ಮಾ.02ರಂದು ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಅಳವಡಿಕೆ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿ

by | 29/02/24 | ಕೃಷಿ

ಚಿತ್ರದುರ್ಗ ಫೆ.29:
ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮಾರ್ಚ್ 02ರಂದು ಬೆಳಿಗ್ಗೆ 10.30ಕ್ಕೆ ಹೊಳಲ್ಕೆರೆ ತಾಲ್ಲೂಕಿನ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಅಳವಡಿಕೆ, ಅವುಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಎರಡು ತಂಡಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ಜೈನ್ ಇರೀಗೇಷನ್‍ನ ಬೇಸಾಯ ತಜ್ಞ ಕೆ.ದೇವರಾಜು ಅವರು, ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ ಘಟಕಗಳ ಅಳವಡಿಕೆ, ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ಮಾಡಲಿದ್ದಾರೆ. ನಂತರ ತರಬೇತಿಗೆ ಹಾಜರಾದ ರೈತರನ್ನು ಬಬ್ಬೂರಿನ ಜವಳಿ ಫಾರಂನ ಸಮಗ್ರ ಕೃಷಿ ಪದ್ದತಿ ತಾಕನ್ನು ವೀಕ್ಷಣೆಗೆ ಕರೆದುಕೊಂಡು ಹೋಗಲಾಗುವುದು.
ಆದ ಪ್ರಯುಕ್ತ ಹೊಳಲ್ಕೆರೆ ತಾಲ್ಲೂಕಿನ 100 ಜನ ಆಸಕ್ತ ರೈತ ಭಾಂದವರು ತರಬೇತಿಯಲ್ಲಿ ಭಾಗವಹಿಸಲು ರಜನೀಕಾಂತ. ಆರ್, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಟಿ.ಪಿ.ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931058) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 100 ಜನ ರೈತರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=========

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page