ಮಾರ್ಚ್ 4 ರಂದು ನಗರದಲ್ಲಿ ಫಲಾನುಭವಿಗಳ ಸಮಾವೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ 12 ಲಕ್ಷ ಫಲಾನುಭವಿಗಳು -ಸಚಿವ ಬಿ.ಸಿ.ಪಾಟೀಲ್

by | 25/02/23 | ಸುದ್ದಿ

ಚಿತ್ರದುರ್ಗ.ಫೆ.25:
ಚಿತ್ರದುರ್ಗ ಜಿಲ್ಲೆಯಲ್ಲಿ 5 ಲಕ್ಷ ಕುಟುಂಬಗಳಿವೆ. ಸುಮಾರು 12 ಲಕ್ಷ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಲಾಭ ಪಡೆದಿದ್ದಾರೆ. ಜಿಲ್ಲೆಯ ಪ್ರತಿಯೊಂದು ಕುಟುಂಬದಲ್ಲಿ 2 ರಿಂದ 3 ಜನರು ಸರ್ಕಾರದ ಯಾವುದಾದರು ಒಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ. ಮಾರ್ಚ್ 4 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು 75 ಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಜಿಲ್ಲೆಯಲ್ಲಿ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಆಯೋಜನೆ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಆದೇಶದಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಫಲಾನುಭವಿಗಳ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ ಜರುಗುವ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳುವುದು ವಿಶೇಷವಾಗಿದೆ.
ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ, ಸಮಾವೇಶಕ್ಕೆ ಕರೆ ತರುವ ಹೊಣೆ ಹೊರಬೇಕು. ಈ ಮೂಲಕ ಜನರಲ್ಲಿ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ವಂಚಿತರಾದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಸರ್ಕಾರ ಯೋಜನೆಗಳನ್ನ ಮುಟ್ಟಿಸುವ ಕೆಲಸ ಮಾಡಬೇಕು ಎಂದರು.
ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಬೇಕು. ಫಲಾನುಭವಿಗಳಿಗೆ ಸೂಕ್ತ ಆಸನ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಕಲ್ಪಿಸಬೇಕು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಈಗಾಗಲೆ ಇಲಾಖಾವಾರು ಕರೆತರುವ ಫಲಾನುಭವಿಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದ್ದು, ಕನಿಷ್ಟ 75 ಸಾವಿರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು. ಈ ಎಲ್ಲ ಫಲಾನುಭವಿಗಳನ್ನು ತಪ್ಪದೆ ಸಮಾವೇಶಕ್ಕೆ ಕರೆತರುವ ಹೊಣೆ ಆಯಾ ಇಲಾಖೆ ಅಧಿಕಾರಿಗಳದಾಗಿರುತ್ತದೆ. ಫಲಾನುಭವಿಗಳನ್ನು ಗುರುತಿಸಿ ಕರೆತರುವುದರಿಂದ ಆಯಾ ಇಲಾಖಾ ಅಧಿಕಾರಿಗಳ ಗೌರವವೂ ಹೆಚ್ಚಾಗುತ್ತದೆ. ಸಮಾವೇಶಕ್ಕೆ ಕರೆತರುವ ಫಲಾನುಭವಿಗಳ ಮೇಲ್ವಿಚಾರಣೆಗೆ ಪ್ರತಿ ತಾಲ್ಲೂಕಿಗೆ ಒಬ್ಬರು ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು. ಯಾವುದೇ ಅಧಿಕಾರಿಗಳು ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆತರುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಎಚ್ಚರಿಕೆಯನ್ನೂ ಸಚಿವರು ನೀಡಿದರು.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್ ಸರ್ಕಾರದಿಂದ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತಿದೆ. ಇದರಲ್ಲಿ ಸರ್ಕಾರದ ಜನಪರ ಯೋಜನೆಗಳು ಹಾಗೂ ಸಾಧನೆಗಳ ಕುರಿತು ಜನರಿಗೆ ಸಾರಿ ಹೇಳಲಾಗುವುದು. ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರದ ರೈತ ವಿದ್ಯಾನಿಧಿ, ರೈತ ಶಕ್ತಿ, ರೈತರ ಮಕ್ಕಳಿಗೆ ಕೃಷಿ ವಿವಿಗಳಲ್ಲಿ ಶೇ.50 ರಷ್ಟು ಸ್ಥಾನಗಳನ್ನು ಮೀಸಲಿಡುವ ಬಗ್ಗೆ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚುವ ಬಗ್ಗೆ ಹೇಳಿರಲಿಲ್ಲ. ಆದರೆ ಇವುಗಳೆಲ್ಲವನ್ನು ಸರ್ಕಾರ ಜಾರಿ ಮಾಡಿದೆ ಎಂದರು.
ಗೈರಾದ ಅಧಿಕಾರಿಗಳಿಗೆ ನೋಟಿಸ್:
**********ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದನ್ನು ಗಮನಿಸಿದ ಮಂತ್ರಿಗಳು ಹಾಗೂ ಶಾಸಕರು ಗೈರು ಹಾಜರಿಯನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳಿಗೆ ನೋಟಿಸ್ ನೀಡಿ, ಸಂಬಂದ ಪಟ್ಟ ಇಲಾಖೆ ಮುಖ್ಯಸ್ಥರಿಗೆ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ.ಸಿಇಓ ದಿವಾಕರ.ಎಮ್.ಎಸ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪರುಶುರಾಮ.ಕೆ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page