ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್‌ ಸೌಲಭ್ಯ

by | 13/10/23 | ಸುದ್ದಿ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿ ನವರಾತ್ರಿ ಅಂಗವಾಗಿ ಅ.14ರಿಂದ 24ರವರೆಗೆ ಜಾತ್ರೆ ನಡೆಯಲಿದೆ. ಈ ಜಾತ್ರೆಗೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಅನುಕೂಲವಾಗಲೆಂದು ಜಾತ್ರೆಯ ಮುಖ್ಯ ದಿನಗಳಾದ ಅ.15, 17, 20 ಮತ್ತು 22ರಂದು ಬೆಳಗಾವಿ ಕೇಂದ್ರೀಯ ಬಸ್‌ ನಿಲ್ದಾಣದಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಗಣೇಶ ರಾಠೋಡ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *