ಮಾವಿನ ನಿರ್ವಹಣೆಗಾಗಿ ರೈತರಿಗೆ ಸಲಹೆ

by | 27/02/23 | ಸುದ್ದಿ


ಕೊಪ್ಪಳ ಫೆಬ್ರವರಿ 27 : ಹಿಂಗಾರಿನಲ್ಲಿ ಮಾವಿನ ನಿರ್ವಹಣೆ ಕುರಿತು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಿಂದ ಜಿಲ್ಲೆಯ ರೈತರಿಗೆ ಸಲಹೆಗಳನ್ನು ನೀಡಲಾಗಿದೆ.
ಇತ್ತೀಚೆಗೆ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳುಗಳಾದ ಡಾ ಎಂ.ವಿ ರವಿ, ಸಹಾಯಕ ಪ್ರಾಧ್ಯಾಪಕರಾದ ಡಾ ನಾಗೇಶ ಹಾಗೂ ವಾಮನಮೂರ್ತಿ ಪುರೋಹಿತ ಅವರು ಕೊಪ್ಪಳ ತಾಲ್ಲೂಕಿನ ವಿವಿಧ ಮಾವಿನ ತೋಟಗಳಿಗೆ ಭೇಟಿ ನೀಡಿ ಮಾವು ಬೆಳೆಗಾರರಿಗೆ ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ.
ಈಗಿನ ದಿನಗಳಲ್ಲಿ ಬೆಳಗಿನ ತಾಪಮಾನ ಅತೀ ಕಡಿಮೆಯಾಗಿದ್ದು, ಮಧ್ಯಾಹ್ನ ಹೆಚ್ಚಿನ ತಾಪಮಾನದಿಂದ ಕೂಡಿರುತ್ತದೆ. ಇದರಿಂದಾಗಿ ಮಾವಿನಲ್ಲಿ ಅನೇಕ ಕೀಟ-ರೋಗಗಳು ಕಾಣಿಸಿಕೊಂಡಿರುತ್ತವೆ. ಈಗ ಹೂ ಮತ್ತು ಕಾಯಿ ಕಚ್ಚುವ ಹಂತದಲ್ಲಿದ್ದು, ಪ್ರಮುಖ ಕೀಟಗಳಾದ ಜಿಗಿ ಹುಳು, ಜೇಡ ಅಲ್ಲದೇ ಇತರೆ ರಸಹೀರುವ ಕೀಟಗಳು ಕಂಡುಬAದಿರುತ್ತವೆ. ಇದಲ್ಲದೇ, ಅಂಗಮಾರಿ ರೋಗದ ಬಾಧೆ ಅಲ್ಲಲ್ಲಿ ಕಾಣಿಸಿದ್ದು, ಈಚುಗಳು ಉದುರುತ್ತಿವೆ.
ನಿರ್ವಹಣಾ ಕ್ರಮಗಳು : ಮಧ್ಯಾಹ್ನದ ತಾಪಮಾನ ಹೆಚ್ಚಾಗಿರುವುದರಿಂದ ರೈತರು ಮಾವಿನ ಗಿಡಗಳಿಗೆ ನಿಯಮಿತವಾಗಿ ನೀರು ಕೊಡಬೇಕು. ಗಿಡದ ಸುತ್ತಲೂ ಪಾತಿ ಮಾಡಿ ಮಣ್ಣನ್ನು ಸಡಿಲಗೊಳಿಸಿ, ಹನಿ ನೀರಾವರಿ-ಪ್ರತಿ ದಿನ 3 ರಿಂದ 4 ಗಂಟೆಗಳ ಕಾಲ ನೀರುಣಿಸಬೇಕು. ಹರಿ ನೀರಾವರಿ ಇದ್ದಲ್ಲಿ ವಾರದಲ್ಲಿ 2 ಬಾರಿ ಪಾತಿ ತುಂಬುವಂತೆ ನೀರುಣಿಸಬೇಕು.
ಸಿ.ಓ.ಸಿ. ಎಂಬ ರಾಸಾಯನಿಕವನ್ನು 50 ಗ್ರಾಂ ನಷ್ಟು ಒಂದು ಲೀಟರ್ ನೀರಿನಲ್ಲಿ ಬೆರೆಸಿ ನೆಲದಿಂದ 3 ಅಡಿಗಳ ಅಂತರದಲ್ಲಿ ಕಾಂಡಕ್ಕೆ ಲೇಪನ ಮಾಡಬೇಕು. ಇದರಿಂದ ಗೆದ್ದಲು ಹುಳು, ಇನ್ನಿತರೆ ರಸಹೀರುವ ಕೀಟಗಳ ಹತೋಟಿಯಾಗುವುದಲ್ಲದೇ ಹೆಚ್ಚಿನ ತಾಪಮಾನದಿಂದಾಗಿ ಕಾಂಡಕ್ಕೆ ಆಗುವ ಹಾನಿಯನ್ನು ತಡೆಗಟ್ಟಬಹುದಾಗಿದೆ. ಕೆಂಪು ಮಸಾರೆ ಜಮೀನಿನಲ್ಲಿ ಸುಣ್ಣದ ನೀರನ್ನು ಕೊಡುವುದರ ಮೂಲಕ ಅನೇಕ ಕೀಟ ರೋಗ ಬಾಧೆಗಳನ್ನು ತಡೆಗಟ್ಟಬಹುದು.
ಜಿಗಿ ಹುಳು ನಿಯಂತ್ರಣಕ್ಕೆ : ಲ್ಯಾಂಬ್ಡಾಸಹಿಲೋಥ್ರಿನ್ ಶೇಕಡ 5ರ ಕೀಟನಾಶಕವನ್ನು ಅಥವಾ ಬೇವಿನ ಎಣ್ಣೆ 2 ಮಿಲಿ ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಹಾವಳಿ ಕಂಡುಬಂದಲ್ಲಿ ಬುಪ್ರೋಫಿಜಿನ್ 1 ಎಂ.ಎಲ್ ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹಳದಿ ಅಂಟು ಕಾರ್ಡುಗಳನ್ನು ಪ್ರತಿ ಗಿಡಕ್ಕೆ 2 ರಂತೆ ಅಳವಡಿಸಬೇಕು.
ರೋಗದ ಲಕ್ಷಣಗಳು ಕಂಡುಬಂದಲ್ಲಿ ಮೇಲಿನ ಕೀಟನಾಶಕಗಳ ಜೊತೆಗೆ ‘ಸಾಫ್’ ಎನ್ನುವ ಸಂಯುಕ್ತ ಶಿಲೀಂಧ್ರನಾಶಕ-2 ಗ್ರಾಂ ಅಥವಾ ಥಯೋಫಿನೈಟ್ ಮಿಥೈಲ್ ಒಂದು ಗ್ರಾಂ ನ್ನು ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಇದರ ಜೊತೆಗೆ ಮನೆಯಲ್ಲೇ ತಯಾರಿಸಿದ ಹುಳಿ ಮಜ್ಜಿಗೆ ದ್ರಾವಣ (ಗೋ ಕೃಪಾಮೃತ) ವನ್ನು ಕೂಡ ಬಳಸಬಹುದಾಗಿದೆ.
ಮುಂದೆ ಬರುವ ಹಣ್ಣಿನ ನೊಣದ ಬಾಧೆಯ ಹತೋಟಿಗಾಗಿ ಎಕರೆಗೆ 10 ರಂತೆ ಮಿಥೈಲ್ ಯುಜಿನಾಲ್ ದ್ರಾವಣಯುಕ್ತ ಮೋಹಕ ಬಲೆಗಳನ್ನು ಅಳವಡಿಸಬೇಕು. ಓಟೆ ಕೊರಕದ ನಿಯಂತ್ರಣಕ್ಕಾಗಿ ಅಸಿಫೇಟ್ 75 ಎಸ್.ಪಿ. ಅಥವಾ ಡೆಲ್ಟಾಮೆಥ್ರಿನ್ 2.8 ಇ.ಸಿ ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಎಲ್ಲಕ್ಕೂ ಮುಖ್ಯವಾಗಿ ತೋಟವನ್ನು ಕಸ ಮುಕ್ತವಾಗಿಡಬೇಕು.
ಪೋಷಕಾಂಶಗಳ ನಿರ್ವಹಣೆಗಾಗಿ ಮಾವು ಸ್ಪೆಷಲ್ 5 ಗ್ರಾಂ ಮತ್ತು ಪೊಟ್ಯಾಷಿಯಂ ನೈಟ್ರೇಟ್ (13-0-45) ನ್ನು 5 ಗ್ರಾಂ ನಂತೆ ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಮಾವಿನ ಗಿಡಗಳ ಮಧ್ಯೆ ಗಾಳಿ ಮತ್ತು ಬೆಳಕು ಸರಾಗವಾಗಿ ಆಡುವಂತೆ ಗಿಡಗಳನ್ನು ಸವರಬೇಕು. ಎಕರೆಗೆ 4 ರಂತೆ ಜೇನು ಪೆಟ್ಟಿಗೆಗಳನ್ನು ಅಳವಡಿಸುವುದರಿಂದ ಹೆಚ್ಚಿನ ಇಳುವರಿ ಪಡೆಯಬಹುದು. ಜೇನು ಪೆಟ್ಟಿಗಳನ್ನು ಅಳವಡಿಸಿದಾಗ ರಾಸಾಯನಿಕಗಳ ಬಳಕೆ ಮಾಡಬಾರದು.
ಈ ರೀತಿಯಾಗಿ ನಿರ್ವಹಣೆ ಮಾಡುವುದರ ಮೂಲಕ ಉತ್ತಮ ಇಳುವರಿ ಮತ್ತು ಆದಾಯವನ್ನು ಪಡೆಯಬಹುದಾಗಿದೆ ಎಂದು ಕೊಪ್ಪಳ ಕೃಷಿ ವಿಜ್ಞಾನ ಶಿಕ್ಷಣ ಕೇಂದ್ರವು ಮಾಹಿತಿ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳುಗಳಾದ ಡಾ ಎಂ.ವಿ ರವಿ ಮೊಸಂ: 9480696319, ಸಹಾಯಕ ಪ್ರಾಧ್ಯಾಪಕರಾದ ಡಾ ನಾಗೇಶ ಮೊ.ಸಂ: 8971814940, ಸಹಾಯಕ ಪ್ರಾಧ್ಯಾಪಕರಾದ ವಾಮನಮೂರ್ತಿ ಪುರೋಹಿತ ಮೊ.ಸಂ: 9482672039 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page