ಹಿರಿಯೂರು :
ನಗರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟಗಾರರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ಮಾರಾಟಗಾರರು ನಿಯಮ ಉಲ್ಲಂಘಸಿದ್ದೇ ಆದರೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ದಂಡ ವಿಧಿಸಲಾಗುವುದು ಎಂಬುದಾಗಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಸಂಧ್ಯಾ ಹೇಳಿದರು.
ನಗರದ ವಿವಿಧ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ, ಸರ್ಕಾರದ ಕಾಯ್ದೆಗಳನ್ನು ಪಾಲಿಸದ ಮಾರಾಟಗಾರರಿಗೆ ನಗರಸಭೆ ವತಿಯಿಂದ ತಂಡ ವಿಧಿಸಿ, ನಂತರ ಅವರು ಮಾತನಾಡಿದರು.
ಸರ್ಕಾರದ ನಿಯಮ ಉಲ್ಲಂಘಿಸಿದ 5 ಅಂಗಡಿಗಳ ಮಾಲೀಕರಿಗೆ ಒಟ್ಟಾರೆ 1700 ರೂಗಳ ದಂಡ ವಿಧಿಸಿದ್ದು, ದಂಡ ವಿಧಿಸಿದ ಮೊತ್ತವನ್ನು ಬ್ಯಾಂಕ್ ಗೆ ಕಟ್ಟಿರುವ ರಸೀದಿಗಳನ್ನು ಅಂಗಡಿಗಳ ಮಾಲೀಕರಿಗೆ ನೀಡುತ್ತಿದ್ದು, ತಂಬಾಕು ಹಾಗೂ ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಅಂಗಡಿ ಮಳಿಗೆಗಳಲ್ಲಿ ನಿಷೇದಿತ ಪ್ಲಾಸ್ಟಿಕ್ ಬಳಸುತ್ತಿದ್ದ ಮಾರಾಟಗಾರರಿಗೆ ದಂಡ ವಿಧಿಸಲಾಯಿತು ಹಾಗೂ ಉದ್ದಿಮೆ ಪರವಾನಿಗೆ ತೆಗೆದುಕೊಳ್ಳದೆ ಇರುವ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿ, ಉದ್ದಿಮೆಗಳ ಪರವಾನಿಗೆ ಪಡೆಯಲು ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ಸಂಧ್ಯಾ, ಅಜಯ್ ಕುಮಾರ್ ಮತ್ತು ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಕರಾದ ವಿನಯ್ ಉಪಸ್ಥಿತರಿದ್ದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆ ಕಡ್ಡಾಯವಾಗಿ ಪಾಲಿಸಬೇಕು : ಹಿರಿಯಆರೋಗ್ಯ ನಿರೀಕ್ಷಕರಾದ ಸಂಧ್ಯಾ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments