ರಾಜಕೀಯ

ಮಾಜಿಸಚಿವರಾದ ಗಂಗಾವತಿಶಾಸಕ ಜನಾರ್ದನ ರೆಡ್ಡಿಯವರು ಬಿಜೆಪಿ ಪಕ್ಷ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಚುನಾವಣೆಯ ರಣಕಹಳೆ ಮೊಳಗಿಸಲು ಮಂಗಳವಾರ ಹಿರಿಯೂರಿಗೆ ಆಗಮನ


ಹಿರಿಯೂರು:
ಮಾಜಿ ಸಚಿವರಾದ ಗಂಗಾವತಿ ಶಾಸಕ ಜನಾರ್ದನರೆಡ್ಡಿಯವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾದ ಬಳಿಕ ಮೊದಲ ಬಾರಿಗೆ ಹಿರಿಯೂರಿನಿಂದ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲು ಮಾರ್ಚ್ 26 ರಂದು ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಕಳೆದ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಲ್ಯಾಣ ಕರ್ನಾಟಕ ಪಕ್ಷದ ಅಭ್ಯರ್ಥಿ ಪರ ಹಿರಿಯೂರಿನಲ್ಲಿ ಮಾಜಿಸಚಿವರಾದ ಗಂಗಾವತಿಶಾಸಕ ಜನಾರ್ದನ ರೆಡ್ಡಿಯವರು ಅದ್ದೂರಿಯಾಗಿ ರೋಡ್ ಶೋ ಹಾಗೂ ಬೃಹತ್ ಸಾರ್ವಜನಿಕ ಸಮಾವೇಶ ನಡೆಸಿ ಅದ್ಭುತ ಶಕ್ತಿ ಪ್ರದರ್ಶನ ಮಾಡಿದ್ದನ್ನು ಈಗ ಸ್ಮರಿಸಬಹುದಾಗಿದೆ.
ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಂತರ ಹಿರಿಯೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಸಂಘಟನೆ ಕಳೆ ಗುಂದಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವರಿಷ್ಠರು ಜನಾರ್ಧನರೆಡ್ಡಿಯವರಿಗೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಟಾಸ್ಕ್ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ದೆಹಲಿಯಲ್ಲಿನ ಆಮ್ ಆದ್ಮಿ ಪಕ್ಷ ಉಚಿತ ಗ್ಯಾರೆಂಟಿ ಯೋಜನೆಗಳನ್ನು ನೀಡಿ ಪಾಪರ್ ಆಗಿದ್ದು ಅದೇ ರೀತಿ ರಾಜ್ಯ ಕಾಂಗ್ರೆಸ್ ಸರಕಾರ ಉಚಿತ ಗ್ಯಾರೆಂಟಿ ಯೋಜನೆಗಳಿಗೆ ನೀಡಿ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗಿದೆ ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ.

‌‌‌‌
ಚಳ್ಳಕೆರೆ ಜನಧ್ವನಿ ಮಾ.17 ದೆಹಲಿಯಲ್ಲಿನ ಆಮ್ ಆದ್ಮಿ ಪಕ್ಷ ಉಚಿತ ಗ್ಯಾರೆಂಟಿ ಯೋಜನೆಗಳನ್ನು ನೀಡಿ ಪಾಪರ್ ಆಗಿದ್ದು ಅದೇ ರೀತಿ ರಾಜ್ಯ ಕಾಂಗ್ರೆಸ್ ಸರಕಾರ ಉಚಿತ ಗ್ಯಾರೆಂಟಿ ಯೋಜನೆಗಳಿಗೆ ನೀಡಿ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗಿದೆ ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಸರಕಾರದ ವಿರುದ್ದ ಗುಡುಗಿದ್ದಾರೆ.


ಚಳ್ಳಕೆರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರಗಾಲ ಎಂದು ಘೋಷಣೆ ಮಾಡಿದ್ದರೂ ಸಹ ಬರಗಾಲ ನಿರ್ವಹಣೆಗೆ ಉದ್ಯೋಗ, ಕುಡಿಯುವ ನೀರು , ಗೋಶಾಲೆ ,ದೇವರ ಎತ್ತುಗಳಿಗೆ ಮೇವು ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ .
ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದರೂ ಅಪ್ಪರ್ ಭದ್ರ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಹಾಗೂ ಅನುಧಾನ ಬಿಡುಗಡೆ ಮಾಡಿಸಲು ಸಾಧ್ಯವಾಗದೆ ಗೋಶಾಲೆಗಳನ್ನು ಕಾಟಾಚರಕ್ಕೆ ಮಾಡಿದ್ದು ಗುಣ ಮಟ್ಟದ ಮೇವು ನೀಡುತ್ತಿಲ್ಲ ದೇವರ ಎತ್ತುಗಳಿಗೆ ಗೋಶಾಲೆ ತೆರೆಯಲು ಬರುವುದಿಲ್ಲ ಎಂದು ಕುಂಟು ನೆಪ ಹೇಳಲಾಗುತ್ತಿದೆ ಬುಡಕಟ್ಟು ಸಂಸ್ಕೃತಿಯ ದೇವರ ಎತ್ತಿಗಳಿಗೆ ಮೇವಿಲ್ಲದೆ ಸಾಯುವ ಸ್ಥಿತಿಗೆ ಬಂದಿವೆ.
ಕೆರೆಗಳಿಗೆ ನೀರು ತುಂಬಿಸಲು ಮುಂದಾಗುತ್ತಿಲ್ಲ ಬರಗಾಲದಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಮೇವಿಲ್ಲದೆ ಪರದಾಡುವಂತಾಗಿದೆ.
ಕ್ಷೇತ್ರದ ಜನರ ಕಷ್ಟುಗಳನ್ನು ಹಾಲಿಸ ಬೇಕಾದ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹಳ್ಳಿಗಳ ಕಡೆ ಬಾರದೆ ಕಾಮಗಾರಿಗಳ ಉದ್ಘಾಟನೆಗೆ ಬರುತ್ತಿದ್ದಾರೆ ಬಂಡವಾಳ ಹಾಕಿ ಬಂಡವಾಳ ತೆಗೆಯಲು ಮುಂದಾಗಿದ್ದು ಇದು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ.
ದೆಹಲಿ ಕ್ರೇಜಿವಾಲ ಸರಕಾರ ಪಕ್ಕಟೆ ಗ್ಯಾರೆಂಟಿ ಯೋಜನೆಗಳಿಗೆ ಹಣ ಹಾಕಿ ಪಾಪರ್ ಆಗಿದ್ದು ,ಕರ್ನಾಟಕ ಸರಕಾರವೂ ಸಹ ಉಚಿತ ಗ್ಯಾರೆಂಟಿ ಯೋಜನೆಗಳನ್ನು ನೀಡಿರುವುದರಿಂದ ಖಾಜಾನೆ ಖಾಲಿಯಾಗಿ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗೆ ಮಾಡಲು ಹಣವಿಲ್ಲದೆ ಪಾಪರ್ ಆಗುವ ದಿನಗಳು ಸಮೀಪಿಸುತ್ತಿವೆ .
ಈಗಲಾದರೂ ಸರಕಾರ ಗೋಶಾಲೆಗೆ ಸರಿಯಾಗಿ ಮೇವು.ನೀರು ನೆರಳು,.ಕೆರೆಗಳಿಗೆ ನೀರು ತುಂಬಿಸುವ ಯೋಜನೆ.ಅಪ್ಪರ್ ಭದ್ರಾಯೋಜನೆಗೆ ಅನುದಾನ, ಕ್ಷೇತ್ರಗಳ ಅಭೀವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ದೇಶದ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಎನ್ ಪ್ರಕಾಶ್

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ದೇಶದ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಎನ್ ಪ್ರಕಾಶ್

ಚಳ್ಳಕೆರೆ: ದೇಶವನ್ನು ಆಳಿದ ಕಾಂಗ್ರೆಸ್ ಬಿಜೆಪಿ ಮತ್ತು ಇತರೆ ಪಕ್ಷಗಳು ಸಂವಿಧಾನವನ್ನು ಹೇಗೆ ದುರ್ಬಲ ಗೊಳಿಸುತ್ತಿದ್ದಾರೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲು ಬಹುಜನ ಸಮಾಜವಾದಿ ಪಕ್ಷದ ರಾಜ್ಯ ಘಟಕದ ವತಿಯಿಂದ ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ಬಹು ಜನರ ನಡಿಗೆ ಪಾರ್ಲಿಮೆಂಟಿನ ಕಡೆಗೆ ಎಂಬ ಘೋಷಣೆಯೊಂದಿಗೆ ರಾಜ್ಯದ ನಾಲ್ಕು ವಿಭಾಗ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಎನ್ ಪ್ರಕಾಶ್ ತಿಳಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರುದೇಶದಲ್ಲಿ ಬಡತನ ಬಹುಜನ ಸಮಾಜವಾದಿ ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸುವ ದೃಷ್ಟಿಯಿಂದ ಮಾರ್ಚ್ 9ರಂದು ದೇವನಹಳ್ಳಿಯಲ್ಲಿ 10ರಂದು ಸಕಲೇಶಪುರದಲ್ಲಿ 11ರಂದು ವಿಜಯಪುರದಲ್ಲಿ 12ರಂದು ಕಲಬುರ್ಗಿಯಲ್ಲಿ  ನಾಲ್ಕು ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದು ಮಾಹಿತಿ ನೀಡಿದರು ಮಾಯಾವತಿಯವರ ಆಶಯದಂತೆ ಬಹುಜನರ ಪಕ್ಷವನ್ನು ಕಟ್ಟುವ ದೃಷ್ಟಿಯಿಂದ ಹಾಗೂ ಈ ದೇಶದ ಬಡತನ ನಿರುದ್ಯೋಗ ನಿವಾರಣೆಗಾಗಿ ಪಕ್ಷವು ಹೋರಾಟ ನಡೆಸುತ್ತಾ ಬಂದಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷದಿಂದ ಜಿಲ್ಲೆಯಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸುವ ಮಹತ್ವಕಾಂಕ್ಷಿಯನ್ನು ಹೊಂದಿದ್ದೇವೆ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಬೂಟಾಟಿಕೆಯ ಆಡಳಿತವನ್ನು ನಡೆಸುತ್ತಾ ಬಂದಿದೆ ಕಪ್ಪು ಹಣ ಹೊರ ತರುತ್ತೇವೆ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದ್ದಾರೆ ಅಲ್ಲದೆ 2018ರಲ್ಲಿ ಎಸ್ ಸಿ ಜನಾಂಗ ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ 2.30 ಲಕ್ಷ ಉದ್ಯೋಗಿಗಳಿದ್ದರೂ ಇಂದಿನ ಸರ್ವೆ ಪ್ರಕಾರ 1.44 ಲಕ್ಷ ಕ್ಕೆ ಇಳಿದಿದೆ ಎಸ್ ಟಿ ಜನಾಂಗದ ನೌಕರರು 1.15 ಲಕ್ಷ ಇದ್ದರು 85,400 ಉದ್ಯೋಗಿಗಳಿದ್ದಾರೆ ಮತ್ತು 2.6 ಲಕ್ಷ ಓಬಿಸಿ ಉದ್ಯೋಗಿಗಳಿದ್ದರೂ 1.84 ಲಕ್ಷಕ್ಕೆ ಇಳಿದಿದೆ ಎಲ್ಲವನ್ನು ಖಾಸಗಿಕರಣ ಮಾಡಿ ದೇಶದ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದಾರೆ ಕೋವಿಡ್ ಸಂದರ್ಭದಲ್ಲಿ ನಿರ್ಗತಿಕರಾದ ಕುಟುಂಬಗಳಿಗೆ ಯಾವುದೇ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ರೈತರ ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ನಡೆಸುತ್ತಿದ್ದರು ಮಂಡುತನ ಪ್ರದರ್ಶಿಸಿ ಹೋರಾಟವನ್ನು ಹತ್ತಿಕ್ಕಿ ದಮನಕಾರಿ ನೀತಿಯನ್ನು ಅನುಸರಿಸಲು ಹೊರಟಿದೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದ್ದೆ ಆದಲ್ಲಿ ಹಿಂದುಳಿದ ವರ್ಗಗಳಿಗೆ ಬಹುವಾಗಿ ಅನ್ಯಾಯವಾಗುತ್ತದೆ ಎಂಬುದರಲ್ಲಿ ಸಂಶಯವಿಲ್ಲ ಎಂದರು ಈ ಬಾರಿಯ ಲೋಕಸಭಾ ಚುನಾವಣೆಗೆ ಇವಿಎಂ ಮಷೀನ್ ನನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ ಅದರ ಬದಲಾಗಿ ಬ್ಯಾಲೆಟ್ ಪೇಪರ್ ಪದ್ದತಿಯನ್ನು ಜಾರಿಗೆ ತರಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಪಕ್ಷದ ಉಪಾಧ್ಯಕ್ಷ ಲಕ್ಷ್ಮಮ್ಮ ಮಾತನಾಡಿ ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಬಹುಜನ ಸಮಾಜವಾದಿ ಪಕ್ಷವು ಸಂವಿಧಾನ ಜಾತವನ್ನು ಕಳೆದ ಒಂದು ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಪ್ರತಿ ಹಳ್ಳಿಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ ರವರ ಆಶಯಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿದ್ದೇವೆ ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಭೆಗೆ ಹೋಗಲು ತಡೆಯುವ ಪ್ರಯತ್ನ ಮಾಡಿದ್ದು ಕಾಂಗ್ರೆಸ್ ಪಕ್ಷ ಓಬಿಸಿ ವರ್ಗಕ್ಕೆ ಮೀಸಲಾತಿ ನೀಡುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿತ್ತು ಕಾಂಗ್ರೆಸ್ ಪಕ್ಷಕ್ಕೆ ಬಡಜನರು ಬಡವರಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಭಾಗ್ಯಗಳನ್ನು ಘೋಷಣೆ ಮಾಡಿದೆ ಕಾಂಗ್ರೆಸ್ ಪಕ್ಷ 55 ವರ್ಷಗಳ ಆಳ್ವಿಕೆ ನಡೆಸಿದರು ಸಹ ಜನರನ್ನು ಬಡತನದಿಂದ ಮುಕ್ತ ಮಾಡುವಲ್ಲಿ ವಿಫಲವಾಯಿತು ಜನತೆಗೆ ಉಚಿತ ಅಕ್ಕಿ ನೀಡುವ ಬದಲು ರೈತರಿಗೆ ಭೂಮಿ ನೀಡಿದ್ದರೆ ರೈತನೇ ಬೆಳೆದು ಸಾಕುವ ಮಟ್ಟಿಗೆ ಬೆಳೆಯುತ್ತಿದ್ದರು. ಇಂತಹ ದುರಾಡಳಿತ ನಡೆಸುತ್ತಿರುವ ಬಿಜೆಪಿ ಕಾಂಗ್ರೆಸ್ ಪಕ್ಷಗಳನ್ನು ತಿರಸ್ಕರಿಸಲು ಜನತೆ ನಿರ್ಧರಿಸಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್ ಆರ್ ಶ್ರೀನಿವಾಸ್ ಬಾಲರಾಜ್ ಉಪಸ್ಥಿತರಿದ್ದರು.

ವರಿಷ್ಠರ ನಿರ್ದೇಶನದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ಯರಿಗೆ ಮಾಜಿ ಶಾಸಕ ತಿಮ್ಮರಾಯಪ್ಪ ಕರೆ.


2024ರ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ.. ಯಾರೇ ಅಭ್ಯರ್ಥಿ ಬಂದರೂ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕಾಗಿದೆ ಎಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಶ್ರೀ.ಯುತ. ಟಿ.ವೀರಭದ್ರಪ್ಪ ನವರು ತಾಲ್ಲೂಕು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು…

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ. ಗ್ರಾಮದ ಬಾಬು ಜಗಜೀವನ್ ರಾಮ್ ಭವನದಲ್ಲಿ..2024 ರ ಲೋಕಸಭಾ ಚುನಾವಣೆಯ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು…


ಅಲ್ಲದೆ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಂಡು ಕೆಲಸ ಮಾಡಬೇಕಾಗಿದೆ.

ಈ ಬಾರಿ ಕಾಂಗ್ರೆಸ್ಸನ್ನು ಸೋಲಿಸಬೇಕು ..28ಕ್ಕೆ 28 ಅಭ್ಯರ್ಥಿಗಳು ಗೆಲ್ಲಬೇಕೆಂಬ ದೃಷ್ಟಿಯಿಂದ ಮೈತ್ರಿ ಮಾಡಿಕೊಂಡಿದ್ದೇವೆ.
ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಗೆಲುವು ಸಾಧಿಸಿದೆ ಜೆಡಿಎಸ್, ಜೆಡಿಯು ಮತ್ತು ಬಿಜೆಪಿ ಎರಡು ಬಾರಿ ಗೆದ್ದಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿದ ಪಕ್ಷಗಳ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು..


ಈ ಪೂರ್ವ ಭಾವಿ ಸಭೆಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ.ಜಯಣ್ಣ..ಜಿಲ್ಲಾ ಉಸ್ತುವಾರಿಗಳಾದ ಶ್ರೀ ಯುತ.ರವೀಂದ್ರಪ್ಪ ಹಾಗೂ ತಿಮ್ಮರಾಯಪ್ಪ..ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷರಾದ ಶ್ರೀ ಯುತ. ಕರಿಬಸಪ್ಪ..ಪಾವಗಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ.ಈರಣ್ಣ..ಹಾಗೂ ಜೆಡಿಎಸ್ ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮುಖಂಡರು..ಕಾರ್ಯಕರ್ತರು ಉಪಸ್ಥಿತರಿದ್ದರು…

ಕುಮಾರಣ್ಣನವರ ಜನಪರ ಯೋಜನೆಗಳನ್ನು ಮನವರಿಕೆ ಮಾಡಿವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಂಕಣಬದ್ದರಾಗುವಂತೆ ಮಾಜಿ ಶಾಸಕ ತಿಮ್ಮರಾಯಪ್ಪ.


ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಅಭ್ಯರ್ಥಿಗೆಲುವುಗೆ ಕ್ಷೇತ್ರದಲ್ಲಿ ಶಾಸಕರಿಲ್ಲ ಸಂಸದರಿಲ್ಲ ಎಂಬ ಕೊರಗು ಬೇಡ ಜೆಡಿಎಸ್ ವರಿಷ್ಠರ ಆದೇಶದಂತೆ ಯಾರಿಗೆ ಮೈತ್ರಿಯಲ್ಲಿ ಬಿಜೆಪಿ, ಜೆಡಿಎಸ್ ಯಾರಿಗೆ ಟಿಕೇಟ್ ನೀಡಿದರೂ ಗೆಲ್ಲಿಸಲು ಬದ್ದರಾಗಬೇಕು ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಬೆಂಗಳೂರು ರಸ್ತೆಯಲ್ಲಿ ದಲ್ಲಾಲರ ಸಮುದಾಯ ಭವನದಲ್ಲಿ ಲೋಕದಭಾ ಚುನಾವಣೆ ಹಿನ್ನೆಲೆ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲೂ ಗೆಲುವು ಸಾಧಿಸಲು ಬಿಜೆಪಿ ಪಕ್ಷದದೊಂದಿಗೆ ಜೆಡಿಎಸ್ ಮೈತಿಮಾಡಿಕೊಡು ಕಾರ್ಯಕರ್ತರಿಗೆ ಕರೆಕೊಟ್ಟಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಓಟುಗಳಿದ್ದು ಬಿಜೆಪಿ ಜೆಡಿಎಸ್ ಪಕ್ಷ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.
ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ ಜೆಡಿಎಸ್ ಪಕ್ಷದ ತತ್ವಸಿದ್ದಾಂತಗಳನ್ನು ಉಳಿಸಿಕೊಂಡು ಜೆಡಿಎಸ್ ಪಕ್ಷದ ವರಿಷ್ಠರ ಆದೇಶದಂತೆ ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವುಗೆ ಸಹಮತದಿಂದ ಕಾರ್ಯಕರ್ತರು ಶ್ರಮಿಸಬೇಕು. ಸಮನ್ವಯ ಸಮಿತಿಯನ್ನು ರಚಿಸಲಾಗುವುದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿಯನ್ನು ನೀಡಿದರೂ ಮೈತ್ರಿ ಅಭ್ಯರ್ಥಿಯನ್ನು ಹೆಚ್ಚು ಬಹುಮತ ನೀಡುವ ಮೂಲಕ ಗೆಲ್ಲಿಸ ಬೇಕು ಎಂದರು.


ಚಳ್ಳಕೆರೆ ಕ್ಷೇತ್ರದ ಪರಾರ್ಜಿತ ಅಭ್ಯರ್ಥಿ ರವೀಶ್ ಮಾತನಾಡಿ ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದ ಮತಗಳಿಂದ ಸೋಲಲುೆ ನಾವೇ ಕಾರಣರು ಎಂಬ ತಪ್ಪು ಮತ್ತೆ ಮರುಕಳಿಸದೆ ನಮ್ಮ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಗೆಲುವಿಗೆ ಮುಂದಾಗಬೇಕು. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಭರಾಟೆಯಲ್ಲಿ ಸೋಲಿಗೆ ಕಾರಣವಾಗಿದೆ, ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಣ್ಣಸ್ವಾಮಿ ರೈತರ ಪರ ಯೋಜನೆಗಳಾದ ಸಾಲಮನ್ನ ಇವು ಲೆಕ್ಕಕ್ಕೆ ಬಾರದೆ ಸೋಲು ಕಾಣುವಂತಾಗಿದೆ. ಕುಮಾರಣ್ಣನವರ ಜನಪರ ಯೋಜನೆಗಳನ್ನು ಮನವರಿಕೆ ಮಾಡಿವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಂಕಣಬದ್ದರಾಗುವAತೆ ಕರೆ ನೀಡಿದರು.
ಚುನಾವಣೆಯಲ್ಲಿ ಒಳ್ಳೆ ವ್ಯಕ್ತಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಓಟಾಗುವುದು ಕಣ್ಮರೆಯಾಗಿದೆ. ನಿಜವಾದ ರೈತರನ್ನು ಗುರುತಿಸಿ ೫೪ಸಾವಿರ ರೂ ಕೋಟಿ ಸಾಲ ಮನ್ನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾವೆಲ್ಲ ನೆನಸಬೇಕು. ಬೆಲೆ ಏರಿಕೆ ಮಾಡಿ ಉಚಿತ ಗ್ಯಾರೆಂಟಿ ಭಾಗ್ಯಗಳ ಖಾತೆಗೆ ಹಣ ಜಮೆ ಮಾಡುತ್ತಾರೆ.ಸರಕಾರದಲ್ಲಿ ಹಣ ಇಲ್ಲ ವೇತನ ನೀಡಲೂ ಸಹ ಹಣ ನೀಡಲು ಖಜಾನೆ ಖಾಲಿಯಾಗಿದೆ. ದೇಶದ ಪ್ರಧಾನಿ ನರೇಂದ್ರಮೋದಿಯವರ ಜನಪರ ಕೆಲಸಗಳನ್ನು ಮಾಡಿದ್ದಾರೆ
ಹಿರಿಯೂರು ಪರಾರ್ಜಿತ ಅಭ್ಯರ್ಥಿ ರವೀಂದ್ರಪ್ಪಮಾತನಾಡಿ ಕೇಂದ್ರ ಸರಕಾರ ಸುಭದ್ರ ವಾಗಿದ್ದರೆ ದೇಶ ಸುಭದ್ರವಾಗಿರುತ್ತದೆ ಮೈತ್ರಿ ಪಕ್ಷಗಳಲ್ಲಿ ಯಾವುದೇ ಅಭ್ಯರ್ಥಿಗೆ ಟಿಕೇಟ್ ನೀಡಿದರೂ ಜೆಡಿಎಸ್ ಕಾರ್ಯಕರ್ತರು ಗೆಲುವಿಗೆ ಶ್ರಮಿಸೋಣ ಪಕ್ಷದ ಸಂಘಟನೆ ಮಾಡೋಣ ಎಂದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಯಶೋಧರ್, ನಗರಸಭೆ ಸದಸ್ಯರಾದ ತಿಪ್ಪಮ್ಮ, ಪ್ರಮೋದ್, ಮುಖಂಡರಾದ ಆನಂದಪ್ಪ. ಬೂದಿಲಿಂಗಪ್ಪ, ಹನುಮಂರರಾಯಪ್ಪ, ನಾಗರಾಜ್, ಶಿವಣ್ಣ, ಚಂದ್ರಣ್ಣ, ಶಿವಣ್ಣ ಸೇರಿದಂತೆ ಮುಂತಾದವರು ಇದ್ದರು.
===============================

ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಿ ಗೆದ್ದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಸುಮಾರು ಒಂಬತ್ತು ತಿಂಗಳು ಕಳೆದರೂ ಕ್ಷೇತ್ರದ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿಲ್ಲ ಎಂದು ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಆರೋಪಿಸಿದ್ದಾರೆ.

ಚಳ್ಳಕೆರೆ ಫೆ.7 ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಿ ಗೆದ್ದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಸುಮಾರು ಒಂಬತ್ತು ತಿಂಗಳು ಕಳೆದರೂ ಕ್ಷೇತ್ರದ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿಲ್ಲ ಎಂದು ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಆರೋಪಿಸಿದ್ದಾರೆ. ನಗರದ ಮಾಜಿ‌ ಶಾಸಕ ಬಸವರಾಜ್ ಮಂಡಿಮಠ್ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಮುಂಡರು ಹಾಗೂ ಕಾರ್ಯಕರ್ತರೊಂದಿ ಸಭಡಯಲ್ಲಿ ಮಾತನಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ‌ಸರಕಾರದ ಅವಧಿಯಲ್ಲಿ‌ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಆಧ್ಯತೆ ನೀಡಲಾಗಿತ್ತು ಕಾಂಗ್ರೆಸ್ ಶಾಸಕರು ಜೆಜೆಎಂ ಮನೆ ಮನೆಗೆ ಕುಡಿಯುವ ನೀರಿನ ಕಾಮಗಾರಿ ಉದ್ಘಾಟನೆ ಬಿಟ್ಟರೆ ಯಾವುದೇ ಸಾಧನೆಯಿಲ್ಲ ಎಂದು ಹೇಳಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಲಿ ಗೆಲುವಿಗೆ ಶ್ರಮಿಸಿ ವಿಶ್ವ ಮೆಚ್ಚಿದ ನಾಯಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡೋಣ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಈಗಾಗಲೆ ಮೊಳಕಾಲ್ಮೂ ತಾಲೂಕು ಪ್ರವಾಸ ಮುಗಿಸಿದ್ದು ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ನನ್ನ ತಂದೆ ಚಳ್ಳಕೆರೆ ತಾಲೂಕಿನವರಾದರೂ ಹೊಳಲ್ಕೇರೆ ಕ್ಷೇತ್ರದಲ್ಲಿ ಐದು ಬಾರಿ ಕ್ಷೇತ್ರದ ಶಾಸಕರಾಗಿದ್ದಾರೆ ಮತ್ತೆ ಅಧಿಕಾರದ ಆಸೆಗೆ ನಾನು ಬಂದಿಲ್ಲ ಬಿಜೆಪಿ ಪಕ್ಷದ ಸಂಘಟನೆ ಮಾಡಲು ಪ್ರವಾಸ ಕೈಗೊಂಡಿದ್ದೇನೆ ಜಿಲ್ಲೆಯಲ್ಲಿ ಐದು ಕಾಂಗ್ರೆಸ್ ಒಂದು ಬಿಜೆಪಿ ಶಾಸಕರಿದ್ದು ಕ್ಷೇತ್ರದ ಕಾರ್ಯಕರ್ತರಿಗೆ ಸಮಸ್ಯೆಯಾದರೇ ಕೇಳೋರು ಯಾರು ಇಲ್ಲದಂತಾಗುದೆ ಆದ್ದರಿಂದ ಜಾತಿ ಬೇದ ಮರೆತು ಬಿಜಿಪಿ ಪಕ್ಷ ಸಂಘಟಿಸುವ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಬಾವುಟ ಹಾರಿಸೋಣ ಮತ್ತೆ ಯಾರೂ ಕ್ಷೇತ್ರಕ್ಕೆ ಸ್ಫರ್ಧಿಸಲು ಮುಂದಾಗಬಾರದು . ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಕೇಳಿದ್ದೆ. ಆದರೆ ಹೈಕಮಾಂಡ್ ಮುಂದಿನ ಸಾರಿ ನೀಡುವುದಾಗಿ ಹೇಳಿದ್ದು, ಅದರಂತೆ ನಾಯಕರ ಮಾತಿಗೆ ತಲೆಬಾಗಿ ಅಂದಿನಿಂದ ಇಂದಿನವರೆಗೂ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ವರಿಷ್ಠರು ನನಗೆ ನೀಡಲಿ ಇಲ್ಲ. ಬೇರೆಯವರಿಗೆ ಸ್ಪರ್ಧಿಸಲು ಟಿಕೇಟ್ ನೀಡಲಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಹಾಗಾಗಿ ಪಕ್ಷವನ್ನು ಈಗಿನಿಂದಲೇ ಗಟ್ಟಿಗೊಳಿಸಬೇಕಿದೆ. ನಿಮಗೆ ಏನೇ ಸಮಸ್ಯೆಗಳಾದರೂ ಮಧ್ಯರಾತ್ರಿಯಲ್ಲಿ ಫೋನ್ ಮಾಡಿ ಸ್ಪಂದಿಸುತ್ತೇನೆ. ಕಾರ್ಯಕರ್ತರ ನೋವು ನನ್ನ ನೋವೆಂದು ಭಾವಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಿಸಿ ಭಾರತೀಯರ ಐದು ನೂರು ವರ್ಷಗಳ ಕನಸನ್ನು ನನಸುಗೊಳಿಸಿ ಭಾವನೆಗಳನ್ನು ಎತ್ತಿ ಹಿಡಿದಿದ್ದಾರೆ. ಆರ್ಥಿಕ ವಹಿವಾಟಿನಲ್ಲಿ ಭಾರತ ಈಗ ಐದನೇ ಸ್ಥಾನದಲ್ಲಿರುವುದರಿಂದ ನರೇಂದ್ರ ಮೋದಿಯವರ ಕೈಬಲಪಡಿಸೋಣ ಎಂದು ಕಾರ್ಯಕರ್ತರಲ್ಲಿ ವಿನಂತಿಸಿದರು.
ಸೋಮಶೇಖರ್ ಮಂಡಿಮಠ್ ಮಾತನಾಡಿಎನ್ ಡಿ ಎ ಪಕ್ಷವನ್ನು ಕಟ್ಟಿಹಾಲು ಯಾರಿಂದಲೂ ಸಾಧ್ಯವಿಲ್ಲ ವಿಧಾನ ಸಭೆಯಲ್ಲಿ ನಮ್ಮ ಕೆಲವು ತಪ್ಪುಗಳಿಂದ ಹಿನ್ನೆಡೆಯಾಗಿದೆ ಲೋಕಸಭಾ ಚುನಾವಣೆಯಲ್ಲಿ‌ ನರೇಂದ್ರ ಮೋದೀಜಿಯವರ ಜನಪರ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿವ ಮೂಲಕ‌ ಹೆಚ್ಚುಮತಗಳನ್ನು ಪಡೆಯುವ ಮೂಲಕ ಬಿಜೆಪಿ‌ ಅಭ್ಯರ್ಥಿಯನ್ನು ಗೆಲ್ಲಿಸೋಣ ನನ್ನ ಪೂಜ್ಯ ತಂದೆಯವರಾದ ಮಾಜಿ ಶಾಸಕ. ಬಸವರಾಜ್ ಮಂಡಿಮಠ್ ಸಹ ಈಗಾಗಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದು ಜರರೂ ಅವರ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿಶಾಸಕ ಬಸವರಾಜ್ ಮಂಡಿಮಠ್. ಜಯಪಾಲಯ್ಯ.ಮಾತನಾಡಿದರು. ನಗರಸಭೆ ಸದಸ್ಯರಾದ ಪಾಲಮ್ಮ.ಸಾಕಮ್ಮ
ಭದ್ರಣ್ಣ.ವೆಂಕಟಪ್ಪ. ಸಿ.ಎಸ್.ಪ್ರಸಾದ್. ಶಿವಪುತ್ರಪ್ಪ.ಮಾತೃಶ್ರೀಮಂಜುನಾಥ್.ದೊಡ್ಡ ಉಳ್ಳಾರ್ತಿ ರಾಜು ಇತರರಿದ್ದರು

ಕಾಂಗ್ರೆಸ್ ಪಕ್ಷದ ಆಡಳಿತದಿಂದ ಬೇಸತ್ತ ಜನರು ನಮ್ಮ ಜೆಡಿಎಸ್ ಪಕ್ಷಕ್ಕೆಸೇರ್ಪಡೆಯಾಗುತ್ತಿದ್ದಾರೆ ಜೆಡಿಎಸ್ ಜಿಲ್ಲಾಘಟಕ ಅಧ್ಯಕ್ಷರಾದ ಎಂ.ಜಯಣ್ಣ


ಹಿರಿಯೂರು:
‘ರಾಜ್ಯದಲ್ಲಿ ಮತ್ತೊಮ್ಮೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು, ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಕಾರಣದಿಂದ ಹಲವು ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ ಎಂಬುದಾಗಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಜಯಣ್ಣ ಹೇಳಿದರು.
ನಗರದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಲವರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ನಂತರ ಅವರು ಮಾತನಾಡಿದರು.
‘ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದರು. ಆದರೆ, ಸಿದ್ದರಾಮಯ್ಯ ಆವರು ಬರದಿಂದ ಕಂಗೆಟ್ಟ ರೈತರಿಗೆ ಪರಿಹಾರ ರೂಪದಲ್ಲಿ 2000 ಕೊಡುತ್ತೇವೆ ಎಂದು ಅದನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ ಸರ್ಕಾರದ ಬಿಟ್ಟಿಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಅಭಿವೃದ್ದಿ ಸಂಪೂರ್ಣ ಸ್ಥಗಿತವಾಗಿದೆ ಎಂದರಲ್ಲದೆ,
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದ್ದು, ಡಿಸಿಎಂ ಪದವಿಗೆ ಕಿತ್ತಾಟ ನಡೆದಿದೆ. ಇದರಿಂದ ಬೇಸತ್ತು ಹೋಗಿರುವ ನಾಡಿನ ಜನತೆ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿರವರು ನೀಡಿದ್ದ ಜನಪರ ಆಡಳಿತವನ್ನು ಸ್ಮರಿಸಿಕೊಳ್ಳುತ್ತಿದ್ದಾರೆ ಎಂಬುದಾಗಿ ಹೇಳಿದರು.
‘ಲೋಕಸಭಾ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ಬೆಂಬಲಿಸುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಿದ್ದೇವೆ. ಕಾಂಗ್ರೆಸ್ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಯಾಚಿಸುತ್ತೇವೆ. ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ನೆಲೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತೇವೆ’ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕಿನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ಪಾಪಣ್ಣ, ಬೆಳಗೆರೆ ಚಂದ್ರಣ್ಣ, ಬೆಳೆಗೆರೆ ಶಿವಮೂರ್ತಿ, ಕಾಪರಹಳ್ಳಿಯಶಿವಣ್ಣ, ಚಂದ್ರಣ್ಣ, ಎಸ್.ಬಿ.ಸಂಜಯ್. ನಿಜಲಿಂಗಪ್ಪ ಹೆಗ್ಗೆರೆ ಸಿದ್ದೇಗೌಡ, ಸಾಣಿಕೆರೆ ರಂಗನಾಥ, ಜಡೇಕುಂಟೆ ಹರೀಶ್, ಬೊಂಬೇರಹಳ್ಳಿ ಬೆಟ್ಟಪ್ಪ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ನಾಗರಿಕರಿಗೆ ಯೋಜನೆಯನ್ನು ರೂಪಿಸುವಂತಹ ಕೆಲಸ ಮಾಡುತ್ತದೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅಭಿಪ್ರಾಯ.


ನಾಯಕನಹಟ್ಟಿ:: ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೆ ಸೌಲಭ್ಯವನ್ನು ಒದಗಿಸುವಂತಹ ಯೋಜನೆಗಳನ್ನು ರೂಪಿಸುವ ಮೂಲಕ ಇಡೀ ದೇಶವನ್ನ ಅಭಿವೃದ್ಧಿಪತ ದತ್ತ ಕೊಂಡೊಯ್ಯುವಂತ ಕೆಲಸವನ್ನು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ.
ಸೋಮವಾರ ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಚಿತ್ರದುರ್ಗ ಕೆನರಾ ಬ್ಯಾಂಕ್ ಜೋಗಿಹಟ್ಟಿ ಇವರ ಸಹಯೋಗದಲ್ಲಿ ಅಭಿವೃದ್ಧಿ ಹೊಂದಿದ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿ. ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸುವಂತಹ ಕಾರ್ಯವನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಕೇಂದ್ರ ಸರ್ಕಾರದ ಸತ್ಯತೆ ತಿಳಿಯಲು ಈ ಸಂಕಲ್ಪ ಯಾತ್ರೆಯನ್ನು ಆಯೋಜಿಸಲಾಗಿದೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ನನ್ನ ಸರ್ಕಾರ ಕೊಟ್ಟಂತಹ ಯೋಜನೆಗಳು ಪಾಲಪ್ರದಾಯಕವಾಗಿವೆ ಅಥವಾ ಇಲ್ಲವೋ ಎಂಬುವ ದೃಷ್ಟಿಯಿಂದ ಯಾವುದೇ ಪ್ರಧಾನಿ ಸ್ವಾತಂತ್ರ ಬಂದು 75 ವರ್ಷ ಕಳೆದರೂ ಒಬ್ಬ ಮತದಾರರ ಹತ್ತಿರ ಮುಕ್ತವಾಗಿ ಚರ್ಚೆ ಮಾಡುವಂತಹ ಕೆಲಸವನ್ನು ಯಾರು ಮಾಡಿಲ್ಲ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಸಂಕಲ್ಪವಾಗಿದೆ ಎಂದರು.


ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಓ. ಮಂಜುನಾಥ್ ಮಲ್ಲೂರಹಳ್ಳಿ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಪಿ ಶಿವಣ್ಣ, ರೈತ ಮೋರ್ಚಾ ಮಂಡಲ ಅಧ್ಯಕ್ಷ ಬಾಲರಾಜ್, ಕೇಂದ್ರ ಸಚಿವ ಎ ನಾರಾಯಣಸ್ವಾಮಿ ರವರ ಆಪ್ತ ಸಹಾಯಕ ಜಿ ಎಚ್ ಮೋಹನ್ ಕುಮಾರ್, ಗೌಡಗೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಜಿ.ಒ ಓಬಳೇಶ್, ಎಂ ಎಚ್ ಲಕ್ಷ್ಮಣ್, ಗಿಣಿಯರ್ ತಿಪ್ಪೇಶ್, ಡಿ ಜಿ ಮಂಜಮ್ಮ, ಲೀಡ್ ಬ್ಯಾಂಕ್ ಮೆನೇಜರ್ ತಿಪ್ಪೇಶ್, ನಬಾರ್ಡ್ ಮೆನೇಜರ್ ಕವಿತಾ, ನಾಯಕನಹಟ್ಟಿ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಮ್ ಮೋಹನ್, ಜೋಗಿಹಟ್ಟಿ ಕೆನರಾ ಬ್ಯಾಂಕ್ ಮ್ಯಾನೇಜರ್ ಗೌರಿ, ಮತ್ತು ಪೊಲೀಸ್ ಇಲಾಖೆಯ ಪಿಎಸ್ಐ -2 ಶಿವಕುಮಾರ್ ಪಿಎಸ್ಐ ತಿಪ್ಪೇಸ್ವಾಮಿ ಪೇದೆ ಉಮೇಶ್, ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಗಳಾದ ಹೊನ್ನೂರ ಸ್ವಾಮಿ, ಕಾವ್ಯ, ಕೆಂಚಮ್ಮ ,ಸಂಪಿಗೆ, ಆಶಾ ಕಾರ್ಯಕರ್ತೆ ಜಯಲಕ್ಷ್ಮಿ , ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ ಗ್ರಾಮಸ್ಥರು ಇದ್ದರು.

ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರದ ಕೊಡುಗೆ ಶೂನ್ಯ ಅತಿಥಿ ಉಪನ್ಯಾಸಕರ ಮತ್ತು ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟ: ವಿಧಾನ ಪರಿಷತ್ ಸದಸ್ಯ ವೈಎ ನಾರಾಯಣಸ್ವಾಮಿ ಆರೋಪ.


ಚಳ್ಳಕೆರೆ: ರಾಜ್ಯ ಸರ್ಕಾರದ ಅವಜ್ಞಾನಿಕ ನೀತಿಗಳಿಂದಾಗಿ ಶಿಕ್ಷಣ ಇಲಾಖೆ ಸೊರಗುತ್ತಿದೆ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರದ ಕೊಡುಗೆ ಶೂನ್ಯವಾಗಿದ್ದು ಇದರಿಂದಾಗಿ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಇದುವರೆಗೂ ಬಗೆಹರಿಸುವಲ್ಲಿ ವಿಫಲವಾಗಿದ್ದು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದರು ನೇಮಕ ಮಾಡಿಕೊಳ್ಳುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವೈಎ ನಾರಾಯಣಸ್ವಾಮಿ ಆರೋಪಿಸಿದರು.


ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿಥಿ ಉಪನ್ಯಾಸಕರಿಗೆ ವೇತನವನ್ನು ಹೆಚ್ಚಿಸಿ ವರ್ಷದಲ್ಲಿ 10 ತಿಂಗಳ ವೇತನವನ್ನು ನೀಡಿತ್ತು ನಮ್ಮ ಅವಧಿಯಲ್ಲಿ 1242 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪರೀಕ್ಷೆಯನ್ನು ಸಹ ನಡೆಸಿತ್ತು ಕೆಲವು ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರಿಂದ ನೇಮಕಾತಿ ಆಗಿರಲಿಲ್ಲ ಈಗ ಪ್ರಕರಣ ಇತ್ಯರ್ಥವಾಗಿದ್ದು ಕಾಂಗ್ರೆಸ್ ಸರ್ಕಾರ ನೇಮಕಾತಿ ಆದೇಶವನ್ನು ಮಾತ್ರ ನೀಡುತ್ತಿದೆ ಈ ಎಲ್ಲಾ ಕಾರ್ಯಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಬಗೆಹರಿಸದೆ ವಿಳಂಬ ನೀತಿ ಅನುಸರಿಸಿ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಉಪನ್ಯಾಸಕರ ಸಮಸ್ಯೆಗಳನ್ನು ವಿಧಾನ ಪರಿಷತ್ ನಲ್ಲಿ ಚರ್ಚೆ ನಡೆಸಿದ್ದು ಸರ್ಕಾರದ ಧೋರಣೆಯಿಂದಾಗಿ ವಿಳಂಬವಾಗುತ್ತಿದೆ ಬಿಜೆಪಿ ಪಕ್ಷವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಸದನದ ಹೊರಗೆ ಹಾಗು ಒಳಗೆ ಹೋರಾಡಲು ಸದಾ ಸಿದ್ಧವಿದೆ ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲಿದ್ದು ಮೋದಿಯವರ ಅಭಿವೃದ್ಧಿ ವೇಗ ಈ ದೇಶದಲ್ಲಿನ ಎಲ್ಲಾ ಪ್ರತಿಪಕ್ಷಗಳನ್ನು ಗುಡಿಸಿ ಹಾಕುತ್ತದೆ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಜೆಡಿಎಸ್ ಪಕ್ಷವು ಎನ್ ಡಿ ಎ ಮೈತ್ರಿಕೂಟದ ಭಾಗವಾಗಲು ರಾಷ್ಟ್ರೀಯ ನಾಯಕರ ತೀರ್ಮಾನವಾಗಿದ್ದು ರಾಜ್ಯದ ಬಿಜೆಪಿ ನಾಯಕರ ಸಮ್ಮತವಿದೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಟ್ಟಾಗಿ ಎದುರಿಸಲಿದ್ದು ಕಾಂಗ್ರೆಸ್ ಪಕ್ಷ ಕೇವಲ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಹರಸಾಹಸ ಪಡುತ್ತಿದೆ ಶಾಸಕರಿಗೆ ಅನುದಾನ ನೀಡದೆ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇಂದು ಆರೋಪಿಸಿದರು.

ಮುಂದಿನ ಜೂನ್ ತಿಂಗಳಲ್ಲಿ ವಿಧಾನಪರಿಷತ್ ಚುನಾವಣೆ ನಡೆಯಲಿದ್ದು ಪಕ್ಷ ನನಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿರುವುದರಿಂದ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದೇನೆ ಮುಂದಿನ ಬಾರಿ ಗೆಲ್ಲುವ ವಿಶ್ವಾಸವಿದ್ದು ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಶಿಕ್ಷಕರು ಉಪನ್ಯಾಸಕರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಬಂದಿರುವುದರಿಂದ ಉತ್ತಮ ರೀತಿಯಲ್ಲಿ ಸ್ಪಂದನೆ ದೊರೆತಿದೆ ಎಂದರು.

ಇದೇ ವೇಳೆ ಸಂಸತ್ ಮೇಲಿನ ದಾಳಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸಂಸತ್ ದಾಳಿಯನ್ನು ಯಾರು ಸಹಿಸಲು ಸಾಧ್ಯವಿಲ್ಲ ತಪ್ಪಿತಸ್ಥರ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದ್ದು ಆರೋಪಿತರು ಯಾರೇ ಆಗಿದ್ದರು ಕೇಂದ್ರ ಸರ್ಕಾರ ಅವರನ್ನು ರಕ್ಷಿಸಲು ಸಾಧ್ಯವಿಲ್ಲ ಶಿಕ್ಷೆ  ಆಗುತ್ತದೆ ಎಂದು ತಿಳಿಸಿದರು.

ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ: ಡಿಟಿ ಶ್ರೀನಿವಾಸ್.

ಚಳ್ಳಕೆರೆ:ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನನ್ನ ಹೆಸರನ್ನು ಘೋಷಣೆ ಮಾಡಿದ್ದು ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಆತ್ಮೀಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿಟಿ ಶ್ರೀನಿವಾಸ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಶಾಸಕರ ಭವನದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ದಾವಣಗೆರೆ ಚಿತ್ರದುರ್ಗ ತುಮಕೂರು ಚಿಕ್ಕಬಳ್ಳಾಪುರ ಕೋಲಾರ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ 31 ತಾಲೂಕುಗಳ ಎಲ್ಲಾ ಶಾಲಾ ಕಾಲೇಜುಗಳಿಗೆ ಈಗಾಗಲೇ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದು ಶಿಕ್ಷಕರ ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಶಿಕ್ಷಕರು ಈ ಬಾರಿ ನನ್ನನ್ನು ಬೆಂಬಲಿಸಿದ್ದೆ ಆದಲ್ಲಿ ಹಳೆ ಪಿಂಚಣಿ ಯೋಜನೆ ವರ್ಗಾವಣೆ ಸಮಸ್ಯೆ ಅತಿಥಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಲು ಸಿದ್ಧನಿದ್ದೇನೆ ಬಿಜೆಪಿಯ ದುರಾಡಳಿತದ ದಿಂದ ಬೇಸತ್ತು ರಾಜ್ಯದ ಜನತೆಯ ವಿಶ್ವಾಸ ಗಳಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಗ್ಯಾರಂಟಿ ಯೋಜನೆಗಳ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಖ್ಯಾತಿ ಪಡೆದಿದ್ದು ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಶಿಕ್ಷಕರು ಮನಸ್ಸು ಮಾಡಬೇಕು ಶಿಕ್ಷಕರ ಎಲ್ಲ ಸಮಸ್ಯೆಗಳನ್ನು ಸರ್ಕಾರ ಈಗಾಗಲೇ ಬಗೆಹರಿಸಲು ಚಿಂತನೆ ನಡೆಸಿದ್ದು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.


ಕಾಂಗ್ರೆಸ್ ಮುಖಂಡ ಹೆಚ್ಎಸ್ ಸೈಯದ್ ಮಾತನಾಡಿ ಕಾಂಗ್ರೆಸ್ ಪಕ್ಷ ಎಲ್ಲ ಜಾತಿ ಜನಾಂಗದ ವಿಶ್ವಾಸ ಗಳಿಸಿದ್ದು ಗೊಲ್ಲ ಸಮುದಾಯವು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು ಅತ್ಯಂತ ಹಿಂದುಳಿದ ಸಮುದಾಯವಾಗಿದೆ ಈ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಸಿದ್ದರಿದ್ದು ಪೂರ್ಣಿಮ ಶ್ರೀನಿವಾಸ್ ರವರ ಕಾಂಗ್ರೆಸ್ ಪಕ್ಷದ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಿದ್ದು ಪೂರ್ಣಿಮಾ ರವರ ತಂದೆ ದಿವಂಗತ ಕೃಷ್ಣಪ್ಪನವರು ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ ಸಚಿವರಾಗಿ ಸೇವೆ ಸಲ್ಲಿಸಿದ್ದರು ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು ಶಾಸಕಿಯಾಗಿ ಪೂರ್ಣಿಮಾ ರವರು ಹಿರಿಯೂರು ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡಿದ್ದಾರೆ ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಶಾಸಕರನ್ನು ಹೊಂದಿದ್ದು ಪ್ರಬಲವಾಗಿದೆ ಈ ಬಾರಿ ವಿಧಾನ ಪರಿಷತ್ ಸ್ಥಾನವನ್ನು ಸಹ ಗೆಲ್ಲುವ ಮೂಲಕ ಕಾಂಗ್ರೆಸ್ ಬಲವರ್ಧನೆಗೊಳ್ಳಲಿದೆ ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಮುಖಂಡರು ಈಗಿನಿಂದಲೇ ಶ್ರಮವಹಿಸಿ ಕೆಲಸ ಮಾಡಿ ಡಿಟಿ ಶ್ರೀನಿವಾಸ ಪರ ಕೆಲಸ ಮಾಡಿ ಪಕ್ಷ ಗೆಲುವು ಸಾಧಿಸಲು ಪಣ ತೊಡಬೇಕು ಎಂದು ಕರೆ ನೀಡಿದರು.

ವಿಶ್ವಕರ್ಮ ಸಮಾಜದ ಮುಖಂಡ ಪ್ರಸನ್ನ ಕುಮಾರ್ ಮಾತನಾಡಿ ಡಿ ಟಿ ಶ್ರೀನಿವಾಸ್ ರವರು ಕಳೆದ ಬಾರಿ ಪದವೀಧರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಹಿನ್ನಡೆಯಿಂದ ಸೋಲು ಅನುಭವಿಸಬೇಕಾಯಿತು ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಕಲಾಪಗಳಲ್ಲಿ ಮಂಡನೆ ಮಾಡುವ ವ್ಯಕ್ತಿ ಬೇಕಾಗಿರುತ್ತದೆ ವಿಧಾನಪರಿಷತ್ ಈಗಾಗಲೇ ಚಿಂತಕರ ಚಾವಡಿ ಎಂದು ಹೆಸರು ಪಡೆದಿದ್ದು ಹೀಗಾಗಿ ಕಾಂಗ್ರೆಸ್ ಪಕ್ಷ ಡಿಟಿ ಶ್ರೀನಿವಾಸ್ ರಂತಹ ಶಿಕ್ಷಣ ಪ್ರೇಮಿಗೆ ಟಿಕೆಟ್ ಘೋಷಣೆ ಮಾಡಿದೆ ಈಗಾಗಲೇ ಆಗ್ನೇಯ ಶಿಕ್ಷಕ ಕ್ಷೇತ್ರಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಶ್ರೀನಿವಾಸ್ ರವರಿಗೆ ಇರುವುದರಿಂದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಈ ಸಂದರ್ಭದಲ್ಲಿ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ನಗರ ಸಭೆ ಸದಸ್ಯ ರಮೇಶ್ ಗೌಡ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ಅನ್ವರ್ ಮಾಸ್ಟರ್ ಸಿ ಟಿ ಶ್ರೀನಿವಾಸ್ ವೀರಭದ್ರಪ್ಪ ಸೂರಪ್ಪ ಪಿ ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

You cannot copy content of this page