ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ನಿಯಮಾನುಸಾರ ಜಾಹೀರಾತು ರೂಪಿಸಿ, ಪ್ರಾಮಾಣೀಕರಣ ಪಡೆದುಕೊಳ್ಳಿ

by | 15/04/23 | ಚುನಾವಣೆ-2023

ಚಿತ್ರದುರ್ಗ(ಜನಧ್ವನಿ ವಾರ್ತೆ)ಏ.15:
ಮಾದರಿ ನೀತಿ ಸಂಹಿತೆ ಹಾಗೂ ಚುನಾವಣೆ ಆಯೋಗ ರೂಪಿಸಿರುವ ನಿಯಮ ಹಾಗೂ ಮಾನದಂಡ ಪಾಲಿಸಿ, ಜಾಹೀರಾತುಗಳನ್ನು ರೂಪಿಸಿ ಜಿಲ್ಲಾ ಎಂ.ಸಿ.ಎಂ.ಸಿ (ಮಾಧ್ಯಮ ಪ್ರಮಾಣೀಕರಣ ಹಾಗೂ ನಿಗಾ ಸಮಿತಿ) ಪ್ರಮಾಣೀಕರಣವನ್ನು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಮಾಧ್ಯಮ ದೃಢೀಕರಣ ಮತ್ತು ಮೇಲ್ವಿಚಾರಣಿ ಸಮಿತಿ ಅಧ್ಯಕ್ಷರಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನಲೆಯಲ್ಲಿ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ವಿದ್ಯುನ್ಮಾನ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಹಮ್ಮಿಕೊಂಡಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವ ರಾಜಕೀಯ ಜಾಹೀರಾತುಗಳಿಗೆ ಮಾಧ್ಯಮ ಪ್ರಮಾಣೀಕರಣ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಮುದ್ರಣ ಮಾಧ್ಯಮದ ಮೂಲಕ ಪ್ರಸಾರ ಮಾಡುವ ಜಾಹೀರಾತುಗಳಿಗೆ ಪ್ರಾಮಾಣೀಕರಣದ ಅವಶ್ಯಕತೆ ಇಲ್ಲ. ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾದ ಜಾಹೀರಾತು ಆ ಪತ್ರಿಕೆಯ ಆನ್‍ಲೈನ್ ಸಂಚಿಕೆಯಲ್ಲಿಯೂ ಪ್ರಕಟವಾಗುವಂತಿದ್ದರೆ ಅಂತಹ ಜಾಹೀರಾತುಗಳಿಗೂ ಮಾಧ್ಯಮ ಪ್ರಮಾಣೀಕರಣ ಕಡ್ಡಾಯವಾಗಿದೆ. ಮತದಾನದ ಮುಕ್ತಾಯಕ್ಕೆ ನಿಗದಿಪಡಿಸಿದ ಸಮಯದ ಪೂರ್ವದ 48 ಗಂಟೆಗಳ ಅವಧಿಯಲ್ಲಿ ವಿದ್ಯುನ್ಮಾನ ಮಾಧ್ಯಮದಲ್ಲಿ ಚುನಾವಣೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಬಿತ್ತರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ ಈ ಅವಧಿಯಲ್ಲಿ ಮುದ್ರಣ ಮಾಧ್ಯಮದಲ್ಲಿ ಜಾಹೀರಾತು ಪ್ರಕಟಿಸಲು ಪ್ರಾಮಾಣೀಕರಣ ಕಡ್ಡಾಯವಾಗಿದೆ ಎಂದು ತಿಳಿಸಿದರು.
ರಾಜಕೀಯ ಪಕ್ಷಗಳ ವಿಡಿಯೋ ಜಾಹೀರಾತಿನಲ್ಲಿ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಯಾವುದೇ ರೀತಿಯ ಧಾರ್ಮಿಕ ಸ್ಥಳಗಳು, ಸರ್ಕಾರಿ ಕಟ್ಟಡ ಹಾಗೂ ಚಿಕ್ಕ ಮಕ್ಕಳನ್ನು ಬಳಸುವ ಆಗಿಲ್ಲ. ಆದರೆ ರಾಜಕೀಯ ಪಕ್ಷ ಅಥವಾ ಆಭ್ಯರ್ಥಿಯ ಸಾಧನೆಗಳನ್ನು ಆಡಿಯೋ ಮೂಲಕ ಹೇಳಬಹುದು ಎಂದರು.
ಏಪ್ರಿಲ್ 20 ನಂತರ ಅಂತಿಮ ಮತದಾರ ಪಟ್ಟಿ ಪ್ರಕಟ: ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ನಿಮಿತ್ತ ಏಪ್ರಿಲ್ 10ರ ವರೆಗೂ ಮತದಾರ ಪಟ್ಟಿಗೆ ಸೇರ್ಪಡೆಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಇದರಂತೆ ಜಿಲ್ಲೆಯಲ್ಲಿ ಹಲವು ಜನರು ಫಾರಂ ನಂಬರ್ 6 ರಲ್ಲಿ, ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಹಾಗೂ ಫಾರಂ ನಂಬರ್ 8ರಲ್ಲಿ ವರ್ಗಾವಣೆಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಚುನಾವಣೆ ಆಯೋಗದ ನಿರ್ದೇಶನದಂತೆ ಏಪ್ರಿಲ್ 10 ವರೆಗೆ ಅರ್ಜಿ ಸಲ್ಲಿಸಿ, ಏಪ್ರಿಲ್ 1 ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರನ್ನು ಮತದಾರ ಪಟ್ಟಿಗೆ ಸೇರಿಸಿ, ಏಪ್ರಿಲ್ 20 ನಂತರ ಅಂತಿಮ ಮತದಾರ ಪಟ್ಟಿಯನ್ನು ಪ್ರಕಟಿಸಲಾಗುವುದು. ಈ ಮತದಾರರ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ನೀಡಲಾಗುವುದು. ಗುರುತಿನ ಚೀಟಿ ವಿತರಿಸುವ ಕಾರ್ಯವು ಮುಂದುವರಿದಿದೆ. ಭಾರತೀಯ ಚುನಾವಣೆ ಆಯೋಗ ಗೊತ್ತು ಪಡಿಸಿದ ಇತರೆ ಗುರುತಿನ ಚೀಟಿಯನ್ನೂ ಸಹ ಬಳಸಿ ಮತಚಲಾಯಿಸಬಹುದು. ಜಿಲ್ಲೆಯ 6 ಮತಕ್ಷೇತ್ರ ವ್ಯಾಪ್ತಿಯಲ್ಲಿ 1648 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಹೆಸರು ಬದಲಾವಣೆಗೊಂಡ 11 ಮತಗಟ್ಟೆಗಳ ವಿವರನ್ನು ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗಿದ್ದು, ಹೆಸರು ಬದಲಾವಣೆಗೆ ಅನುಮತಿ ಪಡೆಯಲಾಗುವುದು. ಈ ಮಾಹಿತಿಯನ್ನು ರಾಜಕೀಯ ಪಕ್ಷಗಳು ಹಾಗೂ ಆಭ್ಯರ್ಥಿಗಳೊಂದಿಗೆ ಹಂಚಿಕೆ ಮಾಡಿಕೊಳ್ಳಬಹುದು. ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮತದಾನ ಕೇಂದ್ರ ಹಾಗೂ ಮತ ಎಣಿಕೆ ಕೇಂದ್ರದಲ್ಲಿ ಏಜೆಂಟ್‍ಗಳನ್ನು ನೇಮಿಸಲು ಅಗತ್ಯ ಫಾರಂಗಳನ್ನು ಈಗಾಗಲೇ ಚುನಾವಣೆ ಅಧಿಕಾರಿಗಳಿಗೆ ನೀಡಲಾಗಿದೆ. ಅಂಗವಿಕಲರು ಹಾಗೂ 80 ವರ್ಷ ದಾಟಿದವರಿಗೆ ಪೋಸ್ಟಲ್ ಬ್ಯಾಲೆಟ್ ನೀಡಲು ಫಾರಂಗಳನ್ನು ಈಗಾಗಲೇ ವಿತರಿಸಲಾಗಿದೆ. ಪೋಸ್ಟಲ್ ಬ್ಯಾಲೆಟ್ ಮತಪತ್ರ ಪಡೆಯಲು ಚುನಾವಣೆ ಅಧಿಕಾರಿಗಳು ಸಮಯ ನಿಗದಿ ಮಾಡಿ, ಮತದಾರರ ಸ್ಥಳಗಳಿಗೆ ತೆರಳುವರು. ಈ ಸಂದರ್ಭಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ತಮ್ಮ ಏಜೆಂಟ್‍ರನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಸಭೆಯಲ್ಲಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾತನಾಡಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಯಾವುದೇ ರೀತಿಯ ಪಕ್ಷಪಾತ ಮಾಡಿಲ್ಲ. ಸಂಚಾರಿ ತನಿಖಾ ತಂಡಗಳು ನೀಡಿದ ವರದಿ ಆಧಾರಿಸಿ ಪ್ರಕರಣ ದಾಖಲಿಸಲಾಗಿದೆ. ನಿಯಮಾನುಸಾರ ಅನುಮತಿ ಪಡೆದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಮಾತನಾಡಿ, ನಾಮಪತ್ರ ಸಲ್ಲಿಕೆ ವೇಳೆಯಲ್ಲಿಯೇ ಅಭ್ಯರ್ಥಿಗಳು ತಮ್ಮ ಪರವಾಗಿ ನೇಮಿಸಲಾದ ಪ್ರತಿನಿಧಿಗಳ ವಿವರವನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ನೀಡಬೇಕು. ಈ ಪ್ರತಿನಿಧಿಗಳು ಅಭ್ಯರ್ಥಿಯ ಪರವಾಗಿ ಎಲ್ಲ ಚುನಾವಣಾ ಕಾರ್ಯಗಳಲ್ಲಿಯೂ ಪಾಲ್ಗೊಳ್ಳಲು ಹಾಗೂ ಚುನಾವಣಾಧಿಕಾರಿಗಳೊಂದಿಗೆ ವ್ಯವಹರಿಸಲು ಕಾನೂನುಬದ್ಧ ಹಕ್ಕು ಪಡೆದಿರುತ್ತಾರೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕಾಗಿ ಮಾಧ್ಯಮಗಳನ್ನು ಬಳಕೆ ಮಾಡಿಕೊಳ್ಳುತ್ತಿರುವ ನಿಟ್ಟಿನಲ್ಲಿ ಕೆಲವು ಮಾರ್ಗಸೂಚಿಗಳು ರಾಜಕೀಯ ಪಕ್ಷಗಳಿಗಿದ್ದು, ಯಾವುದೇ ಜಾಹೀರಾತು, ಹಾಕುವಾಗ ಜಾಹೀರಾತು ಪ್ರಮಾಣೀಕರಣಕ್ಕಾಗಿ ಮಾದರಿ ನೀತಿ ಸಂಹಿತೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಜಾಹೀರಾತು ತಯಾರಿಸಿ ಕೊಡಬೇಕು. ಫೇಸ್‍ಬುಕ್, ವಾಟ್ಸಪ್, ಯೂಟ್ಯೂಬ್, ಇನ್‍ಸ್ಟ್ರಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣ ಎಲ್ಲ ಮಾಧ್ಯಮಗಳಿಗಿಂತ ತುಂಬಾ ಶಕ್ತಿಶಾಲಿಯಾಗಿ ಮಾಧ್ಯಮವಾಗಿ ಬಳಕೆಯಾಗುತ್ತಿದೆ. ಭಾರತ ಚುನಾವಣಾ ಆಯೋಗದ 2012ರ ನಿರ್ದೇಶನದ ಪ್ರಕಾರ ಅಭ್ಯರ್ಥಿಯು ನಾಮಪತ್ರ ಸಲ್ಲಿಸುವಾಗ ಪ್ಯಾರಾ 3ರಲ್ಲಿ ಎಲ್ಲ ಸೋಷಿಯಲ್ ಮೀಡಿಯಾ ಅಕೌಂಟ್ ಹಾಗೂ ಇ-ಮೇಲ್ ಐಡಿ ವಿಳಾಸ ಕೊಡಬೇಕು. ಅಭ್ಯರ್ಥಿಗಳ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಸಾಮಾಜಿಕ ಜಾಲತಾಣಗಳ ನಿಗಾ ಕೋಶ ಕಾರ್ಯನಿರ್ವಹಿಸುತ್ತಿದೆ ಎಂದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಮನಹರಿಸಿ: ಎಲ್ಲಾ ರಾಜಕೀಯ ಪಕ್ಷಗಳ ಸೋಷಿಯಲ್ ಮೀಡಿಯಾ ಘಟಕಗಳಿದ್ದು, ಈ ಸೋಷಿಯಲ್ ಮೀಡಿಯಾ ಘಟಕಗಳ ಮೂಲಕ ಹಾಗೂ ಬೆಂಬಲಿಗರ ಮೂಲಕ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಮಾಡಲಾಗುವ ಎಲ್ಲಾ ಪೋಸ್ಟ್‍ಗಳನ್ನು ಚುನಾವಣಾ ಉದ್ದೇಶಕ್ಕಾಗಿ ಸ್ಥಾಪಿಸಲಾದ ಜಿಲ್ಲಾ ಸೋಷಿಯಲ್ ಮೀಡಿಯಾ ಸೆಲ್‍ನಲ್ಲಿ ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘಿಸುವಂತಹ ಪೋಸ್ಟ್‍ಗಳನ್ನು ಮಾಡಿದ್ದಲ್ಲಿ ನಿಯಮಾನುಸಾರ ಕ್ರಮವಹಿಸಲಾಗುವುದರಿಂದ ರಾಜಕೀಯ ಪಕ್ಷಗಳು ಚುನಾವಣಾ ಮಾದರಿ ನೀತಿ ಸಂಹಿತೆ ಗಮನದಲ್ಲಿರಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಚುನಾವಣಾ ಪ್ರಚಾರ ಕೈಗೊಳ್ಳಬಹುದಾಗಿದೆ.
ಜಾಹೀರಾತು, ಪೋಸ್ಟರ್‍ಗಳು ಯಾವುದೇ ಧರ್ಮ, ಜಾತಿ, ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಂಡು ಟೀಕೆ ಮಾಡುವಂತಿಲ್ಲ. ಸೈನಿಕರ ಫೋಟೋ ಬಳಸಿಕೊಂಡು ಜಾಹೀರಾತು ಮಾಡುವಂತಿಲ್ಲ. ಯಾವುದೇ ಅಭ್ಯರ್ಥಿಯು ವೈಯಕ್ತಿಕ ಜೀವನದ ತೇಜೋವಧೆ ಮಾಡುವಂತಿಲ್ಲ. ಹಾಗಾಗಿ ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು.
ಸರ್ಕಾರಿ ಕಟ್ಟಡಗಳು, ಧಾರ್ಮಿಕ ಸ್ಥಳಗಳು ಹಾಗೂ ಶಾಲಾ ಮಕ್ಕಳನ್ನು ಯಾವುದೇ ಕಾರಣಕ್ಕಾಗಿ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವಂತಿಲ್ಲ. ಇತರೆ ದೇಶಗಳ ಟೀಕೆ, ಧರ್ಮಗಳು ಹಾಗೂ ಸಮುದಾಯಗಳ ಮೇಲೆ ದಾಳಿ, ಯಾವುದಾದರೂ ಆಶ್ಲೀಲ ಅಥವಾ ಮಾನನಷ್ಟ, ಹಿಂಸೆಯ ಪ್ರಚೋದನೆ, ನ್ಯಾಯಾಲಯದ ನಿಂದನೆ, ರಾಷ್ಟ್ರಪತಿ ಮತ್ತು ನ್ಯಾಯಾಂಗದ ಸಮಗ್ರತೆಯ ವಿರುದ್ಧದ ವಾಗ್ದಾಳಿ, ರಾಷ್ಟ್ರದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಯ ಮೇಲೆ ಪರಿಣಾಮ ಬೀರುವ ಹೇಳಿಕೆ ನಿಷೇಧಿಸಲಾಗಿದ್ದು, ಈ ಎಲ್ಲ ಅಂಶಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು
ಕಾಸಿಗಾಗಿ ಸುದ್ದಿ ಎಂದು ದೃಢಪಟ್ಟ ಪ್ರಕರಣಗಳಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಪರಿಗಣಿಸಲಾಗುವುದು. ದಿನಪತ್ರಿಕೆಗಳಲ್ಲಿ ಸುದ್ದಿ, ಲೇಖನ ಹಾಗೂ ಜಾಹೀರಾತು ಕೊಡುವಾಗ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪಿಪಿಟಿ ಮೂಲಕ ಕಾಸಿಗಾಗಿ ಸುದ್ದಿ, ಎಂಸಿಎಂಸಿ ಹಾಗೂ ಸಾಮಾಜಿಕ ಜಾಲತಾಣ ಬಳಕೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಮಾರ್ಗಸೂಚಿಗಳ ಉಲ್ಲಂಘನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ವಾರ್ತಾಧಿಕಾರಿ ಆರ್.ರಾಜು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page