ಚಿತ್ರದುರ್ಗ ಅ.9:
ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತನ್ನು ಯಶಸ್ವಿಯಾಗಿ ನಡೆಸಿ, ಲಸಿಕೆ ವಂಚಿತರಿಗೆ ಲಸಿಕೆ ನೀಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ಇಲ್ಲಿನ ನೆಹರು ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಚೇಳುಗುಡ್ಡ ಮಾರಮ್ಮನ ದೇಗುಲದ ಆವರಣದಲ್ಲಿ ಸೋಮವಾರ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನದ ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲಸಿಕ ವಂಚಿತ ಗರ್ಭಿಣಿಯರು ಮಕ್ಕಳಿಗೆ ಲಸಿಕೆ ನೀಡಿ, ಜಿಲ್ಲೆಯ ಎಲ್ಲಾ ಗರ್ಭಿಣಿಯರಿಗೆ ಎಲ್ಲ ಮಕ್ಕಳಿಗೆ ಶೇ.100ರಷ್ಟು 12 ಮಾರಕ ರೋಗಗಳ ವಿರುದ್ಧ ಲಸಿಕೆಯನ್ನು ತಪ್ಪದೆ ನೀಡಿ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತು ಯಶಸ್ವಿಯಾಗಿ ನಡೆಸಿ ಎಂದರು.
ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ ಮಾತನಾಡಿ, ಜಿಲ್ಲೆಯಲ್ಲಿ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತು ಕುರಿತಂತೆ ಮನೆ ಮನೆ ಸಮೀಕ್ಷೆ ನಡೆಸಿ ಕ್ರಿಯಾಯೋಜನೆ ತಯಾರಿಸಲಾಗಿದೆ. ಈ ಬಗ್ಗೆ ಜಿಲ್ಲಾ ಹಂತದಲ್ಲಿ ಹಾಗೂ ತಾಲ್ಲೂಕು ಹಂತದಲ್ಲಿ ತರಬೇತಿ ನೀಡಲಾಗಿದೆ. ಸೂಕ್ಷ್ಮ ಕ್ರಿಯಾ ಯೋಜನೆಯಂತೆ 825 ಗರ್ಭಿಣಿಯರು, 3416 ಮಂದಿ ಎರಡು ವರ್ಷದ ಒಳಗಿನ ಮಕ್ಕಳು, 620 ಮಂದಿ 2 ರಿಂದ 5 ವರ್ಷದ ಮಕ್ಕಳ ಗುರಿ ಹೊಂದಲಾಗಿದೆ ಎಂದರು.
ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮವು ಇದೇ ಅಕ್ಟೋಬರ್ 9 ರಿಂದ 14 ರವರೆಗೆ ಆರು ದಿನಗಳ ಕಾಲ ಲಸಿಕೆ ನೀಡಲಾಗುವುದು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ತಾಲ್ಲೂಕಿನಲ್ಲಿ ಇಂದು 28 ಲಸಿಕಾ ಸತ್ರಗಳು ಏಕಕಾಲದಲ್ಲಿ ನಡೆಯಲಿವೆ. ಫಲಾನುಭವಿ ಮಕ್ಕಳ ಮತ್ತು ಗರ್ಭಿಣಿಯರ ಲಸಿಕೆ ಪಡೆದ ದಾಖಲಾತಿಗಳನ್ನು ಯೂವಿನ್ ಪೋರ್ಟಲ್‍ನಲ್ಲಿ ದಾಖಲಿಸಲಾಗುತ್ತದೆ. ಎಲ್ಲರೂ ತಪ್ಪದೇ ನಿಮ್ಮ ಮಕ್ಕಳಿಗೆ ಲಸಿಕೆ ಕೊಡಿಸಿ ಎಂದರು.
ಕಾರ್ಯಕ್ರಮದಲ್ಲಿ ನೆಹರು ನಗರ ಆರೋಗ್ಯ ಕೇಂದ್ರದ ಡಾ.ರಾಹುಲ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ಗೋಪಿ, ಪುನೀತ್, ಆರೋಗ್ಯ ಸುರಕ್ಷತಾ ಅಧಿಕಾರಿ ಅರುಂಧತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಫಲಾನುಭವಿ ಮಕ್ಕಳು ಗರ್ಭಿಣಿಯರು ಇದ್ದರು.
ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತು ಯಶಸ್ವಿಗೊಳಿಸಿ ಲಸಿಕೆ ವಂಚಿತರಿಗೆ ಲಸಿಕೆ ನೀಡಿ -ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments