ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್

by | 25/02/23 | Uncategorized

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.25
ಕೃಷಿ ಇಲಾಖೆಯಿಂದ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ಮನವಿ ಮಾಡಿದ್ದಾರೆ.
ರಾಜ್ಯದ ಎಲ್ಲ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಾರ್ಯಕ್ರಮದಡಿ ಕೃಷಿ ಇಲಾಖೆಯಿಂದ 2500 ರೂ. ಗಳಿಂದ 11000 ರೂ. ಗಳವರೆಗೆ ವಾರ್ಷಿಕ ಶಿಷ್ಯವೇತನವನ್ನು ಅರ್ಹ ಮಕ್ಕಳ ಬ್ಯಾಂಕ್‍ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಪದ್ದತಿಯಲ್ಲಿ ಜಮೆ ಮಾಡಲಾಗುತ್ತಿದೆ. ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನ ಪಡೆಯಲು FID without land ಹಾಗೂ ನರೇಗಾ ಗುರುತಿನ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
08 ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿನಿಯರಿಗೆ ಮಾತ್ರ ವಾರ್ಷಿಕ 2000 ರೂ. ವಾರ್ಷಿಕ ಶಿಷ್ಯ ವೇತನ ನೀಡಲಾಗುವುದು. ಪಿಯುಸಿ, ಐಟಿಐ, ಡಿಪ್ಲೋಮಾ ಮುಂತಾದ ಪದವಿಗೂ ಮುನ್ನ ಪಡೆಯುವ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ರೂ. 2500 ಹಾಗೂ ವಿದ್ಯಾರ್ಥಿನಿಯರಿಗೆ ರೂ. 3000. ಬಿಎ, ಬಿಎಸ್‍ಸಿ, ಬಿಕಾಂ ಮುಂತಾದ ಪದವಿ ವ್ಯಾಸಂಗ ಮಾಡುವ (ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ ರೂ. 5000, ವಿದ್ಯಾರ್ಥಿನಿಯರಿಗೆ ರೂ. 5500. ಎಲ್.ಎಲ್.ಬಿ, ಪ್ಯಾರಾಮೆಡಿಕಲ್, ಬಿ.ಫಾರ್ಮ್, ನರ್ಸರಿ ಇತ್ಯಾದಿ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ. 7500, ವಿದ್ಯಾರ್ಥಿನಿಯರಿಗೆ ರೂ. 8000. ಎಂ.ಬಿ.ಬಿ.ಎಸ್ / ಬಿ.ಇ / ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ. 10,000, ವಿದ್ಯಾರ್ಥಿನಿಯರಿಗೆ ರೂ. 11,000 ಗಳ ವಾರ್ಷಿಕ ಶಿಷ್ಯ ವೇತನ ನೀಡಲಾಗುವುದು. ಈ ಯೋಜನೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.
ಸಂಬಂಧಪಟ್ಟ ಪ್ರೌಢಶಿಕ್ಷಣ ವಿದ್ಯಾರ್ಥಿನಿಯರು, ಪದವಿ ಪೂರ್ವ, ಡಿಪ್ಲೋಮಾ, ಪದವಿ, ಇತ್ಯಾದಿ ವೃತ್ತಿಪರ ಕೋರ್ಸ್‍ಗಳು ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಸ್ಟೂಡೆಂಟ್ಸ್ ಸ್ಕಾಲರ್‍ಶಿಪ್ ಪೋರ್ಟಲ್ ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು https://ssp.karnataka.gov.in/ssp2223/homeNew.aspx, ಹಾಗೂ ಮೆಟ್ರಿಕ್ ನಂತರದ ಎಲ್ಲ ವಿದ್ಯಾರ್ಥಿಗಳು https://ssp.postmatric.karnataka.gov.in/homepage.aspx ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ಅಧಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share Post

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page