ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಲ್ಲಿ ಬಾರಿ ಬಿನ್ನಮತ ಸ್ಪೋಟ

by | 26/03/23 | ರಾಜಕೀಯ


ಚಳ್ಳಕೆರೆ ಜನಧ್ವನಿವಾರ್ತೆ ಮಾ.26
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಕ್ಕೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸೂಚಿಸುವ ಯಾವ ಅಭ್ಯರ್ಥಿಯನ್ನು ಸಹ ಬೆಂಬಲಿಸುವುದಿಲ್ಲ ಎಂದು ಜಿ.ಪಂ.ಮಾಜಿ ಸದಸ್ಯ ಎಚ್.ಟಿ.ನಾಗಿರೆಡ್ಡಿ ಹೇಳಿದರು.
ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹೋಬಳಿಯ ಕಾಲುವೆಹಳ್ಳಿ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೊಳಕಾಲ್ಮುರು ಕ್ಷೇತ್ರವು ಅತ್ಯಂತ ಹಿಂದುಳಿದ ಮತ್ತು ಅತಿಹೆಚ್ಚು ದೀನದಲಿತರು, ಬಡವರು ಇರುವ ಹಾಗೂ ನೀರಾವರಿ ಸೌಲಭ್ಯ ವಂಚಿತ ಕ್ಷೇತ್ರವೆಂದು ಕಳೆದ ೫ವರ್ಷಗಳ ಹಿಂದೆ ಶ್ರೀರಾಮುಲು ಅವರನ್ನು ಇಲ್ಲಿಗೆ ಕರೆತಂದು ಬಾರಿ ಬಹುಮತದೊಂದಿಗೆ ಗೆಲ್ಲಿಸಿದೆವು. ಆದರೆ ಶ್ರೀರಾಮುಲು ಅವರು ಗೆದ್ದನಂತರ ನಡೆದುಕೊಂಡ ರೀತಿ, ಕ್ಷೇತ್ರದಲ್ಲಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳಿಗೆ ಕ್ಷೇತ್ರದ ಜನರು ಬೇಸತ್ತರು. ಈ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆ ಕ್ಷೇತ್ರವನ್ನು ಬಿಟ್ಟು ಹೋಗುವ ಸೂಚನೆ ತಿಳಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಬಿಜೆಪಿಯ ಸಂತೋಷ್‌ಜೀಯವರು ಸೇರಿದಂತೆ ಬಿಜೆಪಿಯ ವರಿಷ್ಠರ ಸೂಚನೆಯ ಮೇರೆಗೆ ಶ್ರೀರಾಮುಲು ಅವರಿಗೆ ಶತ್ರುವಿನಂತೆ ಇದ್ದ ಮಾಜಿ ಶಾಸಕ ನೇರಲಗುಂಟೆ ಎಸ್.ತಿಪ್ಪೇಸ್ವಾಮಿಯವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನವನ್ನು ಸ್ವತಃ ನಾನೇ ವಹಿಸಿಕೊಂಡೆನು. ಅದಕ್ಕಾಗಿ ಕ್ಷೇತ್ರದಲ್ಲಿ ಮುಖಂಡರು, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸುವ ಕಾರ್ಯಕ್ಕೆ ಮುಂದಾಗಿದ್ದೆ. ಆದರೆ ರಾತ್ರೋರಾತ್ರಿ ಸಚಿವರಾದ ಶ್ರೀರಾಮುಲು ಹಾಗೂ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ೫ವರ್ಷಗಳ ಘರ್ಷಣೆ, ಸಂಘರ್ಷ, ಶತ್ರುತ್ವವನ್ನು ಮರೆತು ಒಂದಾಗಿ ಯಾವ ಕಾರ್ಯಕರ್ತರ ಅಭಿಪ್ರಾಯವನ್ನು ಲೆಕ್ಕಿಸದೇ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಹಾಗೇ ಅವರಿಗೆ ಟಿಕೆಟ್ ಎಂಬ ಸಂದೇಶವನ್ನು ಪರೋಕ್ಷವಾಗಿ ಕ್ಷೇತ್ರದ ಜನರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಸಾವಿರಾರು ಕಾರ್ಯಕರ್ತರು ೫ವರ್ಷಗಳಿಂದ ಅನುಭವಿಸಿದ ಯಾತನೆ ಕಷ್ಟನಷ್ಟಗಳನ್ನು ನಮ್ಮ ಬಳಿ ಬಂದು ತೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಸೂಚಿಸುವ ಯಾವ ವ್ಯಕ್ತಿಗೂ ಬಿಜೆಪಿಯ ವರಿಷ್ಠರು ಟಿಕೆಟ್ ನೀಡಬಾರದು. ಬದಲಾಗಿ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಟಿಕೆಟ್ ಆಕಾಂಕ್ಷಿಗಳಾದ ಜಿ.ಪಿ.ಜಯಪಾಲಯ್ಯ, ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ(ಎತ್ತಿನಹಟ್ಟಿಗೌಡ್ರು) ಹಾಗೂ ಪ್ರಭಾಕರ ಈ ಮೂರು ಜನರಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಟೊಂಕಕಟ್ಟಿ ನಿಂತು ಗೆಲ್ಲಿಸುವ ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತೇವೆ. ಒಂದು ವೇಳೆ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿಯವರಿಗೇ ಟಿಕೆಟ್ ನೀಡಿದರೆ ಅವರ ಸೋಲಿಗೆ ಕಾರ್ಯತಂತ್ರವನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ(ಎತ್ತಿನಹಟ್ಟಿಗೌಡ್ರು) ಮಾತನಾಡಿ, “ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ ೫ವರ್ಷಗಳಿಂದ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಮೂಲೆಗುಂಪಾಗಿದ್ದಾರೆ. ಬಹು ದೊಡ್ಡಮಟ್ಟದಲ್ಲಿ ಕಾರ್ಯಕರ್ತರ ಪಡೆಗೆ ಅನ್ಯಾಯವಾಗಿದೆ. ಅವರನ್ನು ಗುರ್ತಿಸುವ ಮತ್ತು ಅವರಿಗೆ ಶಕ್ತಿ ತುಂಬುವ ಕಾರ್ಯವನ್ನು ಶ್ರೀರಾಮುಲು ಅವರು ಮಾಡಿಲ್ಲ. ಹಾಗಾಗಿ ಪುನಃ ಮೊಳಕಾಲ್ಮುರು ಕ್ಷೇತ್ರದ ಜನರನ್ನು ಅವರಿಗೆ ಒತ್ತೆಯಾಳುಗಳಾನ್ನಾಗಿ ಮಾಡಿಕೊಳ್ಳುವ ಯೋಜನೆಯನ್ನು ರೂಪಿಸಿದ್ದಾರೆ. ಪ್ರಸ್ತುತ ಕ್ಷೇತ್ರದ ಮತದಾರರು ಅತ್ಯಂತ ಬುದ್ದಿವಂತರು, ವಿದ್ಯಾವಂತರು, ರಾಜಕೀಯ ಮುತ್ಸದಿಗಳು ಇರುವ ಹಿನ್ನೆಲೆಯಲ್ಲಿ ಅವರೆಲ್ಲರೂ ಶ್ರೀರಾಮುಲು ಅವರ ನಡೆಯನ್ನು ಗಮನಿಸುತ್ತಿದ್ದಾರೆ. ೪ ಹೋಬಳಿಯ ಜನರ ಅಭಿಪ್ರಾಯವನ್ನು ಸಂಗ್ರಹಿಸಿ ಟಿಕೆಟ್ ನೀಡುವುದು ಬಿಜೆಪಿಯ ವರಿಷ್ಠರು ಮಾಡಬೇಕಾದ ಕೆಲಸ. ಆದರೆ ರಾತ್ರೋರಾತ್ರಿ ಕಾಂಗ್ರೆಸ್ ಪಕ್ಷದಲ್ಲಿದ್ದ ಮಾಜಿ ಶಾಸಕರನ್ನು ಕರೆತಂದು ಬಿಜೆಪಿಯ ಟಿಕೆಟ್ ನೀಡುವುದು ಯಾವ ನ್ಯಾಯ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಾಗ ೨.೪೨ಲಕ್ಷ ಮತದಾರರಲ್ಲಿ ಬಿಜೆಪಿಯ ಯಾವ ಕಾರ್ಯಕರ್ತರನ್ನು, ಮುಖಂಡರನ್ನು, ನಾಲ್ಕು ಹೋಬಳಿಯ ಜನರ ವಿಶ್ವಾಸ ಮತ್ತು ಅಭಿಪ್ರಾಯವನ್ನು ಪಡೆಯದೆ ಅವರಿಗೆ ಬೇಕಾದ ವ್ಯಕ್ತಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಂಡಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹಾಗಾಗಿ ಶ್ರೀರಾಮುಲು ಅವರು ಸೂಚಿಸುವ ಯಾವ ವ್ಯಕ್ತಿಗೂ ನಾವು ಮತಹಾಕುವುದಿಲ್ಲ. ಬದಲಾಗಿ ಕ್ಷೇತ್ರಕ್ಕೆ ಬದಲಿ ಅಭ್ಯರ್ಥಿಯನ್ನು ಪಕ್ಷವು ಘೋಷಿಸಬೇಕು ಎಂಬುದು ಕಾರ್ಯಕರ್ತರ, ಮುಖಂಡರ ನಿರ್ಣಯವಾಗಿದೆ” ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಪಿ.ಜಯಪಾಲಯ್ಯ, “ಕಳೆದ ೨೦ಷರ್ವಗಳಿಂದ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಸಂಘಟನೆಗಾಗಿ ಶ್ರಮಿಸಿದ್ದೇನೆ. ಬಿಜೆಪಿ ಪಕ್ಷವು ನನಗೆ ತಾಯಿಯಿದ್ದಂತೆ. ಆ ತಾಯಿಯು ನನ್ನ ಕೈಬಿಡುವುದಿಲ್ಲ ಎಂಬ ನಂಬಿಕೆ ನನಗಿದೆ. ಹಾಗಾಗಿ ಸಾಮಾನ್ಯ ಕಾರ್ಯಕರ್ತರನ್ನು ಗುರ್ತಿಸುವ ಪಕ್ಷ ಎಂಬ ಹೆಗ್ಗಳಿಗೆ ಬಿಜೆಪಿ ಪಕ್ಷಕ್ಕಿದೆ. ಈ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ದೊರೆಯಬಹುದು ಎಂಬ ಭರವಸೆ ನನಗಿದೆ” ಎಂದರು.


ಇದೇವೇಳೆ ಮುಖಂಡರಾದ ಟಿ.ರೇವಣ್ಣ, ರಘುಮೂರ್ತಿ, ಶ್ರೀನಿವಾಸ್, ಎಂ.ವೈ.ಟ.ಸ್ವಾಮಿ, ಸೋಮಶೇಖರ್‌ಮಂಡಿಮಠ್, ದಾಸರೆಡ್ಡಿ, ಗೋವಿಂದಪ್ಪ, ನಾರಾಯಣರೆಡ್ಡಿ, ಚಂದ್ರಣ್ಣ, ಶ್ರೀರಾಮರೆಡ್ಡಿ, ಸಿಬಿ.ಮೋಹನ್, ಪರಮೇಶ್ವರಪ್ಪ, ಕುಬೇರ ರೆಡ್ಡಿ,ತಿಮ್ಮಾರೆಡ್ಡಿ.ಬಿಜೆಪಿ ಟಿಕೇಟ್ ಆಕಾಂಕ್ಷಿ ಪ್ರಭಾಕರ್ ಮ್ಯಾಸನಾಯಕ ಇತರರಿದ್ದರು.

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page