ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ ೫ವರ್ಷಗಳಿಂದ ಸರ್ಕಾರಿ ಸೌಲಭ್ಯಗಳನ್ನು ಲೂಟಿ ಮಾಡಿದ ಹೆಗ್ಗಳಿಕೆ ಶ್ರೀರಾಮುಲು ಮತ್ತು ಅವರ ತಂಡಕ್ಕೆ ಸಲ್ಲುತ್ತದೆ. ಹಾಗಾಗಿ ಕ್ಷೇತ್ರದ ನೊಂದ ಬಡಜನರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ವ್ಯಕ್ತಿಗೆ ನಮ್ಮ ಬೆಂಬಲವಿಲ್ಲ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ.ನಾಗಿರೆಡ್ಡಿ

by | 05/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ 5
ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ ೫ವರ್ಷಗಳಿಂದ ಸರ್ಕಾರಿ ಸೌಲಭ್ಯಗಳನ್ನು ಲೂಟಿ ಮಾಡಿದ ಹೆಗ್ಗಳಿಕೆ ಶ್ರೀರಾಮುಲು ಮತ್ತು ಅವರ ತಂಡಕ್ಕೆ ಸಲ್ಲುತ್ತದೆ. ಹಾಗಾಗಿ ಕ್ಷೇತ್ರದ ನೊಂದ ಬಡಜನರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ವ್ಯಕ್ತಿಗೆ ನಮ್ಮ ಬೆಂಬಲವಿಲ್ಲ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ.ನಾಗಿರೆಡ್ಡಿ ಹೇಳಿದರು.
ಚಳ್ಳಕೆರೆ ತಾಲೂಕೀನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯನಹಟ್ಟಿ ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮತನಾಡಿದರು.
ಶ್ರೀರಾಮುಲು ಪರಿಶಿಷ್ಟ ಪಂಗಡದ ರಾಜ್ಯ ನಾಯಕ. ಅವರಿಂದ ಹಿಂದುಳಿದ ಮೊಳಕಾಲ್ಮುರು ಕ್ಷೇತ್ರದ ಅಭಿವೃದ್ಧಿಯಾಗುತ್ತದೆ ಎಂಬ ದೂರದೃಷ್ಠಿಯಿಂದ ಅವರನ್ನು ಕಳೆದ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರಕ್ಕೆ ಕರೆ ತರಲಾಯಿತು. ಆದರೆ ಕೆಲವೇ ತಿಂಗಳಲ್ಲಿ ಅವರ ನೈಜವಾದ ಗುಣ ನಮಗೆ ಅರ್ಥವಾಯಿತು. ಹಲವು ಆಪ್ತ ಸಹಾಯಕರನ್ನು ನೇಮಿಸಿಕೊಂಡು ರೈತರು, ನಿರ್ಗತಿಕರು, ವಸತಿ ರಹಿತರು ಸೇರಿದಂತೆ ದೀನದಲಿತರ ಹಲವು ಸರ್ಕಾರಿ ಸೌಲಭ್ಯಗಳು ಲೂಟಿ ಮಾಡಿದರು. ಕ್ಷೇತ್ರದಲ್ಲಿ ಶಿಕ್ಷಣ, ಸಾರಿಗೆ , ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಲ್ಲಿ ೧೦ವರ್ಷಗಳಷ್ಟು ಹಿಂದುಳಿದ ಪರಿಸ್ಥಿತಿ ತಲೆದೋರಿದೆ. ಇವರ ಈ ನಡೆಗೆ ಕ್ಷೇತ್ರದ ಜನರು ರೋಸಿಹೋಗಿದ್ದರು. ಇದರಿಂದ ಸೋಲಿನ ಭಯದಿಂದ ಕ್ಷೇತ್ರವನ್ನು ಬಿಟ್ಟುಹೋಗುವ ತೀರ್ಮಾನ ಮಾಡಿದರು.
ಕಳೆದ ಚುನಾವಣೆಯಲ್ಲಿ ಶ್ರೀರಾಮುಲು ಅವರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ ಪರಿಣಾಮವಾದ ಅವರಿಂದ ನಾಯಕನಹಟ್ಟಿ ಒಳಮಠದ ಮುಂಭಾಗದಲ್ಲಿ ಇಟ್ಟಿಗೆ ಕಲ್ಲುಗಳಿಂದ ಒದೆಯನ್ನೂ ಸಹ ತಿಂದರು. ನಂತರ ೫ವರ್ಷಗಳ ಕಾಲ ಶತ್ರುಗಳ ರೀತಿ ಇಬ್ಬರೂ ಹಗೆಯನ್ನು ಸಾಧಿಸಿಕೊಂಡು ಬಂದಿದ್ದರು. ಆದರೆ ಏಕಾಏಕಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಶ್ರೀರಾಮುಲು ಮತ್ತೊಮ್ಮೆ ಮೊಳಕಾಲ್ಮುರು ಕ್ಷೇತ್ರದಲ್ಲಿ ತನ್ನ ಹಿಡಿತ ಸಾಧಿಸಲು ಯೋಜನೆ ರೂಪಿಸಿದ್ದಾರೆ. ಹಾಗಾಗಿ ಶ್ರೀರಾಮುಲು ಅವರು ಸೂಚಿಸಿದ ವ್ಯಕ್ತಿಗೆ ನಮ್ಮ ಬೆಂಬಲವಿಲ್ಲ. ಅದಾಗ್ಯೂ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ದೊರೆತರೆ ಕ್ಷೇತ್ರದಲ್ಲಿ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯನ್ನು ನಿಲ್ಲಿಸುವುದು ಖಚಿತ ಎಂದರು.
ಬಿಜೆಪಿ ಮುಖಂಡ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಮಾತನಾಡಿ, “ಕಳೆದ ಚುನಾವಣೆಯಲ್ಲಿ ಶ್ರೀರಾಮುಯಲು ವಿರುದ್ಧ ತೊಡೆತಟ್ಟಿದ್ದ ಮಾಜಿ ಎಸ್.ತಿಪ್ಪೇಸ್ವಾಮಿಯವರು ಕಾಂಗ್ರೆಸ್ ಪಕ್ಷದಲ್ಲಿ ಗುರ್ತಿಸಿಕೊಂಡು ೫ವರ್ಷಗಳ ಕಾಲ ನಿರಂತರವಾಗಿ ಬಿಜೆಪಿ ಮತ್ತು ಶ್ರೀರಾಮುಲು ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಅಂತವರಿಗೆ ಇಂದು ಶ್ರೀರಾಮುಲು ಟಿಕೆಟ್ ಕೊಡಿಸಲು ಪಣತೊಟ್ಟಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇದರಿಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಗೆ ನೋವುಂಟಾಗಿದೆ” ಎಂದರು.
ಇದೇವೇಳೆ ಮುಖಂಡರಾದ ದಾಸರೆಡ್ಡಿ, ಸಿ.ಬಿ.ಮೋಹನ್‌ಕುಮಾರ್, ರಾಜಣ್ಣ, ದೊಡ್ಡಬೋರಯ್ಯ, ಮಲಿಕಾರ್ಜುನ, ನಾಗರಾಜ್, ಚಿನ್ನಯ್ಯ, ಮಹಾಂತೇಶ್ ಇತರಿದ್ದರು.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page