ಯಾವುದೇ ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣಗಳು ಆಗದಂತೆ ಕ್ರಮ ಕೈಗೊಳ್ಳಿ-ಜಿಪಂ ಸಿಇಓ ಎಸ್.ಜೆ.ಸೋಮಶೇಖರ್

by | 06/07/24 | ಸುದ್ದಿ


ಚಿತ್ರದುರ್ಗ ಜುಲೈ.06:
ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ, ನೀರುಗಂಟಿಗಳಗೆ ಮಾಹಿತಿಯನ್ನು ನೀಡಿ. ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಚಿತ್ರದುರ್ಗ ಇವರ ಸಹಯೋಗದಲ್ಲಿ ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಫೀಲ್ಡ್ ಟೆಸ್ಟ್ ಕಿಟ್ ಮತ್ತು ಹೆಚ್ 2 ಎಸ್ ವೈಲ್ಸ್ ಉಪಯೋಗಿಸಿ ನೀರು ಪರಿಕ್ಷೇಗಳನ್ನು ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ತರಭೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ 6 ತಾಲ್ಲೂಕು ಗಳ 189 ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರು ಪರೀಕ್ಷೆ ಕಿಟ್ ಮತ್ತು ವೈಲ್ಸ್ ಉಪಯೋಗಿಸಿ ನೀರಿನ ಪರೀಕ್ಷೆ ಗಳನ್ನು ಕೈಗೊಳ್ಳಲು ಪರಿಣಾಮಕಾರಿಯಾಗಿ ತರಭೇತಿಯನ್ನು ನೀಡಲಾಗಿದೆ. ಅದರಿಂದ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಮತ್ತು ನೀರುಗಂಟಿಗಳಗೆ ಮಾಹಿತಿಯನ್ನು ನೀಡಿ ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಆಗದಂತೆ ಕ್ರಮ ಕೈಗೊಳ್ಳಬೇಕು. ತರಬೇತಿ ಪಡೆದಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಹಾಗೂ ಅಭಿಪ್ರಾಯವನ್ನು ಪಡೆದುಕೊಂಡರು.
ಯೋಜನಾ ನಿರ್ದೇಶಕ ಡಾ. ಎಸ್.ರಂಗಸ್ವಾಮಿ ರವರು ಮಾತನಾಡಿ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ನೀರು ಪರೀಕ್ಷೆ ಕಿಟ್‍ಗಳ ಮೂಲಕ ಕುಡಿಯುವ ನೀರಿನ ಜಲಮೂಲಗಳ ನೀರು ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ಮಾಡಬೇಕು. ನೀರು ಕುಡಿಯಲು ಯೋಗ್ಯವಾಗಿ ಇಲ್ಲದಿದ್ದರೆ ಅಂತಹ ನೀರನ್ನು ತಾಲ್ಲೂಕು ಮಟ್ಟದ ನೀರು ಪರೀಕ್ಷಾ ಪ್ರಯೋಗಾಲಯಕ್ಕೆ ತಂದು ನೀರು ಪರೀಕ್ಷೆ ಮಾಡಿಸಿ, ನಂತರ ಅದರ ಬಗ್ಗೆ ಕ್ರಮ ಕೈಗೊಳ್ಳಲು ತಿಳಿಸಿದರು. ಸ್ವಚ್ಛ ಭಾರತ್ ಮಿಷನ್ ಯೋಜನೆಯ ವೈಯುಕ್ತಿಕ ಗೃಹ ಶೌಚಲಯಗಳು & ಬೂದು ನೀರು ನಿರ್ವಹಣೆಯ ಕಾಮಗಾರಿಗಳು ತ್ವರಿತವಾಗಿ ಪ್ರಗತಿ ಸಾಧಿಸಲು ಸೂಚಿಸಿದರು.
ಉಪ ಕಾರ್ಯದರ್ಶಿಗಳಾದ ಶ್ರೀ.ಕೆ. ತಿಮ್ಮಪ್ಪನವರು ಮಾತನಾಡಿ ಫೀಲ್ಡ್ ಟೆಸ್ಟ್ ಕಿಟ್ ಮೂಲಕ ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಜಲ ಮೂಲಗಳಿಂದ ನೀರನ್ನು ಸಂಗ್ರಹಿಸಿ ಪ್ರತಿ ತಿಂಗಳು ನೀರಿನ ಮಾದರಿಯನ್ನು ಪರೀಕ್ಷಿಸಿ ವರದಿಯನ್ನು ನಿಗದಿತ ಪೋರ್ಟಲ್ ನಲ್ಲಿ ಇಂಧೀಕರಿಸಬೇಕು. ಪ್ರತಿ ಗ್ರಾಮದಲ್ಲಿ ನೀರುಗಂಟಿ ಮೂಲಕ ಪೈಪ್ ಲೈನ್ ಹೊಡೆದು ಹೋಗಿದ್ದರೆ ಕೂಡಲೇ ಗುರುತಿಸಿ ಸರಿಪಡಿಸಿ ನೀರು ಸರಬರಾಜು ಮಾಡಬೇಕು ಮತ್ತು ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್, ಆರ್.ಒ ಪ್ಲಾಂಟ್, ಮಿನಿ ಟ್ಯಾಂಕ್ ಮತ್ತು ಜಲ ಮೂಲಗಳ ಹತ್ತಿರ ಸ್ವಚ್ಛಗೊಳಿಸಿ ಕಲುಷಿತ ವಾಗದಂತೆ ಜಾಗೃತ ವಹಿಸಬೇಕು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಪುನರ್ ರಚನೆ ಮಾಡಿ ನಮೂನೆಗಳನ್ನು ಕಡ್ಡಾಯವಾಗಿ ಜಿಲ್ಲಾ ಪಂಚಾಯತ್ ಕಛೇರಿಗೆ ಸಲ್ಲಿಸಬೇಕು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರ ಸಹಕಾರದಿಂದ ಗ್ರಾಮಗಳಲ್ಲಿ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ 3 ತಿಂಗಳಿಗೊಮ್ಮೆ ಚರ್ಚಿಸಿ ಸಭಾ ನಡವಳಿಯನ್ನು ರಿಜಿಸ್ಟರ್ ಪುಸ್ತಕದಲ್ಲಿ ನಮೂದಿಸಲು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರಾದ ಬಸನಗೌಡ ಪಾಟೀಲ್ ರವರು ಮಾತನಾಡಿ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಜಲ ಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು. ಇಂಜಿನಿಯರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮನ್ವಯದೊಂದಿಗೆ ಗ್ರಾಮಸ್ಥರಿಗೆ ಶುದ್ದ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸಬೇಕು. ನೀರನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಮೂಲಕ ಮಾಹಿತಿಯನ್ನು ನೀಡಬೇಕೆಂದು ಸೂಚಿಸಿದರು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕ್ರಮವಹಿಸಬೇಕು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಕ್ಷೇತ್ರ ಪರೀಕ್ಷಾ ಕಿಟ್ ಗಳನ್ನು ಬಳಸಿಕೊಳ್ಳಲು ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ನೀರು ಪರೀಕ್ಷೆ ಪ್ರಯೋಗಾಲಯದ ಸಿಬ್ಬಂದಿಗಳು ನೀರು ಪರೀಕ್ಷೆ ಮಾಡಿಸಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ.ಮಂಜುನಾಥ್ ಎಸ್.ನಾಡರ್, ಜಿಲ್ಲಾ ಎಂ.ಐ.ಎಸ್ ಸಮಾಲೋಚಕ ಸ್ನೇಹನ್, ಜಿಲ್ಲಾ ಸಮಾಲೋಚಕರಾದ ಬಿ.ಸಿ.ನಾಗರಾಜು, ಲ್ಯಾಬ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page