ರಾಜ್ಯದ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ

by | 07/11/23 | ಸುದ್ದಿ


ಹಿರಿಯೂರು :
ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ರಾಜ್ಯದಲ್ಲಿ ಯಾವುದೇ ಒಂದು ಸಣ್ಣ ಅಭಿವೃದ್ಧಿಯನ್ನು ಸಹ ಮಾಡಿಲ್ಲ, ಕೇವಲ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ, ಅಲ್ಲದೆ ನವಂಬರ್ 18 ಕ್ಕೆ ಶಿಕ್ಷಕರಿಗೆ ಹಾಗೂ ನೌಕರರಿಗೆ 7ನೇ ವೇತನ ಜಾರಿಗೊಳ್ಳಬೇಕಿತ್ತು ಆದರೆ ಇದನ್ನು ಇನ್ನೂ 6 ತಿಂಗಳು ಮುಂದೂಡಿದ್ದು, ಸರ್ಕಾರದ ಈ ನಡೆ ಅತ್ಯಂತ ಖಂಡನೀಯ ಎಂಬುದಾಗಿ ಆಗ್ನೇಯ ಶಿಕ್ಷಕ ಕ್ಷೇತ್ರದ ವಿಧಾನಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಗೆ ಭೇಟಿ ನೀಡಿ, ಆಗ್ನೇಯ ಶಿಕ್ಷಕ ಕ್ಷೇತ್ರದ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯ ಶಾಲಾಆಡಳಿತ ಮಂಡಳಿ ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ, ನಂತರ ಅವರು ಮಾತನಾಡಿದರು.
ರಾಜ್ಯ ಸರ್ಕಾರ 7ನೇ ವೇತನ ಆಯೋಗ ಜಾರಿಗೊಳಿಸದೇ ಕಾರ್ಯಾಂಗದ ಆಧಾರಸ್ತಂಭವಾಗಿರುವ ಶಿಕ್ಷಕರು ಹಾಗೂ ನೌಕರರನ್ನು ನಿರ್ಲಕ್ಷಿಸಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿಕ್ಷಕರು ಹಾಗೂ ನೌಕಕರು ಬೀದಿಗಿಳಿದು ಹೋರಾಟ ಮಾಡುವ ಮೊದಲು ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬೆಳಗಾವಿಯಲ್ಲಿ ನಡೆಯುವ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಶಿಕ್ಷಕರು ಹಾಗೂ ನೌಕಕರ 7ನೇ ವೇತನ ಜಾರಿಗೊಳಿಸಬೇಕು ಎಂಬುದಾಗಿ ಅವರು ಒತ್ತಾಯಿಸಿದರು.
ರಾಜ್ಯದ ಶಿಕ್ಷಕ ಸಮುದಾಯ ಎನ್.ಪಿ.ಎಸ್ ತೆಗೆದು ಓಪಿಎಸ್ ತರಬೇಕೆಂದು ಆಗ್ರಹಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಓಪಿಎಸ್ ಜಾರಿಗೆ ತರುವುದಾಗಿ ಪ್ರನಾಳಿಕೆಯಲ್ಲಿ ತಿಳಿಸಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸುಮಾರು 150 ದಿನಗಳಾದರೂ ಈ ಬಗ್ಗೆ ಸರ್ಕಾರ ಅಥವಾ ಶಿಕ್ಷಣಇಲಾಖೆ ಯಾವುದೇ ಕ್ರಮಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ನಿವೃತ್ತ ಪ್ರಾಂಶುಪಾಲರುಗಳಾದ ಕೆ.ರಾಮಚಂದ್ರಪ್ಪ, ಯೋಗಾನಂದಪ್ಪ, ಹಾಗೂ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವಣ್ಣ, ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಸಹಕಾರ್ಯದರ್ಶಿ ರಂಗನಾಥ್, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ವೀರಕರಿಯಪ್ಪ, ನಾಗಣ್ಣ, ತಿಪ್ಪೇಸ್ವಾಮಿ, ಧನಂಜಯ, ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಜೆ.ಮಂಜುನಾಥ್, ವಾಣಿವಿಲಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ, ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ಸಹಶಿಕ್ಷಕಿಯರುಗಳಾದ ಶ್ರೀಮತಿ ವಸಂತಾ, ಶ್ರೀಮತಿ ನಂದಿನಿ, ಶ್ರೀಮತಿ ರಂಜಿತಾ, ಶ್ರೀಮತಿ ಮುಬೀನಾ, ಶ್ರೀಮತಿ ಸಬೀಹಾ, ಪೂಜಾ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *