ಮುಂಗಾರು ಸಂದರ್ಭ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿವಿಕೋಪಗಳ ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಜ್ಜಾಗಲು ಡಿಸಿ ಟಿ.ವೆಂಕಟೇಶ್ ಸೂಚನೆ

by | 10/05/24 | ಸುದ್ದಿ


ಚಿತ್ರದುರ್ಗ:
ಸದ್ಯದಲ್ಲೇ ಆರಂಭವಾಗಲಿರುವ ಮುಂಗಾರಿನ ಸಂದರ್ಭ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸೂಕ್ತವಾದ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಜ್ಜಾಗುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ವಿಪ್ಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ ಸಂಭವಿಸಬಹುದಾದ ಅನಾಹುತಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ ಎಂಬುದಾಗಿ ತಿಳಿಸಿದರು.
ಕಂದಾಯ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಣ್ಣ ಮತ್ತು ಭಾರಿ ನೀರಾವರಿ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ,ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಸಂಭಾವ್ಯ ಅವಗಡಗಳ ನಿಯಂತ್ರಣಕ್ಕೆ ಸಿದ್ದರಾಗಿರಬೇಕು ಎಂದರಲ್ಲದೆ,
ಚರಂಡಿಗಳಲ್ಲಿರುವ ಕಸ ತೆರವುಗೊಳಿಸಿ, ಮಳೆ ನೀರಿನ ಸರಾಗ ಹರಿವಿಗೆ ಕ್ರಮ ವಹಿಸಬೇಕು ಹಾಗೂ ಸ್ವಚ್ಚತೆಗೆ ಹೆಚ್ಚು ಪ್ರಾಶಸ್ತ್ಯ ನೀಡುವ ಮೂಲಕ ಸಾಂಕ್ರಾಮಿಕ ರೋಗಗಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಅವರು ಸೂಚಿಸಿದರು.
ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ 2 ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ತಲಾ ಒಂದು ಸಹಾಯವಾಣಿ ಕೇಂದ್ರ ಆರಂಭಿಸಬೇಕು. ದಿನದ 24 ಗಂಟೆ ಈ ಕೇಂದ್ರಗಳು ಕಾರ್ಯನಿರ್ವಹಿಸಬೇಕು ಎಂಬುದಾಗಿ ಅವರು ಸೂಚಿಸಿದರು.
ಅಗತ್ಯವಿದ್ದಲ್ಲಿ ಅವಗಡ ಸಂಭವಿಸಿದ ತಾಲ್ಲೂಕುಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರ ತೆರೆಯಲು ಹಾಗೂ ಕಾಳಜಿ ಕೇಂದ್ರಗಳ ಸ್ಥಾಪನೆ.ಅಗತ್ಯ ವೈದ್ಯಕೀಯ ಸೌಲಭ್ಯದೊಂದಿಗೆ ಸಂತ್ರಸ್ಥರಿಗೆ ಉಟೋಪಹಾರ, ಆರ್ಥಿಕ ನೆರವು, ಪಡಿತರ ವಿತರಿಸಲು ಜಿಲ್ಲಾಡಳಿತ ಸಿದ್ದವಿದೆ ಎಂಬುದಾಗಿ ಅವರು ತಿಳಿಸಿದರು.
ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಸಕಾಲದಲ್ಲಿ ರಸಗೊಬ್ಬರ ಪೂರೈಸಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್, ಎಎಸ್ ಪಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page