ಚಿತ್ರದುರ್ಗ ಮಾ.06:
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ಮಾರ್ಚ್ 9ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿತ್ತು. ಆದರೆ ಮಾರ್ಚ್ 8ರಂದು ಶಿವರಾತ್ರಿ ಹಬ್ಬ ಇರುವುದರಿಂದ ಮಾರ್ಚ್ 9ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ ಅದಾಲತ್ನ್ನು ಮಾರ್ಚ್ 16ಕ್ಕೆ ಮುಂದೂಡಲಾಗಿದೆ.
ಮಾರ್ಚ್ 16 ಶನಿವಾರದಂದು ನಡೆಯುವ ಲೋಕ ಅದಾಲತ್ನಲ್ಲಿ ರಾಜಿ ಸಂಧಾನಗಳ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು. ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments