೇರಿಯಾ ಹರಡುವ ಸೊಳ್ಳೆಗಳು ಮಳೆ ಹಾಗೂ ಸ್ವಚ್ಛ ನೀರಿನಲ್ಲಿ ಸಂತಾನೋತ್ಪಪ್ತಿ ಮಾಡುತ್ತವೆ. ಹಾಗಾಗಿ ಈ ನೀರಿನ ಆಕರಗಳನ್ನು ಸ್ವಚ್ಚವಾಗಿ ಇರಿಸಬೇಕು. ಸೊಳ್ಳೆ ನಿಯಂತ್ರಣದಲ್ಲಿ ಧೂಮೀಕರಣ ಅಷ್ಟೊಂದು ಪರಿಣಾಮಕಾರಿಯಾಗುವುದಿಲ್ಲ. ಧೂಮೀಕರಣದ ವೇಳೆ ಸೊಳ್ಳೆಗಳು ಧೂಮೀಕರಣ ವ್ಯಾಪ್ತಿಯಿಂದ ಹಾರಿ ಹೋಗಿ ಮತ್ತೆ ಹಿಂದಿರುಗುತ್ತವೆ. ಇದರ ಬದಲು ಸೊಳ್ಳೆಗಳ ಲಾರ್ವಾಗಳ ನಿಯಂತ್ರಣಕ್ಕೆ ಗ್ಯಾಂಬೂಸಿಯಾ ಹಾಗೂ ಗಪ್ಪಿ ಮೀನುಗಳನ್ನು ಜಲಮೂಲಗಳಲ್ಲಿ ಸಾಕುವುದು ಉತ್ತಮ ಎಂದು ಡಿಹೆಚ್‍ಒ ಡಾ.ರೇಣುಪ್ರಸಾದ್ ಹೇಳಿದರು.
ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಕಡಿ ಸೊಳ್ಳೆಗಳ ನಿಯಂತ್ರಣ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟಡರು. ಈ ವೇಳೆ ಕೇವಲ ತಂಗಿನ ಚಿಪ್ಪು, ಟಯರ್ ಸೇರಿದಂತೆ ದೊಡ್ಡ ನೀರಿನ ಆಕರಗಳಲ್ಲಿ ಮಾತ್ರ ರೋಗವಾಹಕ ಸೊಳ್ಳೆಗಳು ಬೆಳೆಯುತ್ತವೆ ಎಂದು ನಂಬಿಕೆ ಇದೆ. ಆದರೆ ಡೆಂಗೀ ಹಾಗೂ ಮಲೇರಿಯಾ ಹರಡುವ ಸೊಳ್ಳೆಗಳು ಕೇವಲ 5 ಎಂ.ಎಲ್. ನೀರು ಶೇಖರಣೆಯಾಗುವ ಚಿಕ್ಕ ಬಾಟಲಿ ಮುಚ್ಚುಳ, ಪ್ಲಾಸ್ಟಿಕ್ ಟೀ ಲೋಟ ಅಥವಾ ಇತರೆ ತ್ಯಾಜ್ಯಗಳಲ್ಲಿ ಸಂತಾನೋತ್ಪತ್ತಿ ನಡೆಸುತ್ತವೆ. ಆದ್ದರಿಂದ ಮನೆಯ ಸುತ್ತ ಮುತ್ತ ಸಣ್ಣ ತ್ಯಾಜ್ಯಗಳಲ್ಲಿಯೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಅಧ್ಯಕ್ಷ ದಿನೇಶ್ ಗೌಡಗೆರೆ ಮಾತನಾಡಿ, ಆರೋಗ್ಯ ಇಲಾಖೆ ಕಾರ್ಯಕ್ರಮವು ಅತ್ಯಂತ ಉಪಯುಕ್ತವಾಗಿದೆ. ಇಂತಹ ಕಾರ್ಯಗಾರಗಳನ್ನು ತಾಲ್ಲೂಕು ಹಂತ ಪತ್ರಕರ್ತರಿಗೂ ನೀಡಬೇಕು. ಇದಕ್ಕೆ ಪತ್ರಕರ್ತರ ಸಂಘ ಸಹಕಾರ ನೀಡಲಿದೆ ಎಂದರು. ಇದರ ಜೊತೆಗೆ ಆರೋಗ್ಯ ಇಲಾಖೆಯಿಂದ ತಜ್ಞ ವೈದ್ಯರನ್ನು ಕರೆಸಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಬಳಿ ಕೋರಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶಿ ಡೆಂಗೀ ಹಾಗೂ ಮಲೇರಿಯಾ ರೋಗದ ಕುರಿತು ಪ್ರಾತ್ಯಕ್ಷತೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಎಂ.ಮಾರುತಿ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page