ರಾಷ್ಟ್ರದಲ್ಲಿ ಜಾತ್ಯಾತೀತ ಸಿದ್ಧಾಂತ ಬಲಿಷ್ಠವಾಗಲು ಕಾಂಗ್ರೆಸ್ ಕಾರಣ;ಮಟ್ಟಣದ 8 .9ನೇ ವಾರ್ಡ್ ಗಳಲ್ಲಿಕಾಂಗ್ರೆಸ್‌ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಮಂಜುಳ ಶ್ರೀಕಾಂತ್ ಮತಪ್ರಚಾರ

by | 24/04/24 | ಲೋಕಸಭಾ ಚುನಾವಣೆ-2024


ನಾಯಕನಹಟ್ಟಿ :
ರಾಷ್ಟದಲ್ಲಿ ಸಂವಿಧಾನ, ಜಾತ್ಯತೀತ ಸಿದ್ಧಾಂತ ಇನ್ನೂ ಬಲಿಷ್ಠವಾಗಿದೆ ಎಂದರೆ ಅದು ಕಾಂಗ್ರೆಸ್ ನೀಡಿದ ಕೊಡುಗೆಯಾಗಿದೆ ಎಂದು ಪಟ್ಟಣ ಪಂಚಾಯತಿ 8ನೇವಾರ್ಡ್ ಸದಸ್ಯೆ ಮಂಜುಳಾಶ್ರೀಕಾAತ್ ಹೇಳಿದರು.

ಪಟ್ಟಣದಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಬುಧವಾರ ಮತಪ್ರಚಾರದ ವೇಳೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರವು ತನ್ನ 10 ವರ್ಷದ ಆಡಳಿದ ಅವಧಿಯಲ್ಲಿ ಮಿತಿಮೀರಿದ ಭ್ರಷ್ಟಚಾರ ಮಾಡಿದ್ದೆ ದೊಡ್ಡ ಸಾಧನೆ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಿ ದೇಶವನ್ನು ನರಕವನ್ನಾಗಿ ಮಾಡಲು ಹೊರಟಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಮತದಾರರಿಗೆ ಇದೊಂದು ಸುವರ್ಣ ಅವಕಾಶ. ದ್ವೇಷದರಾಜಕಾರಣ ಮಾಡುತ್ತಾ ಬಡವರನ್ನು, ಅಲ್ಪ ಸಂಖ್ಯಾತರನ್ನು ಮುಂದುವರೆಯಲು ಬಿಡುತ್ತಿಲ್ಲ. ಹೀಗಾಗಿ ಏ.26 ರಂದು ನಡೆಯಲಿರುವ ಚುನಾವಣೆಯಲ್ಲಿ ನನಗೆ ಮತ ನೀಡುವುದರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವಾಗಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಜನರ ಕಲ್ಯಾಣಕ್ಕಾಗಿ ಜಾರಿಗೆತಂದ ಯೋಜನೆಗಳು. ಐದು ವರ್ಷಗಳ ಕಾಲ ಸರ್ಕಾರ ಇರುವವರೆಗೂ ಈ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಂಟಕ ಇರುವುದಿಲ್ಲ. ಆದರೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂದು ಅಪಪ್ರಚಾರ ನಡೆಸುತ್ತಿದೆ, ಜನರಕಲ್ಯಾಣ ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ಬಂಡವಾಳಶಾಹಿಗಳ ಪರವೇ ಹೊರತು ಬಡಜನರ ಪರವಲ್ಲ. ಬಿಜೆಪಿಯ ಯಾವುದೇ ಅಪಪ್ರಚಾರಗಳಿಗೂ ಜನತೆ ಕಿವಿಗೊಡದೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಸರಳ ಸಜ್ಜನಿಕರಾಜಕಾರಣ ಚಂದ್ರಪ್ಪಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ಅಧಿಕಾರದ ಚುಕ್ಕಾಣ ಹಿಡಿದು ಐದುಗ್ಯಾರಂಟಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಇದರಿಂದ ದೀನ ದಲಿತರು, ಅಲ್ಪಸಂಖ್ಯಾತರು, ಬಡವರಿಗೆ ಅನುಕೂಲವಾಗಿದೆ. ಇಂತಹಯಾವುದೇ ಜನಪರಯೋಜನೆ ಬಿಜೆಪಿ ಅನುಷ್ಠಾನ ಮಾಡಿರುವುದನ್ನು ಹೇಳಲಿ ಎಂದರು.

ಕಾಂಗ್ರೆಸ್ ಪಕ್ಷದೇಶದ ಸರ್ವಸ್ವವಾಗಿದೆ. 70 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ಧಿಗೆ ಯಾವಕೊಡುಗೆ ನೀಡಿಲ್ಲ ಎಂದು ಬಿಜೆಪಿಯವರು ಬರೀ ಸುಳ್ಳು ಹೇಳುವುದರಲ್ಲಿ ಜನರನ್ನುದಾರಿತಪ್ಪಿಸುತ್ತಿದೆ. ದೇಶಕ್ಕೆಕಾಂಗ್ರೆಸ್ ಏನು ಮಾಡಿದೆಎಂದು ಪ್ರಶ್ನಿಸುವವರಿಗೆ ನಾವು ಉತ್ತರಿಸುವಅಗತ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟಿರುವುದೇಕಾಂಗ್ರೆಸ್. ಮಹಾತ್ಮಾಗಾಂಧಿ, ಜವಹಾರ್ ಲಾಲ್ ನೆಹರೂ, ಇಂದಿರಾಗಾAಧಿ, ರಾಜೀವ್‌ಗಾಂಧಿ ಮೊದಲಾದಮಹಾನ್ ನಾಯಕರ ಸಮೂಹವನ್ನು ಈ ದೇಶಕ್ಕೆಕೊಟ್ಟಿರುವುದುಕಾಂಗ್ರೆಸ್ ಸಾಕ್ಷಿ ಆಗಿದೆ ಎಂದರು.

ಗ್ರಾಪಂ ಮಾಜಿ ಸದಸ್ಯ ಆರ್.ಶ್ರೀಕಾಂತ್ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿರುವ ಪ್ರಮುಖ ಅಣೆಕಟ್ಟುಗಳು, ನರೇಗಾ ಅಣುಸ್ಥಾವರಗಳು, ಕೃಷಿಕ್ರಾಂತಿ, ಆಹಾರ ಭದ್ರತೆ, ವಿಮಾನ ನಿಲ್ದಾಣ, ರೈಲ್ವೆ, ಬಂದರುಗಳು, ರಾಷ್ಟ್ರೀಕರಣ, ಆರ್.ಟಿ.ಐ, ಆರ್.ಟಿ.ಇ. ಹೀಗೆ ಅನೇಕ ಜನಪರ ಕಾಯ್ದೆಗಳು, ಸಂಸ್ಥೆಗಳನ್ನು ದೇಶಕ್ಕೆಕೊಟ್ಟಿದೆ. ಇವುಗಳನ್ನೆಲ್ಲ ಉಪಯೋಗಿಸಿ ಇಂದುಅಧಿಕಾರ ನಡೆಸುತ್ತಿದೆ. ದುರಂತವೆAದರೆ ಸರ್ಕಾರಿ ಸ್ವಾಮ್ಯದ ಅನೇಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದೇ ಬಿಜೆಪಿಯರ ಸಾಧನೆಎಂದು ವ್ಯಂಗ್ಯವಾಡಿದರು.

ಕೋಮುವಾದದೇಶಕ್ಕೆ ಮಾರಕವಾಗಿದೆ. ಸರ್ವಧರ್ಮ, ಜಾತಿ, ಭಾಷೆ, ಪ್ರಾಂತ್ಯಗಳನ್ನು ಒಂದುಗೂಡಿಸಿ ಕಾಂಗ್ರೆಸ್ ನಿರ್ಮಿಸಿದ ಬಲಿಷ್ಠ ಸೌಹಾರ್ದ ಭಾರತವನ್ನುಧರ್ಮದ ಹೆಸರಿನಲ್ಲಿ ಮನುಷ್ಯರ ನಡುವೆ ಹಗೆತನ, ದ್ವೇಷ, ಅಸೂಹೆ, ಕಂದಕವನ್ನು ಸೃಷ್ಟಿಸಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದೆ. ಬಿಜೆಪಿ ಹೀಗೆಯೇಅಧಿಕಾರದಲ್ಲಿ ಮುಂದುವರಿದರೆ ದೇಶ ಇನ್ನಷ್ಟು ಅಪಾಯಕಾರಿ ಸನ್ನಿವೇಶವನ್ನುಎದುರಿಸಬೇಕಾದ ಸಮಯ ದೂರವಿಲ್ಲ. ಹಾಗಾಗಿ ಬಿಜೆಪಿಯಿಂದ ದೇಶವನ್ನು ರಕ್ಷಿಸುವುದು ತುರ್ತು ಇರುವುದರಿಂದ ಈ ಬಾರಿಕಾಂಗ್ರೆಸ್ ಜಯಭೇರಿ ಬಾರಿಸಿ ಚುನಾವಣೆಯಲ್ಲಿ ಬಿಜೆಯನ್ನು ಸಂಪೂರ್ಣವಾಗಿ ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದರು.

ಕಾಂಗ್ರೆಸ್ ಮುಖಂಡ ಕೆ.ಬಿ.ಅಭಿಷೇಕ್ ಮಾತನಾಡಿ, ಸಂವಿಧಾನವು ಇಡೀದೇಶದ ಸರ್ವಜನಾಂಗದ ಶ್ರೇಯೋಭೀವೃದ್ಧಿಗಾಗಿ ರಚನೆಗೊಂಡಿದೆ. ಇದರಿಂದ ಸರ್ವರು ಸಮಾನವಾಗಿ ಬದುಕಲು ಅವಕಾಶ ಮಾಡಿಕೊಟ್ಟಿದೆ. ಇಂತಹ ಸಂವಿಧಾನವನ್ನುಕೇAದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬದಲಿಸುತ್ತೇವೆಎಂದು ಹೇಳುತ್ತಾರೆ. ಹೀಗಾಗಿ ಸಂವಿಧಾನದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಬೇಕೆಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಟಿ.ರಮೇಶ್, ಕರ್ನಾಟಕ ರಾಜ್ಯರೈತ ಸಂಘದ ಹೋಬಳ ಘಟಕದಅಧ್ಯಕ್ಷ ನಾಗರಾಜ್‌ಮೀಸೆ, ನಿರಂಜನ್, ಟಿ.ಹರೀಶ್, ಅಜ್ಜಯ್ಯ, ಶಂಕರಪ್ಪ, ಯಲ್ಲಪ್ಪ, ಶಂಕರ್ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page