ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಬರುವುದು ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.

by | 17/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ.17
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ದೇಶವಿರೋಧಿ ಕಾಂಗ್ರೆಸ್ಸಿಗರನ್ನು ಮನೆಯಲ್ಲೇ ಕೂರಿಸಿ ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬರುವುದು ಖಚಿತ ಎಂದು ಬಿಜೆಪಿ ರಾಷ್ಟಾçಧ್ಯಕ್ಷೆ ಜೆ.ಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.


ನಗರದ ಪಾವಗಡ ರಸ್ತೆಯ ಶ್ರೀ ಈಶ್ವರದೇವಸ್ಥಾನ ಸಮೀಪ ಬಿಜೆಪಿ ವಿಕಯ ಸಂಕಲ್ಪ ಯಾತ್ರೆಯ ರೋಡ್ ಷೋ ಗೆ ಗೋಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ನಂತರ ನೆಹರು ವೃತ್ತದಲಿ ಬಹಿರಂಗಸಭೆ ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಶಕ್ತೀಕರಣ ಆಗುತ್ತಿದೆ. ಮೋದಿ ಬಂದ ಮೇಲೆ ಸಬ್ ಕಾ ಸಾಥ್ ಸಬ್ ಕ ವಿಕಾಸ್ ಶುರುವಾಗಿದೆ. ದೇಶ ಅತ್ಯಂತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ದಲಿತ, ಹಿಂದುಳಿದ ವರ್ಗಗಳ ಪ್ರಗತಿಗೆ ಮೋದಿ ಸರ್ಕಾರ ಪಣತೊಟ್ಟಿದೆ. ಕಾಂಗ್ರೆಸ್ಸಿಗರು ಮಾನಸಿಕವಾಗಿ ದಿವಾಳಿ ಆಗಿದ್ದಾರೆ. ಒಡೆದು ಆಳುವ ನೀತಿಯ ಮುಖಂಡರನ್ನು ಸೋಲಿಸಿ ಮನೆಯಲ್ಲೇ ಕೂರಿಸಿ. ದೇಶದ ೨ನೇ ದೊಡ್ಡ ಅರ್ಥ ವ್ಯವಸ್ಥೆಯಾಗಿ ಕರ್ನಾಟಕ ಹೊರಹೊಮ್ಮಿದೆ. ರೈತ ವಿದ್ಯಾನಿಧಿ ಮೂಲಕ ೧೦ ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ. ರೈತರಿಗೆ ಸಾಲ, ಮೀಸಲಾತಿ ಹೆಚ್ಚಳ ಸೇರಿ ಸಮಗ್ರ ಅಭಿವೃದ್ಧಿಯ ಕಾರ್ಯವನ್ನು ಗಮನದಲ್ಲಿಟ್ಟು ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ ರಾಷ್ಟಿçÃಯ ಅಧ್ಯಕ್ಷರು ಚಿತ್ರದುರ್ಗ, ತುಮಕೂರು ಜಿಲ್ಲೆ ಸೇರಿದಂತೆ ೫೦ ಕ್ಷೇತ್ರದಲ್ಲಿ ನನ್ನ ನೇತೃತ್ವದಲ್ಲಿ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಎಲ್ಲಾ ಕಡೆ ಉತ್ತಮವಾದ ವಾತಾವರಣ ಇದೆ. ಕಾಂಗ್ರೆಸ್ ಅಲ್ಲೋಂದು ಇಲ್ಲೋಂದು ಕಡೆ ಹೋಗುತ್ತಿದ್ದಾರೆ. ಜನರಲ್ಲಿ ಬಿಜೆಪಿ ಪರ ಮತ ಹಾಕಲು ಜಾಗೃತಿ ಮೂಡಿಸುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರ ತರಲು ಯತ್ನಿಸುತ್ತಿದ್ದೇವೆ ಮೋದಿ ಅವರು ರೋಡ್ ಷೋ ಮಾಡಿದ್ದು, ಕಾಂಗ್ರೆಸ್ & ಜೆಡಿಎಸ್ಗೆ ಹೊಟ್ಟೆ ಉರಿ. ಪುನೀತ್ ರಾಜ್‌ಕುಮಾರ್ ಅವರಿಗೆ ಸಕಲ ಗೌರವ ನೀಡಿದ ಪಕ್ಷ ನಮ್ಮದು. ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದು ನಮ್ಮ ಪಕ್ಷ. ೧೨ ಏಒ ರಸ್ತೆಗೆ ಪುನೀತ್ ಹೆಸರು ಇಟ್ಟಿದ್ದೇವೆ. ವಿಜಯಸಂಕಲ್ಪಯಾತ್ರೆಗೆ ಎಲ್ಲೆಡೆ ಜನ ಸಾಗಾರ ಸೇರುತ್ತಿದ್ದು ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲಿದೆ ಮತದಾರರ ಬಿಜೆಪಿ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿಕೊಂಡರು.

ಸಚಿವ ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ನವೀನ್‌ಕುಮಾರ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್,ಜಿಲ್ಲಾಧ್ಯಕ್ಷ ಮುರಳಿ, ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಬಿಜೆಪಿ ಟಿಕೇಟ್ ಆಕಾಂಕ್ಷಿಗಳಾದ ಅನಿಲ್‌ಕುಮಾರ್, ಜಯರಾಂ, ಜಯಪಾಯ್ಯ, ಬಾಳೆಕಾಯಿರಾಮದಾಸ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ರೋಡ್ ಷೋ ನಲ್ಲಿ ವಿವಿಧ ಕಲಾ ತಂಡಗಳು,ಕುAಭಮೇಳದೊAದಿಗೆ ಅದ್ದುರಿಯಾಗಿ ಮೆರವಣಿಗೆ ದಾರಿ ಉದ್ದಕ್ಕೂ ಜನ ಸಾಗರ ಸೇರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page