ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ. ಗೋಪಾಲಕೃಷ್ಣರವರು.ನುಡಿದಂತೆ ನಡೆದಂತಹ ಸರ್ಕಾರ ಅದು ಕಾಂಗ್ರೆಸ್ ಸರ್ಕಾರ.. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜನರಿಗೆ ನೀಡಿದಂತಹ ಐದು ಗ್ಯಾರಂಟಿಗಳನ್ನು ತಕ್ಷಣವೇ ಜನರಿಗೆ ತಲುಪಿಸುವಂತಹ ಕೆಲಸವನ್ನು ಮಾಡಿದೆ .ಈ ಗ್ಯಾರಂಟಿಗಳು ರಾಜ್ಯದ ಪ್ರತಿ ಮನೆಮನೆಗೂ ತಲುಪುವಂತೆ ಮಾಡಲು ಗ್ಯಾರಂಟಿ ಅನುಷ್ಠಾನ ಸಮಿತಿ ಗಳನ್ನು ಮಾಡಲಾಗಿದೆ.
ಅದರಂತೆ ನನ್ನ ಕ್ಷೇತ್ರದಲ್ಲಿಯೂ ಗ್ಯಾರಂಟಿ ಅನುಷ್ಠಾನ ಸಮಿತಿಯು ರಚನೆಯಾಗಿದೆ. ಈ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.. ಫಲಾನುಭವಿಗಳ ಪ್ರತಿ ಮನೆ ಮನೆಗೂ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆ ಇದ್ದಲ್ಲಿ ತಕ್ಷಣವೇ ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ. ಇದರಿಂದ ಪಕ್ಷದ ವರ್ಚಸ್ಸು ಹೆಚ್ಚಾಗುತ್ತದೆ. ಫಲಾನುಭವಿಗಳ ಸಮಸ್ಯೆಯೂ ನಿವಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕೆಂದು ತಿಳಿಸಿದರು …
ಈ ಸಂದರ್ಭದಲ್ಲಿ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಏನ್. ವೈ .ಚೇತನ್. ರವರು ಸರ್ವ ಸದಸ್ಯರ ಜೊತೆಗೂಡಿ ಅಧಿಕಾರ ವಹಿಸಿಕೊಂಡರು… ಜೊತೆಗೆ ಗ್ಯಾರೆಂಟಿ ಅನುಷ್ಟಾನ ಸಮಿತಿಯಿಂದ ಫಲಾನುಭವಿಗಳಿಗೆ ಸಮರ್ಥವಾಗಿ ಯೋಜನೆ ಗಳನ್ನು ತಲುಪಿಸುವಲ್ಲಿ ಶ್ರಮಿಸುತ್ತೇನೆ ಎಂದು ತಿಳಿಸಿದರು…
ಈ ಸಂದರ್ಭದಲ್ಲಿ ತಾಲೂಕು ತಹಸಿಲ್ದಾರ್ ಜಗದೀಶ್… ಈ ಓ ಹನುಮಂತಪ್ಪ..ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಹುಲ್ಲ.. ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪ್ರಕಾಶ್ …ತಾಲೂಕು ಗುತ್ತಿಗೆದಾರ ಸಂಘದ ಅಧ್ಯಕ್ಷರಾದ ಎಸ್ ಖಾದರ್ ..ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ನರಸಮ್ಮ ಗೋವಿಂದಪ್ಪ.. ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷರು. ಉಪಾಧ್ಯಕ್ಷರು. ಕಾರ್ಯದರ್ಶಿಗಳು.. ತಾಲೂಕು ಮಟ್ಟದ ಅಧಿಕಾರಿಗಳು.. ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರು… ತಾಲೂಕಿನ ವಿವಿಧ ಚುನಾಯಿತ ಪ್ರತಿನಿಧಿಗಳು.. ಸಾರ್ವಜನಿಕರು ಉಪಸ್ಥಿತರಿದ್ದರು.
0 Comments