ರಾಜಕೀಯ ವಿಕೇಂದ್ರಿಕರಣದ ಜೊತೆಗೆ ಆರ್ಥಿಕ ವಿಕೇಂದ್ರೀಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by | 24/03/23 | ಸುದ್ದಿ


ಬೆಂಗಳೂರು : ಪ್ರತಿ ಗ್ರಾಮ ಪಂಚಾಯಿತಿಗಳ ವಿವೇಚನೆಗೆ ಆಸ್ತಿ ನಿರ್ವಹಣೆ ಮಾಡುವ ಸಲುವಾಗಿ ದುಪ್ಪಟ್ಟು ಅನುದಾನ ನೀಡಿ ಇದಕ್ಕಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ನೀಡಲಾಗುತ್ತಿದೆ. ರಾಜಕೀಯ ವಿಕೇಂದ್ರಿಕರಣದ ಜೊತೆಗೆ ಆರ್ಥಿಕ ವಿಕೇಂದ್ರೀಕರಣವನ್ನೂ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಿರುವ 2019-2020, 2020-2021 ಹಾಗೂ 2021-2022ನೇ ಸಾಲಿನ “ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ – 2023 ಹಾಗೂ ಪಂಚತಂತ್ರ 2.0 ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ ತೆರಿಗೆ ಸಂಗ್ರಹದ PoS ಉಪಕರಣಗಳ ಲೋಕಾರ್ಪಣೆ ಮತ್ತು ಜಲಶಕ್ತಿ ಅಭಿಯಾನಕ್ಕೆ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಗ್ರಾಮ ಪಂಚಾಯಿತಿಗಳಿಗೆ ಶಕ್ತಿ :

ಜನರ ಸುತ್ತಲೂ ಅಭಿವೃದ್ಧಿಯಾಗಬೇಕು. ಅಭಿವೃದ್ಧಿಗಾಗಿ ಜನ ಓಡಾಡುವಂತಾಗಬಾರದು. ಜನರಿದ್ದಲ್ಲಿ ಆಡಳಿತ, ಅಭಿವೃದ್ಧಿ ಯಾಗಬೇಕು. ಬಾಪೂಜಿ ಕೇಂದ್ರದ ತಂತ್ರಾಂಶಗಳ ಮೂಲಕ ಇನ್ನಷ್ಟು ವೇಗವಾಗಿ ಕೆಲಸಗಳನ್ನು ಮಾಡಲು ಬಾಪೂಜಿ 02 ಯಿಂದ ಅನುಕೂಲ ಲವಾಗಲಿದೆ. ಇದರ ಜೊತೆಗೆ ಸೇವಾ ಭತ್ಯೆಗಳನ್ನು ಒಂದು ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಧ್ಯಕ್ಷರಿಗೆ ಆರು ಸಾವಿರ ದೊರೆಯುವಂತೆ ಮಾಡಲಾಗಿದೆ. ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಹಳಷ್ಟು ಮಹತ್ವ ನೀಡಿದೆ. ಬರುವ ದಿನಗಳಲ್ಲಿ ಇದಕ್ಕೆ ಇನ್ನಷ್ಟು ಶಕ್ತಿಯನ್ನು ತುಂಬಲಾಗುವುದು. ಜನರಿಗೆ ಅತ್ಯಂತ ಹತ್ತಿರವಿರುವ ಸರ್ಕಾರ ಗ್ರಾಮ ಪಂಚಾಯಿತಿಯನ್ನು ಬಲಪಡಿಸಲಾಗುವುದು ಎಂದರು.

ಗ್ರಾಮೀಣಾಭಿವೃದ್ಧಿ ಈ ದೇಶದ ಸಮಗ್ರ ಅಭಿವೃದ್ಧಿಯ ಮೂಲ :

ಗ್ರಾಮೀಣಾಭಿವೃದ್ಧಿ ಈ ದೇಶದ ಸಮಗ್ರ ಅಭಿವೃದ್ಧಿಯ ಮೂಲ. ಅಬ್ದುಲ್ ನಜೀರ್ ಸಾಬ್ ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯ ಹರಿಕಾರರು. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ವರ ನೇತೃತ್ವದಲ್ಲಿ ಪ್ರಾರಂಭವಾಗಿ ನಮ್ಮದೇ ಕಾನೂನು ರೂಪಿಸಲಾಯಿತು. 73 ನೇ ತಿದ್ದುಪಡಿ ತಂದು ದೇಶವ್ಯಾಪಿ ಕರ್ನಾಟಕದ ಮಾದರಿ ಅನುಷ್ಠಾನವಾಗಿದೆ. ಮೂರು ಹಂತದ ಪಂಚಾಯತ್ ವ್ಯವಸ್ಥೆ ಯಶಸ್ವಿಯಾಗಲು ಆರ್ಥಿಕ ಅಧಿಕಾರ ನೀಡಬೇಕೆಂಬ ಬೇಡಿಕೆ ಇತ್ತು ಎಂದರು.

ದೇಶದಲ್ಲಿಯೇ ನಂಬರ್ ಒನ್‌:

ನರೇಗಾದಲ್ಲಿ ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡಿದ್ದು ದೇಶದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದೆ. ನಿಗದಿಯಾದ ಗುರಿ ಮೀರಿ ಸಾಧನೆ ಮಾಡಿ ಹೆಚ್ಚುವರಿ ಅನುದಾನವನ್ನು ರಾಜ್ಯ ನಿರಂತರವಾಗಿ ಪಡೆದಿದೆ ಎಂದರು.

ಬದಲಾವಣೆಯ ನಿರೀಕ್ಷೆ :

ನರೇಗಾದಿಂದ ಸಾಕಷ್ಟು ಆಸ್ತಿ ನಿರ್ಮಾಣವಾಗಿದೆ. ಸಾಕಷ್ಟು ಜನರಿಗೆ ಕೆಲಸ ದೊರೆತಿದೆ. ಇದನ್ನು ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿನಲ್ಲಿ ಕೆಲವು ಬದಲಾವಣೆ ತರಬೇಕಾಗಿತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಲೆ, ಆಸ್ಪತ್ರೆಗಳಿಗೆ ನರೇಗಾ ಬಳಕೆ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರ ಬಳಿ ಮಾತನಾಡಿದ್ದು, ಶೀಘ್ರ ದಲ್ಲಿಯೇ ಬದಲಾವಣೆ ನಿರೀಕ್ಷೆ ಮಾಡುತ್ತಿದ್ದೇವೆ ಎಂದರು.

ದುಪ್ಪಟ್ಟು ಅನುದಾನ :

ಈ ವರ್ಷದ ಬಕೆಟ್ ನಲ್ಲಿ ಎ. ಬಿ.ಸಿ ಪಂಚಾಯಿತಿಗಳಿಗೆ ದುಪ್ಪಟ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಎಂದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page