ಚಳ್ಳಕೆರೆ ಜನಧ್ವನಿ ವಾರ್ತೆ ಫೆ.19 ಸಡಗರ, ಸಂಭ್ರಮದ ನಡುವೆ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಉತ್ಸವ ಚಳ್ಳಕೆರೆ ತಾಲ್ಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಭಾನುವಾರ ಜರುಗಿತು.
ಗ್ರಾಮದ ಪ್ರಮುಖ ರಸ್ತೆಯಲ್ಲಿ ಬಂಜಾರ ಸಮುದಾಯದ ಆಯೋಜಿಸಿದ್ದ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರದ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ಬಂಜಾರ ಸಮಾಜದ ಯುವತಿಯರು ಗೋದಿಸಸಿ (ತೀಜ್) ತಲೆ ಮೇಲೆ ಹೊತ್ತು ಹೆಜ್ಜೆ ಹಾಕಿದರು. ಸಾಂಪ್ರದಾಯಿಕ ವಾದ್ಯ ಮೇಳಗಳು, ಕಲಾತಂಡಗಳು ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಯುವತಿಯರು ಹಾಗೂ ಮಹಿಳೆಯರು ಸಾಂಪ್ರದಾಯಿಕ ಲಂಬಾಣಿ ದಿರಿಸಿನಲ್ಲಿ ಲಂಬಾಣಿ ಹಾಡಿಗೆ ತಹಶೀಲ್ದಾರ್ ಎನ್ .ರಘುಮೂರ್ತಿ ಮನಸೋತು ಕುಣಿದು ಕುಪ್ಪಳಿಸಿದರು
0 Comments