ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಗ್ರಾಮದ ಹತ್ತಿರ ಇರುವ ಐತಿಹಾಸಿಕ ರಾಣಿಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಚಳ್ಳಕೆರೆ ತಾಲೂಕು ಐತಿಹಾಸಿಕ ರಾಣಿಕೆರೆ 13 ವರ್ಷಗಳ ನಂತರ ತುಂಬಿ ಕೋಡಿ ಹರಿದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ನವೆಂಬರ್-22ರ ಮಂಗಳವಾರ ಆಗಮಿಸಿ ಬಾಗಿನ ಅರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ರಘುಮೂರ್ತಿ ಅವರು ಪಾಲ್ಗೊಳ್ಳಲಿದ್ದು ರಾಣಿಕೆರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ತಾಲೂಕು ದಂಡಾಧಿಕಾರಿ ಎನ್ ರಘುಮೂರ್ತಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಕಾರ್ಯಪಾಲಕ ಅಭಿಯಂತರ ರಾಧಾಕೃಷ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಅಣ್ಣಪ್ಪ, ಇಂಜಿನಿಯರ್ ರವಿಕುಮಾರ್ ಮುಖಂಡರು ಕಾರ್ಯಕರ್ತರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು
0 Comments