ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಆದ್ಯತೆ -ಮುಖ್ಯಮಂತ್ರಿ ಸಿದ್ದರಾಮಯ್ಯ.

by | 12/01/24 | ಆರ್ಥಿಕ


ಶಿವಮೊಗ್ಗ ಜನವರಿ 12
ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು.ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ. ಸಂವಿಧಾನದ ಆಶಯ ,ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇಲ್ಲಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆಗೆ ಭತ್ತ ತುಂಬಿದ ಕೊಳಗದಲ್ಲಿ ಹೊಂಬಾಳೆ ಅನಾವರಣ ಮಾಡುವ ಮೂಲಕ ಚಾಲನೆ ನೀಡಿದ ಅವರು ರಾಷ್ಟ್ರೀಯ ಯುವದಿನದ ಅಂಗವಾಗಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು,
ರಾಜ್ಯದಲ್ಲಿ ಸುಮಾರು 1.5 ಕೋಟಿ ಕುಟುಂಬಗಳು ಸರ್ಕಾರದಿಂದ ಪ್ರತಿ ತಿಂಗಳು ಸರಾಸರಿ 5 ರಿಂದ 6 ಸಾವಿರ ರೂ.ಧನ ಸಹಾಯ ಪಡೆಯುತ್ತಿವೆ.ಇದನ್ನು ಜಾಗತಿಕ ಮೂಲ ಆದಾಯ ಎಂದು ವಿದೇಶಗಳಲ್ಲಿ ಕರೆಯಲಾಗುತ್ತದೆ.ಸಾಮಾಜಿಕ,ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ದೇಶದ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ.ಈ ವಿಚಾರಗಳಲ್ಲಿ ನಂಬಿಕೆಯಿಟ್ಟುಕೊಂಡು ಅಸಮಾನತೆ ನಿವಾರಿಸುವ ನಿಟ್ಟಿನಲ್ಲಿ ನಾವು ಪ್ರಯತ್ನಕ್ಕೆ ಕೈ ಹಾಕಿದ್ದೇವೆ.ಇಲ್ಲವಾದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಅಸಮಾನತೆಯಿಂದ ನರಳುವ ಜನ ಪ್ರಭುತ್ವದ ವಿರುದ್ಧ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದರು.ನಮ್ಮ ಸರ್ಕಾರ ಎಚ್ಚರಿಕೆಯಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ.ಸಂವಿಧಾನದ ಆಶಯ,ಧ್ಯೇಯೋದ್ದೇಶಗಳನ್ನು ಈಡೇರಿಸುವ ಕಾರ್ಯಕ್ಕೆ ನಾವು ಬದ್ಧರಾಗಿದ್ದೇವೆ.
ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುತ್ತೇವೆ ಎಂದು ಹೇಳಿರಲಿಲ್ಲ.ಐದು ವರ್ಷದ ಕಾಲಾವಕಾಶ ನಮಗಿತ್ತು.ನಮ್ಮ ನಾಡಿನ ಬಡವರು,ಹಿಂದುಳಿದವರು,ಮಹಿಳೆಯರು ಈ ಬೆಲೆ ಏರಿಕೆಯ ಕಾಲದಲ್ಲಿ ಅವರ ಕೊಂಡುಕೊಳ್ಳುವ ಸಾಮಥ್ರ್ಯ ಹೆಚ್ಚಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಅಧಿಕಾರಕ್ಕೆ ಬಂದ ಕೂಡಲೇ ಈ ಎಲ್ಲಾ ಐದು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ಯುವನಿಧಿ ಕಾರ್ಯಕ್ರಮದ ಮೂಲಕ 2023 ರಲ್ಲಿ ಪದವಿ ಉತ್ತೀರ್ಣರಾದ ಅರ್ಹರಿಗೆ 3000 ,ಡಿಪೆÇ್ಲೀಮಾ ಉತ್ತೀರ್ಣರಾದವರಿಗೆ 1500 ರೂ.ಮಾಸಿಕ ಭತ್ಯೆಯನ್ನು ನೀಡುತ್ತಿರುವುದು ಯುವಜನರ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ.
ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ಕಳೆದ ಜೂನ್ 11 ರಿಂದ ಇಲ್ಲಿಯವರೆಗೆ 130 .28 ಕೋಟಿ ರೂ.ವೆಚ್ಚದಲ್ಲಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ.ಇದೊಂದು ಚಾರಿತ್ರಿಕ ಮಹತ್ವದ ಬೆಳವಣಿಗೆಯಾಗಿದೆ.ಗೃಹಜ್ಯೋತಿ ಯೋಜನೆ ಮೂಲಕ 1.65 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿವೆ.ಗೃಹಲಕ್ಷ್ಮಿ ಕಾರ್ಯಕ್ರಮದಡಿ 1.18 ಲಕ್ಷ ಕುಟುಂಬದ ಮಹಿಳಾ ಯಜಮಾನತಿಯರಿಗೆ ಪ್ರತಿ ತಿಂಗಳು ತಲಾ 2 ಸಾವಿರ ರೂ.ದೊರೆಯುತ್ತಿದೆ.ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ ಅಕ್ಕಿಯ ಜೊತೆಗೆ ಉಳಿದ ಐದು ಕೆಜಿ ಅಕ್ಕಿಯ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ ಎಂದರು.
ಇಂದು ಯುವನಿಧಿ ಮೂಲಕ ಭತ್ಯೆ ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಮೇಳದ ಮೂಲಕ ಕೆಲಸ ಕೊಡಿಸುವ ಕಾರ್ಯವನ್ನೂ ಮಾಡುತ್ತೇವೆ.ನಿರುದ್ಯೋಗ ಸಮಸ್ಯೆ ನಿವಾರಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ.2022-23 ರಲ್ಲಿ 3.96 ಲಕ್ಷ ವಿದ್ಯಾರ್ಥಿಗಳು ಪದವಿ ಹಾಗೂ 18 ಲಕ್ಷ ವಿದ್ಯಾರ್ಥಿಗಳು ಡಿಪೆÇ್ಲೀಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿದ್ದಾರೆ.ಅವರೆಲ್ಲ ಈ ಯೋಜನೆಯಡಿ ನೋಂದಾಯಿಸಿಕೊಂಡು ಯುವನಿಧಿ ಸೌಲಭ್ಯ ಪಡೆಯಬೇಕು ಎಂದರು.
ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿದ್ದ ಈ ಪ್ರದೇಶದಲ್ಲಿದ್ದ ಹಳೆಯ ಜೈಲು ಕಟ್ಟಡ ತೆರವುಗೊಳಿಸಿ ಫ್ರೀಡಂ ಪಾರ್ಕ್ ಎಂದು ಕರೆದಿದ್ದೇವೆ.ಈ ಜಿಲ್ಲೆಯಲ್ಲಿ ಜನಿಸಿದ 12 ನೇ ಶತಮಾನದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಈ ಆವರಣಕ್ಕೆ ಇರಿಸುವುದು ಸೂಕ್ತ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಇಂದು ನಮ್ಮ ಸರ್ಕಾರ ಐದು ಕಾರ್ಯಕ್ರಮಗಳನ್ನಾಗಿ ಜಾರಿಗೊಳಿಸಿದ್ದೇವೆ.ಈ ಬಸವಣ್ಣ,ಕುವೆಂಪು ಅವರ ನಾಡಿನಲ್ಲಿ ನುಡಿದಂತೆ ನಡೆದ ಹೆಮ್ಮೆ ನಮ್ಮದಾಗಿದೆ.ಈ ಕಾರ್ಯಕ್ರಮಗಳು ಕೇವಲ ಜನರಿಗೆ ಹಣ ನೀಡುವದು ಮಾತ್ರವಲ್ಲ, ಅವರ ಬದುಕಿಗೆ ಭರವಸೆ ತುಂಬುವುದಾಗಿದೆ.ನುಡಿದಂತೆ ನಡೆದ ಈ ಸರ್ಕಾರ ಇಡೀ ದೇಶಕ್ಕೆ ಮಾದರಿಯಾಗಿದೆ.ಯುವನಿಧಿಯ ಕಾರ್ಯಕ್ರಮದಿಂದ ಕೇವಲ ಉದ್ಯೋಗ ಗಳಿಸುವುದμÉ್ಟೀ ಅಲ್ಲ ಯುವಜನರು ಕೌಶಲ್ಯ ಬೆಳೆಸಿಕೊಂಡು ಹತ್ತಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು ಎಂದು ಕಿವಿಮಾತು ಹೇಳಿದರು.ಗೃಹಜ್ಯೋತಿ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಸುಮಾರು ಒಂದರಿಂದ ಒಂದೂವರೆ ಸಾವಿರ ರೂ.ಲಾಭ ತಲುಪುತ್ತಿದೆ.ಗೃಹಲಕ್ಷ್ಮಿ,ಶಕ್ತಿ,ಅನ್ನಭಾಗ್ಯ ಯೋಜನೆಗಳ ಮೂಲಕ ಜನಸಾಮಾನ್ಯರ ಜೀವನಮಟ್ಟದಲ್ಲಿ ಸಾಕಷ್ಟು ಚೇತರಿಕೆ ಕಂಡು ಬರುತ್ತಿರುವುದು ಅಸಾಮಾನ್ಯ ಸಂಗತಿಯಾಗಿದೆ ಎಂದರು.
ಶಾಲಾ ಶಿಕ್ಷಣ,ಸಾಕ್ಷರತೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಾತನಾಡಿ,ಹೋರಾಟದ ನೆಲ,ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ,ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ ಎಂದರು. ಶಿವಮೊಗ್ಗ ನಗರದ ಹಳೆಯ ಜೈಲು ಕಟ್ಟಡದ ಈ ಆವರಣಕ್ಕೆ 12 ನೇ ಶತಮಾನದ ಶೂನ್ಯ ಸಿಂಹಾಸನಾಧ್ಯಕ್ಷ,ವೈರಾಗ್ಯನಿಧಿ ಅಲ್ಲಮಪ್ರಭು ಅವರ ನಾಮಕರಣ ಮಾಡಬೇಕು ಹಾಗೂ ಮಲೆನಾಡಿನ ಶರಾವತಿ ಸಂತ್ರಸ್ತರು, ಅರಣ್ಯ ಪ್ರದೇಶಗಳಲ್ಲಿ ಕೃಷಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಸೇಡಂ ಮಾತನಾಡಿ, ಯುವನಿಧಿ ಯೋಜನೆಗೆ ಈಗಾಗಲೇ ಸುಮಾರು 70 ಸಾವಿರ ವಿದ್ಯಾರ್ಥಿ ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದರು.ಪದವಿ,ಡಿಪೆÇ್ಲೀಮಾ ವ್ಯಾಸಂಗ ಮಾಡುತ್ತಿರುವ ಯುವಕರು ಕೂಡ ಯೋಜನೆ ಬಗ್ಗೆ ತಿಳಿದುಕೊಳ್ಳಬೇಕು.ಯುವ ನಿರುದ್ಯೋಗಿಗಳಿಗೆ ಕೇವಲ ಭತ್ಯೆ ನೀಡುವುದμÉ್ಟ ಅಲ್ಲ,ಶಿಕ್ಷಿತ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ರಾಜ್ಯ,ರಾಷ್ಟ್ರ,ವಿದೇಶಗಳಲ್ಲಿ ಉದ್ಯೋಗ ಒದಗಿಸುವ ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯಕ್ರಮಕ್ಕೆ ಸೇವಾ ಸಿಂಧು ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಬೇಕು.ಸ್ವಾವಲಂಬನೆಯ ಯುವಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡಿ ಪೆÇ್ರೀತ್ಸಾಹಿಸುವ ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮವನ್ನು ಯುವಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ನಿರುದ್ಯೋಗಿ ಯುವಕರ ಕೈಗೆ ಭತ್ಯೆ ಮಾತ್ರವಲ್ಲ ,ಸ್ವಾವಲಂಬಿಯಾಗಿ ಬದುಕುವ ಕೌಶಲ್ಯಗಳನ್ನು ಕಲಿಸಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿ ಅವರನ್ನು ತರಬೇತುಗೊಳಿಸಿ ,ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕಿನ ಸಾಲ ಪಡೆಯುವ ಕಾರ್ಯಕ್ಕೆ ನೆರವಾಗಬೇಕು ಎಂದರು.ಶಿವಮೊಗ್ಗದ ಕೃಷಿ ವಿವಿಗೆ ಇರುವಕ್ಕಿ ಬಳಿ ಮೂಲಸೌಕರ್ಯಗಳ ಅಭಿವೃದ್ಧಿ,ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಆಯುರ್ವೇದ ವಿವಿ ಸ್ಥಾಪನೆಗೆ ಮುಂಬರುವ ಬಜೆಟ್‍ನಲ್ಲಿ ಹಣ ಮೀಸಲಿಡಬೇಕು.ವಿಮಾನ ನಿಲ್ದಾಣದಲ್ಲಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು.ಶರಾವತಿ ಹಿನ್ನೀರಿನ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ನೀಡಲು ಉಂಟಾಗಿರುವ ತಾಂತ್ರಿಕ ತೊಂದರೆ ನಿವಾರಿಸಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವನಿಧಿಯ ಫಲಾನುಭವಿಗಳಾದ ಪುನೀತ್,ದರ್ಶನ್,ಪ್ರಜ್ವಲ್,ಪೂಜಾ ಸೇರಿದಂತೆ ಇತರರಿಗೆ ಸಾಂಕೇತಿಕವಾಗಿ ಚೆಕ್ ವಿತರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ನಗರದ ಫ್ರೀಡಂ ಪಾರ್ಕಿಗೆ ಶಿಕಾರಿಪುರದ ಬಳ್ಳಿಗಾವಿಯ ಅಲ್ಲಮಪ್ರಭುರವರ ಹೆಸರನ್ನು ಇಡುವಂತೆ ಮನವಿ ಮಾಡಿದ್ದು, ತಮ್ಮ ಅವಧಿಯಲ್ಲಿಯೇ ಹಳೇ ಜೈಲಿನ ಜಾಗದಲ್ಲಿ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಈ ಸ್ಥಳಕ್ಕೆ ಅನುಭವ ಮಂಟಪದ ಅಧ್ಯಕ್ಷರಾದ ‘ಅಲ್ಲಮ ಪ್ರಭು’ ರವರ ಹೆಸರು ಇಡುವುದು ಸೂಕ್ತ. ಹಾಗೂ ಎಂಪಿಎಂ ಉನ್ನತೀಕರಣದ ವಿಚಾರದಲ್ಲಿ ಸರ್ಕಾರ ತಮ್ಮ ಪರವಾಗಿದೆ.
-ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿಗಳು

ಸಚಿವರಾದ ಡಾ.ಎಂ.ಸಿ.ಸುಧಾಕರ್, ಕೆ.ಜೆ.ಜಾರ್ಜ್, ಬಿ.ನಾಗೇಂದ್ರ, ಮಂಕಾಳ ಎಸ್ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ,ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ, ಡಿ.ಜಿ.ಶಾಂತನಗೌಡ, ಶಾರದಾ ಪೂರ್ಯಾನಾಯಕ್, ಡಿ.ಎಸ್.ಅರುಣ್, ಟಿ.ಡಿ.ರಾಜೇಗೌಡ, ಜಿ.ಹೆಚ್.ಶ್ರೀನಿವಾಸ, ಹೆಚ್.ಡಿ.ತಮ್ಮಯ್ಯ, ಭೀಮಣ್ಣನಾಯ್ಕ ಮತ್ತಿತರ ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ವರಿಷಾಧಿಕಾರಿಗಳು ವೇದಿಕೆಯಲ್ಲಿದ್ದರು.
(ಫೋಟೊ ಇದೆ)

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page