ಚಿತ್ರದುರ್ಗ ಆ.29:
ನೇತ್ರದಾನ ಮಾಡಿ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮೇಘನಾ ಸಲಹೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗೋನೂರು ನಿರಾಶ್ರಿತರ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ 38ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಲರೂ ಜೀವನ ಸಾರ್ಥಕತೆ ಪಡಿಸಿಕೊಳ್ಳಲು ಏನನ್ನಾದರೂ ಮಾಡಬೇಕು ಎಂದು ಆಲೋಚಿಸುತ್ತಿರುತ್ತಾರೆ. ಅದರಂತೆ ನೇತ್ರದಾನ ಹೇಗೆ ಮಾಡಬೇಕು ಯಾವ ದಾಖಲಾತಿಗಳನ್ನು ನೀಡಬೇಕು. ಎಲ್ಲಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಕೊರತೆ ಇರುತ್ತದೆ. ಈ ಮಾಹಿತಿ ನೀಡಲು, ನೇತ್ರದಾನದ ಮಹತ್ವ ಸಾರುವುದಕ್ಕಾಗಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಸ್ಪತ್ರೆಯ ನೇತ್ರಾಧಿಕಾರಿಗಳು ಆನ್‍ಲೈನ್ ಮೂಲಕ ತಮ್ಮ ಹೆಸರುಗಳನ್ನು ನೇತ್ರದಾನಕ್ಕೆ ನೋಂದಾಯಿಸಲಿದ್ದಾರೆ. ನಿರಾಶ್ರಿತ ಕೇಂದ್ರದ ಸಿಬ್ಬಂದಿಗಳು ಆಸಕ್ತ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯ ಜಿಲ್ಲಾ ನೇತ್ರ ತಜ್ಞರಾದ ಡಾ.ಪ್ರದೀಪ್ ಮಾತನಾಡಿ, ಒಬ್ಬ ವ್ಯಕ್ತಿ ದಾನ ಮಾಡಿದ ನೇತ್ರಗಳು ಇಬ್ಬರು ಕಾರ್ನಿಯಾ ಅಂದರಿಗೆ ದೃಷ್ಟಿ ನೀಡುತ್ತದೆ. ಅಂದಾಜು ಒಂದು ಕೋಟಿ ಇಪ್ಪತ್ತೈದು ಲಕ್ಷ ಜನರು ಕಾರ್ನಿಯಾ ಸಂಬಂಧಿ ಅಂದತ್ವದಿಂದ ಬಳಲುತ್ತಿದ್ದು, ದಾನಕ್ಕಾಗಿ ಕಾಯುತ್ತಿದ್ದಾರೆ. ಹೆಚ್ಚು ಹೆಚ್ಚು ನೇತ್ರದಾನ ಮಾಡಿ ಅಂದರ ಬಾಳಿಗೆ ಬೆಳಕಾಗಿ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಜಿಲ್ಲಾಸ್ಪತ್ರೆಯ ನೇತ್ರಾಧಿಕಾರಿ ಕೆ.ರಾಮು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ನಿರಾಶ್ರಿತ ಕೇಂದ್ರದ ವ್ಯವಸ್ಥಾಪಕ ಮಹದೇವಯ್ಯ, ಸಿಬ್ಬಂದಿಗಳು, ನಿರಾಶ್ರಿತ ಕೇಂದ್ರದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 19 ಜನ ಸಿಬ್ಬಂದಿಗಳು ನೇತ್ರದಾನ ಮಾಡಲು ಮುಂದೆ ಬಂದರು.
ರಾಷ್ಟ್ರೀಯ ನೇತ್ರದಾನ ಪಾಕ್ಷಿಕಕ್ಕೆ ಚಾಲನೆ ನೇತ್ರದಾನ ಮಾಡಿ ಜೀವನ ಸಾರ್ಥಕ ಪಡಿಸಿಕೊಳ್ಳಿ: ಡಾ.ಮೇಘನಾ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments