ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಭಿಮತ ಬಾಲ್ಯಾವಸ್ಥೆಯ ಗರ್ಭಧಾರಣೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ

by | 14/06/24 | ಕಾನೂನು

ಚಿತ್ರದುರ್ಗ ಜೂನ್.14: ಬಾಲ್ಯಾವಸ್ಥೆಯ ಗರ್ಭಧಾರಣೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಭಿಮತ ವ್ಯಕ್ತಪಡಿಸಿದರು.

ನಗರದ ಡಿ.ಹೆಚ್.ಓ ಕಚೇರಿಯಲ್ಲಿ ಶುಕ್ರವಾರ ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಸುರಕ್ಷತಾಧಿಕಾರಿ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಪ್ರಗತಿ ಪರಿಶೀಲಾನ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಕ್ಕಳ ಹಕ್ಕು ರಕ್ಷಣೆ, ಭ್ರೂಣ ಲಿಂಗ ಪತ್ತೆ ತಡೆ, ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಗಳು ತುಂಬಾ ಕಠಿಣವಾಗಿವೆ. ಇವುಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಕ್ಕೆ ತಂದರೆ, ಮಕ್ಕಳಿಗೆ ಸೂಕ್ತ ರಕ್ಷಣೆ ದೊರಕುವುದರೊಂದಿಗೆ ಅವರ ಭವಿಷ್ಯ ಉಜ್ವಲವಾಗುತ್ತದೆ. ಈ ಕಾಯ್ದೆಗಳನ್ನು ಸರಿಯಾದ ರೀತಿಯಲ್ಲಿ ಅರ್ಥಮಾಡಿಕೊಂಡು ಅಧಿಕಾರಿಗಳು ಅನುಷ್ಠಾನ ಮಾಡುವಂತೆ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ತಡೆದು ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯೆ ಕೊಡಿಸಿ, ಇದಕ್ಕಾಗಿ ಸರ್ಕಾರದ ಹಲವಾರು ಯೋಜನೆಗಳ ಉಪಯೋಗ ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಅಭಿನವ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಬಾಲಕಿಯರ ಗರ್ಭಧಾರಣೆಯ ಕಂಡು ಬರುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ತಾಯಂದಿರ ಸಭೆ ಗ್ರಾಮಸಭೆ ಮತ್ತು ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸಭೆಗಳಲ್ಲಿ ಮಕ್ಕಳ ಹಕ್ಕು ರಕ್ಷಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿಲಾಗುತ್ತಿದೆ ಎಂದರು.

ಕಾರ್ಯಕ್ರಮದ ನಂತರ ಮಕ್ಕಳ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಸಾಯಿ ನಾರಾಯಣ ಖಾಸಗಿ ಆಸ್ಪತ್ರೆ ಭೇಟಿ ನೀಡಿ ಸದಸ್ಯರು ಭ್ರೂಣ ಲಿಂಗ ಪತ್ತೆ ಕಾಯ್ದೆ ಅನುಷ್ಠಾನದ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿ ಸವಿತ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಹನುಮಂತ ಗೌಡ ಪೂಜಾರ್, ಪುನೀತ್ ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page