ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎಂಬುದು ಶ್ಲಾಘನೀಯ. ತೆರಿಗೆ ವಂಚನೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ ಎಂದರು.
ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 15ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ. ತೆರಿಗೆ ಸಂಗ್ರಹದ ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಹಿಂದೆ ಉಳಿದವರು ಎಲ್ಲ ಪ್ರಯತ್ನ ಮಾಡಬೇಕು. ಜಾಗೃತ ದಳದವರು ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಬೇಕು ಎಂದರು.
ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದರು.
ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments