ಯುವಕರು ರಕ್ತದಾನಮಾಡಿ ಮತ್ತೊಂದು ಜೀವಉಳಿಸಿರಿ ಯುವ ರೆಡ್ ಕ್ರಾಸ್ ನ ಮುಖ್ಯಸ್ಥೆ ಶಶಿಕಲಾ ರವಿಶಂಕರ್.

by | 30/11/23 | ಆರೋಗ್ಯ


ಹಿರಿಯೂರು :
ರಕ್ತದಾನ ಅತ್ಯಂತ ಶ್ರೇಷ್ಠದಾನ ಆದ್ದರಿಂದ ಇಂದಿನ ಯುವ ಪೀಳಿಗೆ ರಕ್ತದಾನ ಶಿಬಿರಗಳನ್ನು ಹೆಚ್ಚುಹೆಚ್ಚು ಹಮ್ಮಿಕೊಂಡು ಯುವ ಜನಾಂಗವನ್ನು ರಕ್ತದಾನ ಮಾಡಲು ಪ್ರೇರೇಪಿಸುವ ಮೂಲಕ ಮತ್ತೊಂದು ಜೀವ ಉಳಿಸಲು ಅವಕಾಶ ಕಲ್ಪಿಸಬೇಕು ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರು ಹಾಗೂ ಯುವ ರೆಡ್ ಕ್ರಾಸ್ ನ ಮುಖ್ಯಸ್ಥರಾದ ಶಶಿಕಲಾ ರವಿಶಂಕರ್ ಹೇಳಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮನುಷ್ಯನ ಶರೀರದಲ್ಲಿ ದೊರಕುವ ನೈಸರ್ಗಿಕ ರಕ್ತವನ್ನು ಆ ಗುಣಮಟ್ಟಕ್ಕೆ ಯಾರೂ ತಯಾರು ಮಾಡಲು ಸಾಧ್ಯವಿಲ್ಲ, ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಎಂದರೆ ರಕ್ತಕ್ಕೆ ರಕ್ತವನ್ನು ಮರುಪೂರಣ ಮಾಡುವುದೊಂದೇ ಆಗಿದ್ದು, ಯುವಜನತೆ ರಕ್ತಹೀನತೆಯಿರುವವರಿಗೆ ಹಿಮೋಫಿಲಿಯಾ ಆದವರಿಗೆ ಕ್ಯಾನ್ಸರ್ ಪೀಡಿತರಿಗೆ ಶಸ್ರ್ತ ಚಿಕಿತ್ಸೆಗೊಳಗಾದವರಿಗೆ ಅಪಘಾತಕ್ಕೀಡಾದವರಿಗೆ ತುರ್ತು ಸಂದರ್ಭದಲ್ಲಿ ಅತ್ಯವಶ್ಯಕವಾಗಿ ರಕ್ತ ಬೇಕಾದಾಗ ಅತ್ಯಂತ ತುರ್ತಾಗಿ ರಕ್ತ ಪೂರೈಕೆ ಮಾಡಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ವಾಸುದೇವ್ ಮಾತನಾಡಿ, ಆಸ್ಪತ್ರೆಗಳಲ್ಲಿ ಸರಿಯಾದ ರಕ್ತ ದೊರಕದೇ ರೋಗಿಗಳು, ಸಂಬಂಧಿಗಳು ಪರದಾಡುತ್ತಿದ್ದು, ಇಂದಿನ ಯುವಕರು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು, ಸರಿಯಾದ ಸಮಯದಲ್ಲಿ ಅಗತ್ಯವಿರುವ ರೋಗಿಗಳಿಗೆ ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಭಾಗಿಯಾಗಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾ ಅಧಿಕಾರಿಯಾದ ಡಾ.ನವೀನ್, ಹೆಚ್.ಎಸ್. ಕುಮಾರ್, ವಿ.ವೀರಣ್ಣ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page