ಯುವಜನತೆ ತಂಬಾಕು ಮುಕ್ತ ಸಮಾಜವನ್ನು ನಿರ್ಮಿಸುವ ಪಣ ತೊಡಬೇಕು: ಪ್ರಧಾನ ಸಿವಿಲ್ ನ್ಯಾಯಾಧೀಶೆ ತೇಜಸ್ವಿನಿ

by | 31/05/24 | ಆರೋಗ್ಯ

ಚಳ್ಳಕೆರೆ: ತಂಬಾಕು ವಸ್ತುಗಳನ್ನು ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಪ್ರತಿಯೊಬ್ಬರು ತಂಬಾಕು ವಸ್ತುಗಳನ್ನು ಇನ್ನು ಮುಂದೆ ಉಪಯೋಗಿಸುವುದಲ್ಲವೆಂದು ಶಪಥ ಮಾಡಿಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಕೆಎಂ ತೇಜಸ್ವಿನಿ ಕರೆ ನೀಡಿದರು.

ತಾಲೂಕು ಆರೋಗ್ಯ ಇಲಾಖೆ ಹಾಗೂ ಬಾಪೂಜಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಂಬಾಕು ಸೇವನೆಯಿಂದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ ತಂಬಾಕು ಸೇವನೆಯ ಜಾಹೀರಾತುಗಳಿಂದ ಮೋಸ ಹೋಗಬೇಡಿ ತಂಬಾಕು ವ್ಯಸನಿಯಿಂದ ಇಡೀ ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ವಿದ್ಯಾರ್ಥಿಗಳು ಇಂತಹ ದುಷ್ಚಟಗಳಿಂದ ದೂರವಿದ್ದು ಉತ್ತಮ ಶಿಕ್ಷಣ ಪಡೆಯುವ ಮೂಲಕ ಜೀವನ ರೂಪಿಸಿಕೊಂಡು ತಮ್ಮ ಪೋಷಕರಿಗೆ ಕೀರ್ತಿ ತರುವಂತಾಗಬೇಕು ಎಂದು ತಿಳಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಕಾಶಿ ಮಾತನಾಡಿ ಯುವ ಸಮೂಹ ಹಾಗೂ ಸಾರ್ವಜನಿಕರು ತಂಬಾಕು ತ್ಯಜಿಸುವ ಕಡೆಗೆ ಗಮನ ನೀಡಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಪ್ರತಿ ವರ್ಷವೂ ತಂಬಾಕು ದಿನಾಚರಣೆ ಮಾಡಲಾಗುತ್ತದೆ ತಂಬಾಕು ಸೇವನೆಯ ಅಭ್ಯಾಸ ಬಿಡಲು ವ್ಯಸನ ಮುಕ್ತ ಕೇಂದ್ರಗಳು ಇವೆ ಪೋಷಕರು ತಮ್ಮ ಮಕ್ಕಳ ಮುಂದೆ ದುಶ್ಚಟದ ಹವ್ಯಾಸಗಳನ್ನು ಮಾಡಿದರೆ ಮಕ್ಕಳು ಅದರಿಂದ ಪ್ರಭಾವಿತರಾಗಿ ಕೆಟ್ಟ ಹಾದಿಯನ್ನು ತುಳಿಯುತ್ತಾರೆ ಮನೆಯಿಂದಲೇ ಮೊದಲು ತಂಬಾಕು ನಿಯಂತ್ರಣವನ್ನು ಮಾಡಬೇಕಾದ ಅನಿವಾರ್ಯತೆ ಇದೆ  ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ತಿಪ್ಪೇಸ್ವಾಮಿ ಬಿಪಿಎಂ ಅಧಿಕಾರಿಗಳಾದ ಪ್ರದೀಪ್  ವಕೀಲ ಸಂಘದ ಅಧ್ಯಕ್ಷರಾದ ಕೆಎಂ ನಾಗರಾಜ್, ವಕೀಲ ಸಂಘದ ಉಪಾಧ್ಯಕ್ಷರಾದ ಪಾಲಯ್ಯ, ಕಾರ್ಯದರ್ಶಿಗಳಾದ ಎಂ ಸಿದ್ದರಾಜ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ,ಸಮಾಜ ಕಾರ್ಯಕರ್ತರಾದ ತಿಪ್ಪೇಸ್ವಾಮಿ ಕೆಎಂ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಅಮೃತರಾಜ್  ಮತ್ತು ಬಾಪೂಜಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಕರಿಯಣ್ಣ ಮತ್ತು ಉಪನ್ಯಾಸಕರುಗಳಾದ ತಿಪ್ಪೇಸ್ವಾಮಿ,ಆರ್ ಎಸ್ ಉಮೇಶ್,ಚಂದ್ರಶೇಖರ್, ಮತ್ತು ಕಾಲೇಜು ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page