ಚಳ್ಳಕೆರೆ ಅ16ತಾಲೂಕಿನ ಅನ್ನದಾತರಿಗೆ ನಿರಂತರ ಏಳು ಗಂಟೆಗಳ ಕಾಲ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ಇಂದು ಬೆಸ್ಕಾಂ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆಪಿ ಭೂತಯ್ಯ ರಾಜ್ಯ ಸರ್ಕಾರ ರೈತರ ಕಷ್ಟಗಳಿಗೆ ಸ್ಪಂದಿಸದೆ ಕೇವಲ ತನ್ನ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡಿಕೊಂಡು ಕಾಲಹರಣ ಮಾಡುತ್ತಿದೆ ರೈತರ ಕೂಗನ್ನು ಕೇಳಿಸಿಕೊಳ್ಳದೆ 200 ಯೂನಿಟ್ ಉಚಿತ ವಿದ್ಯುತ್ ನೀಡಿ ಇಂದು ರಾಜ್ಯ ವಿದ್ಯುತ್ ಕ್ಷಾಮ ಎದುರಿಸುವಂತೆ ಮಾಡಿದ್ದಾರೆ ಚಳ್ಳಕೆರೆ ತಾಲೂಕು ಈಗಾಗಲೇ ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿ ಕೇಂದ್ರ ಬರ ಅಧ್ಯಯನ ತಂಡದಿಂದ ಸಮೀಕ್ಷೆ ನಡೆಸಿ ಹೋಗಿದೆ ಚಳ್ಳಕೆರೆ ತಾಲೂಕಿನಲ್ಲಿ ಯಾವುದೇ ನೀರಾವರಿ ಸೌಲಭ್ಯಗಳಿಲ್ಲದೆ ಕೇವಲ ಮಳೆ ಆಶ್ರಿತ ಪ್ರದೇಶವಾಗಿದ್ದು ಬರಗಾಲದಿಂದ ಇಂದು ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಸಿಲುಕಿದೆ ಇದರ ಜೊತೆಗೆ ಸರ್ಕಾರ ರೈತರಿಗೆ ವಿದ್ಯುತ್ ನೀಡದೆ ಇರುವುದರಿಂದ ಪಂಪ್ಸೆಟ್ಟುಗಳ ಮೂಲಕ ನೀರಾವರಿ ಬೆಳೆಗಳನ್ನು ಬೆಳೆಯಲು ಸಹ ಸಾಧ್ಯವಾಗದೆ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ ಸರ್ಕಾರ ಕೂಡಲೇ ರಾಜ್ಯದ ಜನತೆಗೆ ನೀಡಿರುವ ಉಚಿತ ವಿದ್ಯುತ್ ಘೋಷಣೆಯನ್ನು ಹಿಂಪಡೆದು ರೈತರಿಗೆ ನಿರಂತರ ವಿದ್ಯುತ್ ಒದಗಿಸಬೇಕು ಅಕ್ರಮ ಸಕ್ರಮದಲ್ಲಿ ಹಣ ಪಾವತಿಸಿದ ರೈತರಿಗೆ ಕೂಡಲೇ ಸಕ್ರಮಗೊಳಿಸಿ ಕಂಬ ವೈರ್ ಕೊಡಬೇಕು ಮತ್ತು ರಾತ್ರಿ ಸಮಯದಲ್ಲಿ ಕರೆಂಟ್ ತೆಗೆಯದಂತೆ ತೋಟದ ಮನೆಗಳಲ್ಲಿ ವಾಸಿಸುವ ರೈತರಿಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಿಗೆ ಮಾಡಲಿಕ್ಕೆ ಧನ, ಕರು ಪ್ರಾಣಿಗಳಿಗೆ ನೀರು ಕುಡಿಯಲಿಕ್ಕೆ ವಿದ್ಯುತ್ ಕೊಡಬೇಕೆಂದು ಆಗ್ರಹಿಸಿದರು.
ಪ್ರಗತಿಪರ ರೈತ ಆರ್‌ಎ ದಯಾನಂದ ಮೂರ್ತಿ ಮಾತನಾಡಿ ಸರ್ಕಾರ ರೈತರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಎದುರಿಸಲು ಸಿದ್ಧರಾಗಬೇಕು ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ ರಾಜ್ಯದಲ್ಲಿ ಜಾಗ ನೀಡಿ ಸೋಲಾರ್ ವಿದ್ಯುತ್ತನ್ನು ಉತ್ಪಾದಿಸಲು ಖಾಸಗಿ ಕಂಪನಿಗಳಿಗೆ ಭೂಮಿ ನೀಡಿದ್ದರೂ ರಾಜ್ಯಕ್ಕೆ ಇದರಿಂದ ಯಾವುದೇ ಉಪಯೋಗವಾಗುತ್ತಿಲ್ಲ ಸೋಲಾರ್ ವಿದ್ಯುತ್ತನ್ನು ಬೇರೆ ರಾಜ್ಯಗಳಿಗೆ ಹೆಚ್ಚಿನ ಬೆಲೆ ಮಾರಿಕೊಳ್ಳಲು ರಾಜ್ಯ ಸರ್ಕಾರ ಅನುವು ಮಾಡಿ ಕೊಟ್ಟಿರುವುದರಿಂದ ರಾಜ್ಯದಲ್ಲಿ ಇಂದು ವಿದ್ಯುತ್ ಅಭಾವ ಉಂಟಾಗಿದೆ ಇಂತಹ ಸಂಪತ್ತಿಗೆ ರಾಜ್ಯದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಜಿಲ್ಲೆಯಾದ ಚಿತ್ರದುರ್ಗ ಜಿಲ್ಲೆಗೆ ನಿರಂತರ ವಿದ್ಯುತ್ ನೀಡದೆ ಇದ್ದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳಿಗೂ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಟಿ ಹಂಪಣ್ಣ ಪ್ರಧಾನ ಕಾರ್ಯದರ್ಶಿ ಡಿಟಿ ಮಂಜುನಾಥ ಕೃಷ್ಣಪ್ಪ ಶ್ರೀನಿವಾಸ ತಿಮ್ಮಣ್ಣ ಮಲ್ಲಯ್ಯ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
0 Comments