ಹಿರಿಯೂರು :
ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಂದು ಮನೆಗೂ ಕೊಳಾಯಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಪ್ರತಿಯೊಂದು ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ, ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಮುಂಗಸವಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ, 58.40ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ 332 ಮನೆಗಳಿಗೆ ಕೊಳಾಯಿ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮುಂಗಸವಳ್ಳಿ ಗ್ರಾಮದಲ್ಲಿ 58.40ಲಕ್ಷ ರೂ. ವೆಚ್ಚದಕಾಮಗಾರಿಗೆ ಶಂಕುಸ್ಥಾಪನೆಯನ್ನ ನೆರವೇರಿಸಿದ ಚಿತ್ರದುರ್ಗಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments