ಮುಖ್ಯಮಂತ್ರಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

by | 11/12/23 | ಸುದ್ದಿ


ಬೆಂಗಳೂರು ಡಿ.11 ಮುಖ್ಯಮಂತ್ರಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಿತ್ತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ.

ಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ ಈಡಿಗ ಸಮಾಜಕ್ಕೆ ಏನು ಅಗತ್ಯ ಎಂದು ಪ್ರಸ್ತಾಪ ಮಾಡಿದ್ದಾರೆ. ಅನೇಕ ಒತ್ತಾಯ – ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ.

1995 ರಲ್ಲಿ ನಾನು ಹಣಕಾಸಿನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಸಮಾವೇಶ ನಡೆದಿತ್ತು. ಅಂದು ಕೂಡ ಅರ್ಥಪೂರ್ಣವಾಗಿ ಆಚರಿಸಿದ್ದರು. ಅಂದಿನ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗವಹಿಸಿದ್ದರು. ಅಂದೂ ಕೂಡ ಬೇಡಿಕೆಗಳನ್ನು ಈಡೇರಿಸಲಾಗಿತ್ತು.

ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರ ಮಾಡಬೇಕೆಂದು ಒತ್ತಾಯ ಮಾಡಿದ್ದ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸುವಂತೆ ತೀರ್ಮಾನ ಮಾಡಲಾಯಿತು.
ನಾರಾಯಣ ಗುರುಗಳ ಮಾರ್ಗದರ್ಶನ ಅವಶ್ಯ , ಅವರ ವಿಚಾರಗಳು, ಇಂದಿಗೂ, ಎಂದೆಂದಿಗೂ ಪ್ರಸ್ತುತ. ಕೇರಳದಲ್ಲಿ ಅವಮಾನಗಳನ್ನು ಸಹಿಸಿ ಅದರ ವಿರುದ್ಧ ಸಾತ್ವಿಕ ಕೋಪವಿದ್ದರೂ ಸಹಿಸಿ ಜನರ ಸಂಘಟನೆ ಮಾಡಿ, ಜಾಗೃತಿ ಮೂಡಿಸಲು, ಬದಲಾವಣೆ ತರಲು ಇಡೀ ಬದುಕನ್ನು ಮುಡಿ ಪಾಗಿಟ್ಟರು. ಆರ್ಥಿಕವಾಗಿ, ಸಾಮಾಜಿಕವಾಗಿ ವಂಚಿತರಾಗಿರುವ ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದರು. ಮನುಷ್ಯರೆಲ್ಲರೂ ಒಂದೇ, ಜಾತಿ, ಒಂದೇ ಮತ, ಒಂದೇ ದೇವರು ಎಂದು ಹೇಳಿದ್ದರು. ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆ ಮಾಡಿಕೊಂಡಿರುವವರು ನಾವು. ಜಾತಿ ಹೇಳಬೇಡ, ಜಾತಿ ಕೇಳಬೇಡಿ ಹಾಗೂ ಜಾತಿ ನೋಡಬೇಡ ಎಂದು ನಾರಾಯಣ ಗುರುಗಳು ಹೇಳಿದ್ದರು.

ದೇವಸ್ಥಾನದೊಳಗೆ ದೇವರ ದರ್ಶನ ಮಾಡಲು ಶೂದ್ರರಿಗೆ ಅವಕಾಶವಿರಲಿಲ್ಲ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ದೇವರು ಯಾರ ಸ್ವತ್ತಲ್ಲ. ಹಾಗಾಗಿ ನೀವೇ ದೇವಸ್ಥಾನಗಳನ್ನು ಕಟ್ಟಿ ಎಂದು ಕರೆ ನೀಡಿದ್ದರು. ಕೇರಳ, ಕರಾವಳಿಯಲ್ಲಿ ಅನೇಕ ದೇವಸ್ಥಾನ ಕಟ್ಟಿದ್ದರು. ಈಡಿಗರು, ಬಿಲ್ಲವರೇ ಈ ದೇವಾಲಯದ ಪೂಜಾರಿಗಳಾದರು. ಕುವೆಂಪು ಹೇಳಿದಂತೆ ಹುಟ್ಟುವಾಗ ವಿಶ್ವಮಾನವರಾಗಿರುವ ಮನುಷ್ಯರು ನಂತರ ಅಲ್ಪಮಾನವರಾಗುತ್ತಾರೆ. ವಿಶ್ವಮಾನವನಾಗುವ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು.

ನಾರಾಯಣ ಗುರುಗಳು ವಿಶ್ವ ಮಾನವರಾಗಿದ್ದರು. ಜಾತಿ, ಧರ್ಮಗಳನ್ನು ಮೀರಿ ಬೆಳೆದವರ ಪರಂಪರೆಯಲ್ಲಿ ಕನಕದಾಸರು, ಬುದ್ಧ, ಬಸವ, ಅಂಬೇಡ್ಕರ್, ನಾರಾಯಣ ಗುರುಗಳು ಸೇರುತ್ತಾರೆ. ಮಾನವ ಸಮಾಜ ನಿರ್ಮಾಣವಾಗಬೇಕೆಂಬ ಕನಸು ಕಂಡಿದ್ದರು. ಮಾನವರು ಒಂದೇ ಜಾತಿ ಎಂದು ಸಾರಿದ್ದರು. ದಯೆಯೇ ಧರ್ಮದ ಮೂಲ ಎಂದರು. ಈ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು. ಅಂಬೇಡ್ಕರ್ ಅವರು ಹೇಳುವಂತೆ ಶಿಕ್ಷಣ, ಸಂಘಟನೆ, ಹೋರಾಟವನ್ನು ಅವಕಾಶ ವಂಚಿತರು ಮಾಡಬೇಕು.

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಶತಮಾನಗಳ ಕಾಲ ಹಿಂದುಳಿದ, ಶೂದ್ರ ವರ್ಗ ಶಿಕ್ಷಣ ಸಂಸ್ಕೃತಿಯಿಂದ ವಂಚಿತವಾಗಿತ್ತು. ಜಾತಿ ವ್ಯವಸ್ಥೆಯಲ್ಲಿ ಚಲನೆಯಿಲ್ಲ. ಆರ್ಥಿಕ ಹಾಗೂ ಸಾಮಾಜಿಕ ಚಲನೆಯಿಲ್ಲದ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ. ಇದಕ್ಕಾಗಿ ಶಿಕ್ಷಣ ಬಹಳ ಮುಖ್ಯ. ನಾರಾಯಣ ಗುರುಗಳು ಶಿಕ್ಷಣಕ್ಕೆ ಒತ್ತು ನೀಡಿದ್ದರು. ಶಿಕ್ಷಣದಿಂದ ತುಳಿತಕ್ಕೊಳಗಾದವರು ಸ್ವಾಭಿಮಾನಿ, ಸಶಕ್ತರಾಗಿ ಜೀವನ ನಡೆಸಲು ಸಾಧ್ಯ. ಆದರೆ ವೈಚಾರಿಕ ಚಿಂತನೆಯ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಎಲ್ಲ ಮಹನೀಯರ ಆಶಯದಂತೆ ಸಮಾಜದಲ್ಲಿ ಸಮಾನತೆ ಬರಬೇಕು. ಶಿಕ್ಷಣದ ಮೂಲಕ ಆರ್ಥಿಕ, ಸಾಮಾಜಿಕ ಬದಲಾವಣೆ ಬರಬೇಕು.

1856 ರಲ್ಲಿ ಹುಟ್ಟಿದ ನಾರಾಯಣ ಗುರುಗಳು ಸಣ್ಣ ವಯಸ್ಸಿನಲ್ಲಿ ಅನೇಕ ಅವಮಾನಗಳನ್ನು ಅನುಭವಿಸಿ, ಸಮಾಜದ ಸುಧಾರಣೆಗಾಗಿ ಸಮಾಜದ ಪರಿವರ್ತಕರಾದರು. ಸಮಾಜದಲ್ಲಿನ ಅಸಮಾನತೆಯಿಂದ ನೊಂದ ಜನ ಪ್ರಜಾಪ್ರಭುತ್ವದ ಸೌಧವನ್ನು ನಾಶ ಮಾಡುವ ಸಾಧ್ಯತೆಯಿದೆಯೆಂದು ಡಾ.ಅಂಬೇಡ್ಕರ್ ಅವರು ಎಚ್ಚರಿಕೆ ನೀಡಿದ್ದರು. ಸಮಾಜದಲ್ಲಿ ಬದಲಾವಣೆ ತರಲು ಸರ್ಕಾರ ಪ್ರಯತ್ನಿಸುವ ಹಾದಿಯಲ್ಲಿದೆ.

ದೊಡ್ಡ ಇತಿಹಾಸವಿರುವ ಈಡಿಗ ಸಮುದಾಯ ಹೆಮ್ಮೆ ಪಡಬೇಕು. ಸಮುದಾಯದವರು ಸಮಾಜ ಸುಧಾರಕರು ನುಡಿದ ದಾರಿಯಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಸಂಘಟನೆ ಬಹಳ ಮುಖ್ಯ. ಸಂವಿಧಾನ ನೀಡಿದ ಹಕ್ಕುಗಳನ್ನು ಪಡೆದುಕೊಳ್ಳಲು ಜಾಗೃತರಾಗಬೇಕು. ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಚಿಂತನೆ ನಡೆಸಲು ಇಂತಹ ಸಮಾವೇಶಗಳು ಅತ್ಯವಶ್ಯ. ಸಮಾಜದಿಂದಾಗಿ ಏಳಿಗೆ ಹೊಂದಿದವರು ಸಮಾಜದ ಋಣವನ್ನು ತೀರಿಸಬೇಕು.
#NarayanaGuru

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page