ಮಾನಸಿಕ ಆರೋಗ್ಯದ ಕಡೆ ಗಮನ ಅಗತ್ಯ -ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್

by | 11/10/23 | ಕಾನೂನು

ಚಿತ್ರದುರ್ಗ ಅ.11:
ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದ್ದು, ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಹೇಳಿದರು.
ನಗರದ ಶ್ರೀ ಗುರು ರಾಘವೇಂದ್ರ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ, ಶ್ರೀ ಗುರು ರಾಘವೇಂದ್ರ ವಿದ್ಯಾಸಂಸೆ ಇವರ ಸಂಯುಕ್ತಶ್ರದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮುಖ್ಯವಾದ ಅಂಶ. ಮಾನಸಿಕ ಆರೋಗ್ಯದ ರಕ್ಷಣೆಗಾಗಿ ಕಾನೂನಿನಲ್ಲಿ ಮಾನಸಿಕ ಆರೋಗ್ಯ ಕಾಯ್ದೆ ಇದೆ. ಕಾಯ್ದೆ ಅಡಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಗುಣಮಟ್ಟದ ಮಾನಸಿಕ ಆರೋಗ್ಯ ಚಿಕಿತ್ಸೆ ಪಡೆಯುವ ಹಕ್ಕಿದೆ ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ದೇಹದ ಹಾಗೇ ಮನಸ್ಸಿಗೂ ಕೂಡ ಕಾಯಿಲೆಗಳು ಬರುತ್ತವೆ. ನಾವು ದೇಹಕ್ಕೆ ಕಾಯಿಲೆ ಆದಾಗ ಹೇಗೆ ಚಿಕಿತ್ಸೆ ಪಡೆಯುತ್ತೇವೆ ಹಾಗೆಯೇ ಮಾನಸಿಕ ಆರೋಗ್ಯಕ್ಕೂ ಕೂಡ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ದೈಹಿಕವಾಗಿ ಆರೋಗ್ಯಕರವಾಗಿರಲು ಮಾನಸಿಕ ಆರೋಗ್ಯವು ಬಹುಮುಖ್ಯ, ಮಾನಸಿಕ ತೊಂದರೆಗಳಿದ್ದಲ್ಲಿ ಕ್ಲಿನಿಕಲ್ ಸೈಕಾಲಜಿಸ್ಟ್ ಬಳಿ ಸಲಹೆ ಪಡೆಯಬಹುದು ಹಾಗೂ ಮನೋವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗಲು ಸೂಚಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುμÁ್ಠನಾಧಿಕಾರಿ ಜಿ.ಓ. ಡಾ. ನಾಗರಾಜ್ ಮಾತನಾಡಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಮನೋವೈದ್ಯರು, ಸೈಕಾಲಜಿಸ್ಟ್ ಸೋಶಿಯಲ್ ವರ್ಕರ್, ಶುಶ್ರೂμÁಧಿಕಾರಿಗಳು, ಡಿ.ಎಂ.ಹೆಚ್.ಪಿ ತಂಡವು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ರೀತಿಯ ಮಾನಸಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆಯಬೇಕು. ಮಾನಸಿಕ ರೋಗಿಗಳನ್ನು ಬಂಧನದಲ್ಲಿರಿಸುವುದು, ಕಟ್ಟಿ ಹಾಕುವುದು, ಹಿಂಸೆ ಕೊಡುವುದು ಇವುಗಳಿಗೆ ಅವಕಾಶ ನೀಡಬಾರದು. ಮುಂಚಿತವಾಗಿ ಗುರುತಿಸಿ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸಬೇಕು ಎಂದರು.
ಯಾವುದೇ ರೀತಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಟೆಲಿ ಮಾನಸ ಟೋಲ್ ಫ್ರೀ ನಂಬರ್ 14416 ಗೆ ಕರೆ ಮಾಡಿ ಸಲಹೆ ಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್ ಮಾತನಾಡಿ, ಮಾನಸಿಕ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಕಳಂಕ ಮತ್ತು ತಾರತಮ್ಯ ಹೋಗಲಾಡಿಸಿ ಜಾಗೃತರಾಗಬೇಕು ಎಂದು ತಿಳಿಸಿದರು.
ಮನೋವೈದ್ಯ ಆರ್. ಡಾ. ಮಂಜುನಾಥ್ ಉಪನ್ಯಾಸ ನೀಡಿ, ಪ್ರತಿ ವರ್ಷ ಒಂದೊಂದು ಘೋಷವಾಕ್ಯದೊಂದಿಗೆ ಮಾನಸಿಕ ಆರೋಗ್ಯ ದಿನಾಚರಣೆ ಆಚರಿಸಲಾಗುತ್ತದೆ ಅದರಂತೆ ಈ ವರ್ಷದ ಘೋಷವಾಕ್ಯ ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು ಆಗಿರುವುದರಿಂದ ಉತ್ತಮ ಗುಣಮಟ್ಟದ ಮಾನಸಿಕ ಆರೋಗ್ಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ಎಲ್ಲರಿಗೂ ಇದೆ. ಮಾನಸಿಕ ಕಾಯಿಲೆಗಳು ಒಟ್ಟಾರೆ ಜನಸಂಖ್ಯೆಯಲ್ಲಿ ಮಾನಸಿಕ ಕಾಯಿಲೆಗೆ 13 ರಷ್ಟು ಒಳಗಾಗುತ್ತಾರೆ. ಇವರೆಲ್ಲರಿಗೂ ಕೂಡ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಉಚಿತ ಸಮಾಲೋಚನೆ ಮತ್ತು ಚಿಕಿತ್ಸೆ ದೊರೆಯುತ್ತದೆ. ಎಲ್ಲಾ ಮಾನಸಿಕ ಕಾಯಿಲೆಗಳಿಗೂ ಔಷಧಿಗಳಿವೆ, ಸಾಮಾನ್ಯಕರವಾದ ಮಾನಸಿಕ ಕಾಯಿಲೆಗಳಾದ ಖಿನ್ನತೆ, ಆತಂಕ, ಗೀಳು, ಮನೋವಿಕೃತಿ ಈ ಲಕ್ಷಣಗಳು ಸಮಾಲೋಚನೆಯಿಂದ ಗುಣಮುಖರಾಗುತ್ತಾರೆಂದು ತಿಳಿಸಿದರು. ತೀವ್ರತರವಾದ ಮಾನಸಿಕ ರೋಗಿಗಳಿಗೆ ಔಷದೋಪಚಾರದ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು.
ಕಾರ್ಯಕ್ರಮದಲ್ಲಿ ಶ್ರೀ ಗುರು ರಾಘವೇಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್. ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಗಂಗಾಧರ್, ವಕೀಲರಾದ ಹನುಮಂತಪ್ಪ, ಪ್ರಾಂಶುಪಾಲ ಡಾ.ಬಸವರಾಜ್, ಗುರು ರಾಘವೇಂದ್ರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ಮೋನಿಕಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ಜಿಲ್ಲೆಯ ಕುಷ್ಟರೋಗ ನಿಯಂತ್ರಣ ಅಧಿಕಾರಿಗಳ ಕಚೇರಿಯ ಆರೋಗ್ಯ ನಿರೀಕ್ಷಕರಾದ ವೈ. ತಿಪ್ಪೇಶ, ಯು.ಕಿರಣ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸಿಬ್ಬಂದಿಗಳಾದ ಟಿ.ಶ್ರೀಧರ, ಎನ್.ಸುನೀತ, ಕೆ.ಎಂ.ರಶ್ಮಿ, ಆರ್.ರೂಪ, ಆರ್.ಅರಣಾಕೀರ್ತಿ, ಟಿ.ಶಿವರಾಜ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *