ಮೈಸೂರು ; ಮೈಸೂರು ನಗರದ ನಾಲ್ಕು ಮಂದಿ ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸತೀಶ್ ಗೆ 6 ತಿಂಗಳ ಅವಧಿಯವರೆಗೆ ಚಾಮರಾಜನಗರ ಜಿಲ್ಲೆಗೆ,ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಧುಸೂಧನ್.@.ಪಾರ್ಟಿ ಗೆ 6 ತಿಂಗಳ ಅವಧಿಯವರೆಗೆ ಹಾಸನ ಜಿಲ್ಲೆಗೆ,ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮಂಜುನಾಥ್.@.ಗೆಂಡೆ ಮಂಜ ಗೆ 6 ತಿಂಗಳ ಕಾಲ ಕೊಡಗು ಜಿಲ್ಲೆಗೆ ಹಾಗೂ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕುಮಾರ.@.ಕಪಾಲಿ ಗೆ 6 ತಿಂಗಳ ಕಾಲ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.
ಸದರಿ ರೌಡಿ ಶೀಟರ್ ಗಳ ಮೇಲೆ ರೌಡಿ ಹಾಳೆ ತೆಗೆದಿದ್ದರೂ ಮೈಸೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನಲೆ ಆಯುಕ್ತರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಸಮಾಜದ ಸ್ವಾಸ್ಥ್ಯ ಕದಡುವುದು,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು,ಗೂಂಡಾ ವರ್ತನೆ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಹಿನ್ನಲೆ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.
ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆ ತರುವ ಸಂಭವ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮುಂದಿನ 6 ತಿಂಗಳ ಕಾಲ ನಾಲ್ವರು ರೌಡಿ ಶೀಟರ್ ಗಳಿಗೂ ಮೈಸೂರು ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.
0 Comments