ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಣತೊಡಬೇಕು ಎಂದು ಮುಖಂಡ ಬಂಡೆಕಪಿಲೆ ಓಬಣ್ಣ

by | 23/03/23 | ರಾಜಕೀಯ

ಚಳ್ಳಕೆರೆ.ಜನಧ್ವನಿ ವಾರ್ತೆ ಮಾ.23
ಹೇಳಿದರು.
ಪಟ್ಟಣದ ಯಾತ್ರಿ ನಿವಾಸದಲ್ಲಿ ಗುರುವಾರ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಪಕ್ಷವು ಅಧಿಕಾರ ಕಳೆದುಕೊಂಡು ೧೦ವರ್ಷಗಳಾಗಿವೆ. ಈಗಾಗಲೇ ಹಲವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಯೋಗೀಶ್‌ಬಾಬು, ಉಗ್ರಪ್ಪನವರ ಹೆಸರು ಮುಂಚೂಣಿಯಲ್ಲಿದ್ದು, ಈ ಮಧ್ಯೆ ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಕಾಂಗ್ರೆಸ್‌ಗೆ ಬರತುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾರೇ ಬಂದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟಿತವಾಗಬೇಕಿದೆ ಎಂದರು.
ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಜಿ.ಬಿ.ಮುದಿಯಪ್ಪ ಮಾತನಾಡಿ “ಪ್ರತಿ ಚುನಾವಣೆಯ ಸಮಯದಲ್ಲಿ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಮ್ಯಾಸನಾಯಕ ಮತ್ತು ಊರುನಾಯಕ ಎಂಬ ಜಾತಿಭೇದವನ್ನು ಹುಟ್ಟಿಹಾಕುವ ಪರಿಪಾಠವನ್ನು ಕೆಲ ರಾಜಕಾರಿಣಿಗಳು ರೂಢಿಸಿಕೊಂಡಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಮ್ಯಾಸನಾಯಕರಿಗೆ ಟಿಕೆಟ್ ನೀಡಿ ಎಂಬ ಕ್ರಮ ಅವೈಜ್ಞಾನಿಕ. ಇದು ಜಾತಿಗಳ ಮಧ್ಯೆ ವಿಷಭೀಜವನ್ನು ಬಿತ್ತುವ ನಡೆಯಾಗಿದೆ. ಇದರಿಂದ ಕ್ಷೇತ್ರದ ಬಹುಸಂಖ್ಯಾತ ಜನಸಮುದಾಯವನ್ನು ವಿಭಜಿಸುವ ಹುನ್ನಾರ ನಡೆಯುತ್ತಿದೆ. ಇದರಿಂದ ಜನರು ಎಚ್ಚೆತ್ತುಕೊಳ್ಳಬೇಕು. ಹಾಗೂ ರಾಜಕೀಯ ನಾಯಕರು ಇಂತಹ ಸಂಗತಿಗಳನ್ನು ಕೈಬಿಡಬೇಕು” ಎಂದರು.
“ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಯಾರಿಗೆ ಟಿಕೆಟ್ ದೊರೆಯುತ್ತಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಕಾಂಗ್ರೆಸ್ ಪಾಳೆಯದಲ್ಲಿ ಪಕ್ಷಕ್ಕಿಂತ ವ್ಯಕ್ತಿ ಪೂಜೆ ನಡೆಯುತ್ತಿದೆ. ಹಾಗಾಗಿ ಪಕ್ಷದ ವರಿಷ್ಠರು ಯಾರಿಗೇ ಟಿಕೆಟ್ ನೀಡಿದರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಪ.ಪ. ಮಾಜಿ ಸದಸ್ಯ ಟಿ.ಬಸಣ್ಣ ಹೇಳಿದರು.
ಇದಕ್ಕೂ ಮೊದಲು ಮುಖಂಡ ನೇರಲಗುಂಟೆ ಸೂರಯ್ಯ ಮಾತನಾಡಿ, “ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ನಿAದ ಎಲ್ಲ ವಿಷಯದಲ್ಲೂ ಸಮರ್ಥ ರಾಜಕೀಯ ಧುರೀಣ ವಿ.ಎಸ್.ಉಗ್ರಪ್ಪ. ಅವರಿಗೆ ಪಕ್ಷವು ಟಿಕೆಟ್ ನೀಡಿದರೆ ಕ್ಷೇತ್ರ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದಾಗ ಸಭೆಯಲ್ಲಿ ಕೆಲಕಾಲ ಗೊಂದಲ ಉಂಟಾಯಿತು. ನಂತರ ಸಭೆಯಲ್ಲಿ ಪಕ್ಷದ ಒಗ್ಗಟಿನ ಮಂತ್ರಜಪಿಸಿ ಕಾರ್ಯಕರ್ತರ ಸಭೆಯನ್ನು ಮುಕ್ತಾಯಗೊಳಿಸಿದರು.
ಸಭೆಯಲ್ಲಿ ತಾ.ಪಂ.ಮಾಜಿ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಮಾಜಿಸದಸ್ಯ ತಿಪ್ಪೇಸ್ವಾಮಿ(ಜಂಭಣ್ಣ), ಗ್ರಾ.ಪಂ.ಉಪಾಧ್ಯಕ್ಷ ಬಿ.ಕಾಟಯ್ಯ, ಮುಖಂಡರಾದ ಜಿ.ಎಸ್.ಪ್ರಭುಸ್ವಾಮಿ, ಚಂದ್ರಣ್ಣ, ಬಿ.ಆರ್.ತಿಮ್ಮಾರೆಡ್ಡಿ, ಚನ್ನಪ್ಪ, ಕೆ.ಪಿ.ತಿಪ್ಪೇಸ್ವಾಮಿ, ದುರುಗಪ್ಪ, ತಿಪ್ಪೇಶ್, ಪ್ರಕಾಶ್, ಪಿ.ಓಬಯ್ಯ, ಮೊಹಮೂದ್ ಅವರೂ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page