ಯುವಜನತೆಗೆ ಉದ್ಯೋಗ ಸೃಷ್ಟಿಸುವ ದೃಷ್ಟಿಯಿಂದ ಎಲ್ಇಡಿ ಬಲ್ಬ್ ತಯಾರಿಕಾ ಘಟಕ ಸ್ಥಾಪನೆ:ಶಾಸಕ ಎನ್ ವೈ ಗೋಪಾಲಕೃಷ್ಣ

by | 18/10/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಅ.18 ಬಯಲು ಸೀಮೆಯ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲೂಕಿಗೆ ಅನುಕೂಲವಾಗುವ ದೃಷ್ಟಿಯಿಂದ ದೊಡ್ಡ ಉಳ್ಳಾರ್ತಿ ಗ್ರಾಮದ ಡಿಆರ್‌ಡಿಓ ಪ್ರದೇಶದಲ್ಲಿ ಎಲ್ಇಡಿ ಬಲ್ಪ್ ತಯಾರಿಕಾ ಘಟಕಕ್ಕೆ 96 ಎಕರೆ ಸರ್ಕಾರಿ ಜಾಗವನ್ನು ಮಂಜೂರು ಮಾಡಲಾಗಿದ್ದು ಇದರಿಂದ ಉದ್ಯೋಗ ಸೃಷ್ಟಿಯಾಗಿ ಯುವಕರಿಗೆ ಅನುಕೂಲವಾಗಲಿದೆ ಎಂದು ಮೊಳಕಾಲ್ಮೂರು ಕ್ಷೇತ್ರ ಶಾಸಕ ಎನ್ ವೈ ಗೋಪಾಲಕೃಷ್ಣ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಎರಡು ತಾಲೂಕುಗಳು ಬರಪೀಡಿತ ತಾಲೂಕುಗಳಾಗಿದ್ದು ಒಬ್ಬ ಶಾಸಕನಾಗಿ  ಉದ್ಯೋಗ ಸೃಷ್ಟಿಸುವುದು ನನ್ನ ಜವಾಬ್ದಾರಿ ಆಗಿದ್ದು ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಸರ್ಕಾರಿ ಜಮೀನಿನಲ್ಲಿ ಅವಕಾಶ ಮಾಡಿಕೊಡಲಾಗಿದೆ ಇದರಿಂದ ಉದ್ಯೋಗ ಸೃಷ್ಟಿಯಾಗಿ ವಿದ್ಯಾವಂತ ಯುವಕರು ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದರು.

ಬೋರೇದೇವರ ದೇವಸ್ಥಾನಕ್ಕೆ ಜಾಗ ಮೀಸಲು: ದೊಡ್ಡೋಳಾರ್ತಿ ಗ್ರಾಮದ ಬುಡಕಟ್ಟು ಸಮುದಾಯದ ಜನರ ಬಹು ದಿನಗಳ ಬೇಡಿಕೆಯಾದ ಬೋರೇದೇವರ ದೇವಸ್ಥಾನಕ್ಕೆ 13 ಎಕರೆ ಜಾಗ ಮೀಸಲಿಟ್ಟಿದ್ದು  ಪರಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಡುಗೊಲ್ಲ ವರ್ಗದವರು ಸೇರಿದಂತೆ ಇತರೆ ಜಾತಿಯ ಜನರು ಈ ದೇವರಿಗೆ ನಡೆದುಕೊಳ್ಳುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಎಲ್ಇಡಿ ಬಲ್ಪ್ ತಯಾರಿಕಾ ಘಟಕವನ್ನು ನಿರ್ಮಿಸಲು ತಿಳಿಸಿದ್ದು 55 ಎಕರೆ ಜಾಗವನ್ನು ಕಂಪನಿಗೆ ನೀಡಿರುವುದರಿಂದ 13 ಎಕರೆ ಪ್ರದೇಶದಲ್ಲಿ ದೇವಸ್ಥಾನವನ್ನು ನಿರ್ಮಿಸಲು ಉದ್ದೇಶಸಲಾಗಿದ್ದು ಶೀಘ್ರವಾಗಿ ನಿರ್ಮಾಣ ಕಾರ್ಯ ಪ್ರಾರಂಭ ಮಾಡಲಾಗುವುದು ಎಂದರು ಈ ಸಂದರ್ಭದಲ್ಲಿ ದೊಡ್ಡ ಉಳ್ಳಾರ್ತಿ ಕರಿಯಣ್ಣ ದೊರೆಬಯ್ಯಣ್ಣ ತಿಮ್ಮಯ್ಯ ಶ್ರೀನಿವಾಸ್ ಓಬಣ್ಣ ಅಶ್ವತ ನಾಯಕ ಅಧಿಕಾರಿಯ ಆದ ಲಕ್ಷ್ಮೀಶ ಸೇರಿದಂತೆ ಹಲವರು ಉಪಸ್ಥಿತರಿದ್ದರು

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *