ಮುರುಘಾ ಶ್ರೀ ವಿರುದ್ಧದ ಪೊಕ್ಸೊ ಪ್ರಕರಣ: ಓರ್ವ ಆರೋಪಿಗೆ ಷರತ್ತುಬದ್ಧ ಜಾಮೀನು

by | 13/10/23 | ಕಾನೂನು


ಬೆಂಗಳೂರು : ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೊಕ್ಸೊ ಮತ್ತು ಎಸ್-ಎಸ್ಟಿ ದೌರ್ಜನ್ಯ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಪರಮಶಿವಯ್ಯಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಮಂಜೂರು ಮಾಡಿದೆ.ಪರಮಶಿವಯ್ಯ ಜಾಮೀನು ಕೋರಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದ.ಇದರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

ಅರ್ಜಿದಾರ 2 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಭದ್ರತೆ ನೀಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *