ರಾಜಕೀಯ

ನಗರಸಭೆ ಸದಸ್ಯತ್ವಕ್ಕೆ ನಗರಸಭೆ ಸದಸ್ಯ ಕೆ.ಸಿ.ನಾಗರಾಜ (ಕೆ.ಸಿ.ಎನ್.ರಾಜು) ರಾಜಿನಾಮೆ.


ಚಳ್ಳಕೆರೆ ಜನಧ್ವನಿ ವಾರ್ತೆ ಜೂ29 ನಗರಸಭೆ ಸದಸ್ಯತ್ವ ಸ್ಥಾನಕ್ಕೆ ಸದಸ್ಯರೊಬ್ಬರು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ನಿಡಿದ್ದಾರೆ. ಹೌದು ಇದು ಚಳ್ಳಕೆರೆ ನಗರದ ನಾಲ್ಕನೇ ವಾರ್ಡ್ ಸದಸ್ಯ ಕೆ.ಸಿ.ನಾಗರಾಜ್ ನಗರಸಭೆ ಸದಸ್ಯತ್ವಕ್ಕೆ ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಮನವಿಯಲ್ಲಿ ನಾನು ನನ್ನ ವೈಯಕ್ತಿಕ ಕಾರಣದಿಂದ ನನ್ನ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೇಯನ್ನು ನೀಡುತ್ತಿದ್ದೇನೆ, ನನ್ನ ರಾಜೀನಾಮೇಯನ್ನು ಅಂಗೀಕರಿಸಿ ಸದಸ್ಯ ಸ್ಥಾನದಿಂದ ಬಿಡುಗಡೆಗೊಳಿಸಲು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೀದ್ದೇನೆ, ನಾನು ನನ್ನ ಸ್ವ-ಇಚ್ಚೆಯಿಂದ ಯಾವುದೇ ಒತ್ತಡ ಇಲ್ಲದೆ ರಾಜೀನಾಮೇಯನ್ನು ನೀಡುತ್ತಿದ್ದೇನೆ ಈವರೆಗೂ ನಗರಸಭೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೂ ನನ್ನ ನಮಸ್ಕಾರಗಳು ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ. ಕೆ.ಸಿ.ನಾಗರಾಜ (ಕೆ.ಸಿ.ಎನ್.ರಾಜು)

ಆಗ್ನೇಯ ಶಿಕ್ಷಕರ ಮತ ಎಣಿಕೆ ಕಾರ್ಯ ಪೂರ್ಣ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆ ಗೆಲುವು


ಚಿತ್ರದುರ್ಗ:
ಆಗ್ನೇಯ ಶಿಕ್ಷಕರ ಮತ ಎಣಿಕೆ ಕಾರ್ಯ ಬೆಂಗಳೂರಿನಲ್ಲಿ ಮುಂದುವರೆದಿದ್ದು ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಎಲ್ಲರಿಗಿಂತ ಮುನ್ನಡೆ ಸಾಧಿಸಿದ್ದಾರೆ.
ಈಗಾಗಲೇ ಮೊದಲ ಪ್ರಾಶಸ್ತ್ಯ ಮತ ಎಣಿಕೆ ಕಾರ್ಯದಲ್ಲಿ 24094 ಮತಗಳ ಎಣಿಕೆ ಪೂರ್ಣವಾಗಿದೆ. ಡಿ.ಟಿ. ಶ್ರೀನಿವಾಸ್ ಅವರು 8871 ಮತಗಳನ್ನು ಪಡೆದು ಎಲ್ಲರಿಗಿಂತ ಮುನ್ನಡೆ ಸಾಧಿಸಿದ್ದಾರೆ.
ಹಾಲಿ ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು 7113 ಮತಗಳನ್ನು ಪಡೆದು 2 ನೇ ಸ್ಥಾನಕ್ಕೆ ಕುಸಿದಿದ್ದರೆ, ಇನ್ನು ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ ಅವರು 6863 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
2ನೇ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ಮುಗಿದಿದ್ದು ಡಿ.ಟಿ.ಶ್ರೀನಿವಾಸ್ ಅಪೂರ್ವ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದೆ.

ಆಗ್ನೇಯ ಶಿಕ್ಷಕರ ಚುನಾವಣೆಗೆ ಸಕಲ ಸಿದ್ದತೆ ತಹಶೀಲ್ದಾರ್ ರೇಹಾನ್ ಪಾಷ.


ಚಳ್ಳಕೆರೆ ಜೂ.2 ಜೂ.3 ರಂದು ಸೋಮವಾರ
ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ
ವಿಧಾನ ಪರಿಷತ್ ಚುನಾವಣೆಯ ಮತದಾನಕ್ಕೆ
ತಾಲೂಕು ಆಡಳೀತ ಸಕಲ ಸಿದ್ಧತೆ ಮಾಡಿಕೊಂಡಿದ್ದು,
ಒಟ್ಟು1019 ಮಂದಿ ಶಿಕ್ಷಕ ಮತದಾರರು
ತಮ್ಮ ಹಕ್ಕು ಚಲಾಯಿಸಲಿದ್ದಾರೆ ಮತದಾನ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆಹಲ್ಲಿ ಮತಗಟ್ಟೆ ಕೇಂದ್ರ ಪ್ರಾರಂಭಿಸಿದ್ದು ಬೆಳಗ್ಗೆ 8 ರಿಂದ ಸಂಜೆ4 ಗಂಟೆಯವರೆಗೆ ಮತದಾನ ನಡೆಯಲಿದೆ ಮತ ಎಣಿಕೆ ಜೂ.6 ರಂದು ನಡೆಯಲಿದೆ ಎಂದು ತಹಶೀಲ್ದಾರ್
ರೇಹಾನ್ ಪಾಷ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಹೆಚ್ಚಿದ್ದರೂ ವಿಧಾನ ಪರಿಷತ್ತಿನಲ್ಲಿ ಬಹುತವಿಲ್ಲ: ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್


ಚಿತ್ರದುರ್ಗ:
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಹೆಚ್ಚಾಗಿದ್ದರೂ ಪರಿಷತ್ತಿನಲ್ಲಿ ಬಹುಮತವಿಲ್ಲ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲಾ ಕಾರ್ಯಕರ್ತರು ಪ್ರಾಮಾಣಿಕವಾಗಿ ಕಾರ್ಯ ಪ್ರವೃತ್ತರಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಗ್ನೆಯ ಶಿಕ್ಷಕರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಪಕ್ಷ ಚುನಾವಣೆಯನ್ನು ಗಂಭೀರವಾಗಿ ತಗೆದುಕೊಂಡಿದ್ದು, ಮೇಲ್ಮನೆಯಲ್ಲಿ ನಮ್ಮ ಸಂಖ್ಯೆ ಹೆಚ್ಚಾಗಲು ನಮ್ಮ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರನ್ನು ಗೆಲ್ಲಿಸಬೇಕು ಎಂಬುದಾಗಿ ಅಭಿಪ್ರಾಯ ಪಟ್ಟರು.
ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಸಂಖ್ಯೆ ಸೀಮಿತವಾಗಿರುತ್ತದೆ. ಆದ್ದರಿಂದ ನಮ್ಮ ಕಾರ್ಯಕರ್ತರು , ಮುಖಂಡರು ತಮ್ಮ ಊರಿನ ಶಿಕ್ಷಕರನ್ನು ಮಾತನಾಡಿಸಿ ಅವರನ್ನು ಕರೆತಂದು ಮತ ಹಾಕಿಸಿದರೆ ಸಾಕು ಎಂಬುದಾಗಿ ಅವರು ಸಲಹೆ ನೀಡಿದರು.
ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಮಾತನಾಡಿ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದ್ದರೂ, ವಿಧಾನಸಭೆಯಲ್ಲಿ ಪಾಸು ಮಾಡಿದ ಕಾಯ್ದೆಗಳು ಮೇಲ್ಮನೆಯಲ್ಲಿ ಅಂಗೀಕಾರಗೊಂಡು ಕಾನೂನಾಗಲು ಬಹುಮತ ಮುಖ್ಯ. ಈ ನಿಟ್ಟಿನಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿದೆ ಎಂದರಲ್ಲದೆ,
ಈ ಹಿಂದೆ ಕಾಂಗ್ರೆಸ್ ವಿಧಾನಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ, ಈ ಬಾರಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ ಜಿಲ್ಲೆಗೆ ಉಸ್ತುವಾರಿ ಸಚಿವರು ಜವಬ್ದಾರರಾಗಿರುತ್ತಾರೆ ಹಾಗೆಯೇ ತಾಲ್ಲೂಕಿಗೆ ಶಾಸಕರು ಜವಬ್ದಾರಿ ತೆಗೆದುಕೊಳ್ಳಬೇಕು.
ನಾಳೆಯ ಒಳಿತಿಗಾಗಿ ಜಿಲ್ಲಾ ಮಟ್ಟದಲ್ಲಿ ವಾರ್ ರೂಂ ಸ್ಥಾಪಿಸಬೇಕು. ಪ್ರತಿ 5 ಶಿಕ್ಷಕರಿಗೆ ಒಬ್ಬ ಕಾರ್ಯಕರ್ತರನ್ನು ನಿಗದಿ ಮಾಡಬೇಕು ಎಂಬುದಾಗಿ ಅವರು ಸೂಚನೆ ನೀಡಿದರು.
ಶಿಕ್ಷಕರ ಕ್ಷೇತ್ರದ ಡಿ.ಟಿ.ಶ್ರೀನಿವಾಸ್ ಮಾತನಾಡಿ ನಮ್ಮ ಪಕ್ಷ ಶಿಕ್ಷಕರ ಪರವಾಗಿದೆ. ಒಪಿಎಸ್ ಪರವಾಗಿ ಕಾಂಗ್ರೆಸ್ ಇದೆ. ಶಿಕ್ಷಕರು ನಿವೃತ್ತರಾದಾಗ ಅವರ ನೆರವಿಗೆ ನಿಲ್ಲುವುದು ನಮ್ಮ ಪಕ್ಷ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು ಎಂಬುದಾಗಿ ಅವರು ತಿಳಿಸಿದರು.
ಈವರೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಳಮಟ್ಟದ ಕಾರ್ಯಕರ್ತರು ಕೆಲಸ ಮಾಡಲು ಆಗಿಲ್ಲ. ಆದರೆ, ಈ ಬಾರಿ 6 ತಿಂಗಳ ಮೊದಲೇ ಅಭ್ಯರ್ಥಿ ಘೋಷಣೆ ಆಗಿರುವುದರಿಂದ ನಾನು ಮತ್ತು ಮಾಜಿ ಶಾಸಕಿ ಪೂರ್ಣಿಮಾ ಒಂದು ಸುತ್ತು ಪ್ರವಾಸ ಮಾಡಿದ್ದೇವೆ. ಈಗ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿರುವ ಶಿಕ್ಷಕ ಮತದಾರರ ಮನವೊಲಿಸಬೇಕು ಎಂಬುದಾಗಿ ಅವರು ತಿಳಿಸಿದರು.
ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯಧ್ಯಕ್ಷ ಬಿ.ಎನ್.ಚಂದ್ರಪ್ಪ, ಕ್ಷೇತ್ರದ ಉಸ್ತುವಾರಿ ಹುಸೇನ್, ಪ್ರಧಾನ ಕಾರ್ಯದರ್ಶಿ ಜೆ.ಜೆ. ಹಟ್ಟಿತಿಪ್ಪೇಸ್ವಾಮಿ, ಮುಖಂಡರುಗಳಾದ ಜಿ.ಎಸ್. ಮಂಜುನಾಥ್, ಹನುಮಲಿ ಷಣ್ಮುಖಪ್ಪ, ಯೋಗೀಶ್ ಬಾಬು, ರಘು, ಲಕ್ಷ್ಮಿಕಾಂತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಇವರಿಗೆ ಮತ ನೀಡುವಂತೆ ಶಾಸಕ ಟಿ.ರಘುಮೂರ್ತಿ ಮತಯಾಚನೆ.


ಚಳ್ಳಕೆರೆ ಮೇ 18 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಮಾಡಿದ ಬೆನ್ನಲ್ಲೆ ಈಗ ಆಗ್ನೇಯ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಡಿ.ಟಿ .ಶ್ರೀನಿವಾಸ್ ಪರ ಶಾಸಕ ಟಿ.ರಘುಮೂರರ್ತಿ ಮತಯಾಚನೆ ಮಾಡಲು ಮುಂದಾಗಿದ್ದಾರೆ.

ಹೌದು ಇದು ಚಳ್ಳಕೆರೆ ನಗರದ ಹೆಚ್ ಪಿಪಿಸಿ ಸರಕಾರಿ ಪ್ರದವಿಪೂರ್ವ ಕಾಲೇಜ್, ಖಾಸಗಿ ಅನುದಾನಿತ ಹಾಗೂ ಅನುದಾನ ರಹಿಸಿ ಶಿಕ್ಷಣ ಸಂಸ್ಥೆಯ ಮುಖ್ಯರ ಹಾಗೂ ಶಿಕ್ಷಕರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಡಿ,ಟಿ,ಶ್ರೀನಿವಾಸ್ ಮೊದಲ ಪ್ರಾಶಸ್ತ ಮತ ನೀಡುವಂತೆ ಮನನಿ ಮಾಡಿಕೊಂಡಿದ್ದಾರೆ.
ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಪಕ್ಷದ ಬಹುಮತ ಇರಬೇಕು,ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ ಆಯೋಗದ ಸಿದ್ದತೆ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿ ಗೆಗೆ ಶಿಕ್ಷಣ ವಲಯ ಅಭಿವೃದ್ದಿಯಾಗಬೇಕಿದೆ.

ಶೈಕ್ಷಣಕ ಕಾರ್ಯಕ್ರಮಗಳಾಗಿ ಬಿಸಿಯೂಟ, ಶೂ ಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿದ್ಯಾರ್ಥಿಗಳ ಶಿಕ್ಷಣ ಪ್ರಗತಿ ಮತ್ತು ದಾಖಲಾತಿ ಹೆಚ್ಚಳ ಆಗುವ ರೀತಿ ಯೋಜನೆಗಳನ್ನು ಜಾರಿ ಮಾಡಿರುವ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಬಲಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಎನ್‌ಪಿಎಸ್ ರದ್ದು ಮಾಡಬೇಕೆಂದು ಫ್ರೀಡಮ್ ಪಾರ್ಕಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿ ಆತ್ಮಹತ್ಯೆಗೂ ಯತ್ನಿಸಿದ್ದರೂ ಕಳೆದ ಬಿಜೆಪಿ ಸರ್ಕಾರದಲ್ಲಿ ನ್ಯಾಯ ಸಿಗಲಿಲ್ಲ. ಎನ್‌ಪಿಎಸ್ ರದ್ದುಪಡಿಸಲು ಮತ್ತು 7 ನೇ ವೇತನ ಜಾರಿ ಮಾಡಲು 2ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದತೆ ಮಾಡಿಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಸಮಾನವಾಗಿ ಕಾಣಬೇಕಿದೆ. ಕಳೆದ ಬಿಜೆಪಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುವಲ್ಲಿ ಜಾತಿ, ವರ್ಗ ಬೇಧ ಮಾಡಲಾಯಿತು. ಸಾಮಾಜಿಕ ನ್ಯಾಯಬದ್ದತೆಯಲ್ಲಿ ಆಡಳಿತ ಮಾಡುವ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ಸ್ಪರ್ಧಿಸಲು ಅವಕಾಶವಾಗಿದೆ. ಮತದಾನ ಗೆಲ್ಲಿಸಬೇಕು ಎಂದರು.


ಕೆಪಿಸಸಿ ಪ್ರಧಾನ ಕಾರ್ಯದರ್ಶಿ ನರ್ಲಗಗುಂಟೆ ರಾಮಪ್ಪ,ಜಿ.ಪಂ ಮಾಜಿ ಅಧ್ಯಕ್ಷರಾದ ಬಾಲರಾಜ್, ಟಿ. ರವಿಕುಮಾರ್, ಶಶಿಕಲಾ ಸುರೇಶ್‌ಬಾಬು, ಸದಸ್ಯ ಜಿ.ಟಿ. ಬಾಬುರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ. ವೀರಭದ್ರಯ್ಯ, ಜಿ.ಟಿ. ಶಶಿಧರ, ಶಿಕ್ಷಕರಾದ ಜಿ.ಟಿ. ವೀರಭದ್ರಸ್ವಾಮಿ, ಎಲ್. ರುದ್ರಮುನಿ, ದೊಡ್ಡಯ್ಯ, ಸೂರನಾಯಕ, ಡಿ.ಟಿ. ಶ್ರೀನಿವಾಸನ್, ಗುರುಲಿಂಗಪ್ಪ, ಸಿ.ಟಿ. ವೀರೇಶ್, ಚಿಕ್ಕಣ್ಣ, ಮಾರುತಿ, ಅನ್ವರ್, ಮುಖಂಡರಾದ ಬಿ.ವಿ. ಸಿರಿಯಪ್ಪ, ಬ್ಯಾಂಕ್ ಸೂರಯ್ಯ, ಪ್ರಭುಸ್ವಾಮಿ, ತಿಪ್ಪೇರುದ್ರಪ್ಪ, ಸಿದ್ದಲಿಂಗಪ್ಪ ಇತರರಿದ್ದರು.

ಡಿ.ಟಿ.ಶ್ರೀನಿವಾಸ್ ಪರ ಮಾಜಿ ಶಾಸಕಿ ಪೂರ್ಣೀಮಶ್ರೀನಿವಾಸ್ ಮತಯಾಚನೆ


ಚಳ್ಳಕೆರೆ ಮೇ.16 ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ಚಳ್ಳಕೆರೆ ತಾಲೂಕಿನ ವಿಬಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದ ಮಾಜಿ ಶಾಸಕಿ ಕೆ.ಪೂರ್ಣಿಮಾ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿಟಿ.ಶ್ರೀನಿವಾಸ್.ಪರವಾಗಿ ಮತಯಾಚನೆ ಮಾಡಲಾಯಿತು.


ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸನ್ನಕುಮಾರ್.ಕುಮ್ಮಿ ಜಿಟಿ.ಶಶಿಧರ್,ಶ್ರೀಕಂಠಯ್ಯ,ಮೂಡಲಗಿರಿಯಪ್ಪ, ಮಂಜುಣ್ಣ, ಸಿದ್ದಾಪುರ ಮಂಜುನಾಥ, ಮುಖ್ಯ ಶಿಕ್ಷಕರಾದ ಜಿ ಟಿ ವೀರಭದ್ರ ಸ್ವಾಮಿ ಗಿರೀಶ್ ದೊಡ್ಡಯ್ಯ ಶ್ರೀನಿವಾಸ್ ಸೇರಿದಂತೆ ತಾಲೂಕಿನ ಶಿಕ್ಷಕರು ಹಾಗೂ ಕಾಂಗ್ರೆಸ್ ಮುಖಂಡರು ಶಿಕ್ಷಕ ಬಂಧುಗಳು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆ ಮೊದಲನೇ ಪ್ರಶಸ್ಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೀಡುವ ಮೂಲಕ ಅಭ್ಯರ್ಥಿಗೆ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ.


ಮೊಳಕಾಲ್ಮೂರು ಮೇ15. ರಾಂಪುರ ಎಸ್ ಪಿ ಎಸ್ ಆರ್ ಶಾಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಕಾಂಗ್ರೆಸ್ ಪಕ್ಷದ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಿ ಟಿ ಶ್ರೀನಿವಾಸ್ ಅವರ ಪರವಾಗಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು


ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆ ಮೊದಲನೇ ಪ್ರಶಸ್ಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೀಡುವ ಮೂಲಕ ಅಭ್ಯರ್ಥಿಗೆ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಂಸ್ಥೆಯ ಅಧ್ಯಕ್ಷರಾದ ಬಿ ಪಿ ಜಯಪ್ರಕಾಶ್ ಮುಖಂಡರಾದ ಎಚ್ ಟಿ ನಾಗರೆಡ್ಡಿ, ವಿವಿಧ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ ರಿಂದ ಚುನಾವಣೆನಾಮಪತ್ರ ಸಲ್ಲಿಕೆ


ಬೆಂಗಳೂರು:
ಬೆಂಗಳೂರಿನ ಶಾಂತಿನಗರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ವಿಧಾನ ಪರಿಷತ್ ಚುನಾವಣೆಯ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ನ ಅಭ್ಯರ್ಥಿಯಾದ ಡಿ.ಟಿ. ಶ್ರೀನಿವಾಸ್ ರವರು ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ರವರು ಹಾಗೂ ಸಚಿವ ಸಂಪುಟದ ಹಲವು ಸಚಿವರುಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಂದಬಿಫಾರ್ಮ್ ಅನ್ನು ಸ್ವೀಕರಿಸಿದ ಅಭ್ಯರ್ಥಿಡಿ.ಟಿ.ಶ್ರೀನಿವಾಸ್


ಬೆಂಗಳೂರು :
ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರ-2024ರ ಚುನಾವಣೆಯ ಅಂಗವಾಗಿ ಕೆ.ಪಿ.ಸಿ.ಸಿಯ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ರವರಿಂದ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರ ಪತಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ ರವರು
ಬಿ-ಫಾರ್ಮ್ ಅನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ರವರು ಈ ಬಾರಿಯ ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರ-2024ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್ ರವರು ಅತಿಹೆಚ್ಚು ಬಹುಮತದಿಂದ ಗೆಲುವು ಸಾಧಿಸುವಂತಾಗಲಿ ಎಂಬುದಾಗಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿಶಾಸಕಿ ಶ್ರೀಮತಿ ಪೂರ್ಣಿಮಾಶ್ರೀನಿವಾಸ್ ಆಯ್ಕೆ


ಬೆಂಗಳೂರು :
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯೂರಿನ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕೆ.ಪಿ.ಸಿ.ಸಿ.ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ಭೇಟಿ ಮಾಡಿ ಅಭಿನಂದನೆಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಜೊತೆಯಲ್ಲಿ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ನಡೆಸಿದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು ಚುನಾವಣೆಯ ಸಂಘಟನೆಯ ಕುರಿತಾಗಿ ಕೆಲವು ಸಲಹೆ ಮತ್ತು ಸೂಚನೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು ಎನ್ನಲಾಗಿದೆ.

You cannot copy content of this page