ಮೊಬೈಲ್ ಕೊಡಿಸಲ್ಲ ಎಂಬ ಕಾರಕ್ಕೆ ಯುವಕ ಆತ್ಮಹತ್ಯೆ.

by | 20/10/23 | ಕ್ರೈಂ

ಹೊಳಲ್ಕೆರೆ ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲಗಲಿ ನಡೆದಿದೆ.

ಕೊಳಾಳ್ ಗ್ರಾಮದ ಯಶವಂತ್ ಮೃತ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದ. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದ. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು.

ಹಠ ಹಿಡಿದರೂ ತಕ್ಷಣಕ್ಕೆ ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಅಕ್ಟೋಬರ್ 18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ವಿಷಯ ತಿಳಿದು ಸಂಬಂಧಿಕರು ಕೂಡಲೇ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದರು. ಗುರುವಾರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *