ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಗೆ 200ಯೂನಿಟ್ ಕರೆಂಟ್,ಯಜಮಾನಿಗೆ 2 ಸಾವಿರ ಹಣ ಮಹಿಳೆಯರಿಗೆ ಮಾಜಿ ಸಚಿವ ಡಿ. ಸುಧಾಕರ್ ಭರವಸೆ

by | 21/02/23 | Uncategorized

ಹಿರಿಯೂರು :
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಹಾಗೂ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿನಂತೆ, ವರ್ಷಕ್ಕೆ 24 ಸಾವಿರ, 5 ವರ್ಷಕ್ಕೆ ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಗಳ ಗ್ಯಾರೆಂಟಿಕಾರ್ಡ್ ನ್ನು ನೀಡಲಾಗುವುದು ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ವಿವಿಧ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಮಾಜಿಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಘೋಷಿಸಿರುವ ಗ್ಯಾರಂಟಿ ಕಾರ್ಡ್ ಗಳಿಗೆ ಮನೆ ಯಜಮಾನಿಯನ್ನು ಸದಸ್ಯರನ್ನಾಗಿ ನೊಂದಣಿ ಮಾಡಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವುದರ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ವಿವಿಧ ನೂತನ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಈ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಹೆಚ್.ಮಂಜುನಾಥ್, ನಗರಸಭೆ ಅಧ್ಯಕ್ಷರಾದ ಗೀತಾಗಂಗಾಧರ್, ಕೆಪಿಸಿಸಿ ಸದಸ್ಯರಾದ ಸುರೇಶ್ ಬಾಬು, ನಗರಸಭಾ ಮಾಜಿ ಅಧ್ಯಕ್ಷರಾದ ಶಿವರಂಜಿನಿಯಾದವ್, ಬಿ.ಎನ್.ಪ್ರಕಾಶ್, ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ರಜೀಯಾ ಸುಲ್ತಾನ, ನಗರಸಭಾ ಸದಸ್ಯರಾದ ಜೇಬಿವುಲ್ಲಾ , ವಿಠಲ್, ಹಿರಿಯ ಮುಖಂಡರಾದ ಅಸಮುದ್ದೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ನಗರಸಭಾ ಸದಸ್ಯರಾದ ಸುರೇಖಾಮಣಿ, ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಹಾಗೂ ನಗರಸಭಾ ಸದಸ್ಯರಾದ ಮಮತ, ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಪಿ.ಸಾದತ್, ನಗರಸಭೆ ಸದಸ್ಯರಾದ ಜಗನ್ನಾಥ ರತ್ನಕ್ಕ, ಮೊದಲಮರಿಯಾ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೇಮಂತಯಾದವ್, ಯುವಕಾಂಗ್ರೆಸ್ ಉಪಾಧ್ಯಕ್ಷರಾದ ದಾದಾಪೀರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಗುರುಪ್ರಸಾದ್, ಕಾರ್ಮಿಕ ಘಟಕದ ಅಧ್ಯಕ್ಷರಾದ ವಿ.ಶಿವಕುಮಾರ್, ಹಾಬೀದ್ ಹುಸೇನ್, ಮಹಿಳಾ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶಕುಂತಲಮ್ಮ, ದರ್ಶನ್, ಹಿನಾಕೌಸರ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page