ರಾಷ್ಟ್ರೀಯ ಡೆಂಗೀ ದಿನಾಚರಣೆ: ಜಾಗೃತಿ ಜಾಥಾಕ್ಕೆ ಚಾಲನೆ

by | 17/05/23 | ಆರೋಗ್ಯ


ಚಿತ್ರದುರ್ಗ(ಜನಧ್ವನಿ ವಾರ್ತೆ) ಮೇ.17:
ರಾಷ್ಟ್ರೀಯ ಡೆಂಗೀ ದಿನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಬುಧವಾರ ಚಾಲನೆ ನೀಡಿದರು.
ನಗರದ ಕೆಳಗೋಟೆಯ ಜನಸಾಗರ ಪ್ರಿಂಟ್ ಪ್ರೆಸ್ ಸಮೀಪ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗೀ ದಿನ-“ಎಲ್ಲರ ಸಹಭಾಗಿತ್ವದೊಂದಿಗೆ ಡೆಂಗೀಯನ್ನು ಸೋಲಿಸೋಣ” ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಮಳೆಗಾಲ ಪ್ರಾರಂಭವಾಗಿರುವುದರಿಂದ ಸೊಳ್ಳೆಗಳು ಹೆಚ್ಚಾಗಿದ್ದು, ನೀರು ಶೇಖರಣಾ ಪರಿಕರಗಳು ಹಾಗೂ ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳು ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆಬತ್ತಿ, ಸೊಳ್ಳೆ ನಿರೋಧಕಗಳನ್ನು ಬಳಸುವುದು ಹಾಗೂ ಯಾವುದೇ ಜ್ವರ ಬಂದ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶೀ ಮಾತನಾಡಿ, ಡೆಂಗೀ ಒಂದು ವೈರಸ್ ಕಾಯಿಲೆಯಾಗಿದ್ದು, ಸೊಳ್ಳೆಗಳಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಕೃತಕವಾದ ನೀರು ಶೇಖರಣಾ ಪರಿಕರಗಳನ್ನು ವಾರಕ್ಕೆ ಎರಡು ಬಾರಿ ಖಾಲಿ ಮಾಡಿ ನೀರು ತುಂಬಿಸಿ, ಮುಚ್ಚಳದಿಂದ ಮುಚ್ಚುವುದು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು. ಯಾವುದೇ ಜ್ವರವಿರಲಿ ರಕ್ತ ಪರೀಕ್ಷೆ ಮಾಡಿಸಿ, ವೈದ್ಯರ ಸಲಹೆ ಪಡೆಯಿರಿ. ದ್ರವರೂಪದ ಆಹಾರ ಪದಾರ್ಥಗಳನ್ನು ಸೇವಿಸಿ ವಿಶ್ರಾಂತಿ ಪಡೆಯಿರಿ ಎಂದರು.
ರಾಷ್ಟ್ರೀಯ ಡೆಂಗೀ ದಿನದ ಅಂಗವಾಗಿ ಜಾಗೃತಿ ಜಾಥಾವು ಚಿತ್ರದುರ್ಗ ನಗರದ ಕೆಳಗೋಟೆಯ ಜನಸಾಗರ ಪ್ರಿಂಟಿಂಗ್ ಪ್ರೆಸ್‍ನಿಂದ ಆರಂಭವಾಗಿ ಏಕಲವ್ಯ ವೃತ್ತ, ಭುವನೇಶ್ವರಿ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತದ ಮೂಲಕ ಚನ್ನಕೇಶವ ದೇವಸ್ಥಾನದವರಗೆ ಜಾಥಾ ನಡೆಯಿತು. ನರ್ಸಿಂಗ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಿತಾಧಿಕಾರಿಗಳು ಡೆಂಗೀ ನಿಯಂತ್ರಣದ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಕರಪತ್ರಗಳನ್ನು ಹಂಚುವುದರ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಒ.ಸುಧಾ, ಹಿರಿಯ ಆರೋಗ್ಯ ಮೇಲ್ವಿಚಾರಕ ಎಂ.ಬಿ.ಹನುಮಂತಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿ.ಶ್ರೀನಿವಾಸ್, ಬಿ.ಆರ್.ನಾಗರಾಜ್, ಗುರುಮೂರ್ತಿ, ಹೆಚ್.ಎ.ನಾಗರಾಜ್, ಬಿ.ಆರ್.ಪಾಂಡು, ರುದ್ರಮುನಿ, ಸಿರೀಶ್ ಸೇರಿದಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಇದ್ದರು.

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page