ರಾಷ್ಟ್ರ ಕವಿ ಕುವೆಂಪುರವರ ಕಲ್ಪನೆಯ ಮಂತ್ರಮಾಂಗಲ್ಯ ವಿವಾಹದ ಪದ್ಧತಿಯಲ್ಲಿ ವಿವಾಹವಾದ ನವಜೋಡಿ

by | 20/09/23 | ಜೀವನಶೈಲಿ

ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ವಿವಾಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಚಲನಚಿತ್ರ ನಟರು ಸೇರಿದಂತೆ ಗಣ್ಯಾತಿ ಗಣ್ಯರು ಬಂದು ಹರಸಿದರೆ ಮಾತ್ರ ವಿವಾಹ ಎಂಬ ಕಂದಾಚಾರಗಳನ್ನು ಬದಿಗೊತ್ತಿ ತಾಲೂಕಿನ ಅವಿನಾಶ್ ಮತ್ತು ಮಮತಾ ದಂಪತಿ 60ರ ದಶಕದಲ್ಲಿ ಹೊಸ ವಿಚಾರಧಾರೆಗಳಿಗೆ ದಾರಿ ಮಾಡಿ ಕೊಟ್ಟಿದ್ದ ರಾಷ್ಟ್ರಕವಿ ಕುವೆಂಪುರವರ ಕನಸಿನ ಮಂತ್ರ ಮಾಂಗಲ್ಯವೆಂಬ ಪದ್ಧತಿಯ ಮೂಲಕ ಸತಿಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಪರೂಪದ ವಿವಾಹಕ್ಕೆ ನಗರದ ಶ್ರೀ ಸಾಯಿಬಾಬಾ ಮಂದಿರ ಸಾಕ್ಷಿಯಾಗಿದೆ.

ಆಡಂಬರವಿಲ್ಲದೆ ಅಬ್ಬರದ ಪ್ರಚಾರವಿಲ್ಲದೆ ಸರಳವಾಗಿ ಕೇವಲ ಒಂದು ಗಂಟೆಯ ಅವಧಿಯಲ್ಲಿ ವಿವಾಹದ ವಿಧಿವಿಧಾನಗಳು ಪೂರ್ಣಗೊಂಡ ಈ ವಿವಾಹ ಕಾರ್ಯಕ್ರಮ ನಡೆದಿದ್ದು ಸಾರ್ವಜನಿಕರ ಗಮನ ಸೆಳೆದಿದೆ.

ಈ ಕಾರ್ಯಕ್ರಮದ ಮುಖ್ಯಸ್ಥಿಕೆ ವಹಿಸಿದ್ದ ಜೆ ಎಸ್ ಆನಂದ್ ಮಾತನಾಡಿ ರಾಷ್ಟ್ರಕವಿ ಕುವೆಂಪುರವರು 60ರ ದಶಕದಲ್ಲಿ ತಮ್ಮ ಪುತ್ರ ತೇಜಸ್ವಿಯವರ ವಿವಾಹ ಕಾರ್ಯಕ್ರಮ ಏರ್ಪಡಿಸುವಾಗ ಇಂತಹ ಮಂತ್ರ ಮಾಂಗಲ್ಯವೆಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ್ದರು ಇಂದಿನ ಯುವ ಪೀಳಿಗೆ ಹಾಗೂ ಪೋಷಕರು ಆಡಂಬರದ ಮದುವೆಗಳಿಗೆ ಮಾರುಹೋಗುತ್ತಿದ್ದು ದುಂದು ವೆಚ್ಚಕ್ಕೆ ಕಾರಣವಾಗುತ್ತಿದೆ ಮನುಕುಲದ ಮನಸ್ಸುಗಳು ಬದಲಾವಣೆಯಾಗಿ ಇಂತಹ ಸರಳ ವಿವಾಹಗಳು ನಡೆದರೆ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನವ ವಿವಾಹಿತರಾದ ಅವಿನಾಶ್ ಹಾಗೂ ಮಮತಾ ಮಾತನಾಡಿ ಕುವೆಂಪುರವರ ಮಂತ್ರ ಮಾಂಗಲ್ಯ ಪದ್ಧತಿ ನಮ್ಮಿಬ್ಬರಿಗೂ ಇಷ್ಟವಾಗಿದ್ದರಿಂದ ಪೋಷಕರನ್ನು ಒಪ್ಪಿಸಿ ನಾವು ಇಂದು ಈ ವಿಧಾನದಲ್ಲಿ ವಿವಾಹವಾಗಿದ್ದೇವೆ ಆಡಂಬರದ ವಿವಾಹವಾಗುವುದರಿಂದ ಯಾವುದೇ ಲಾಭವಿಲ್ಲ ವಿವಾಹವೆಂಬುವುದು ಎರಡು ಮನಸ್ಸುಗಳ ನಡುವೆ ನಡೆಯಬೇಕು ಕುವೆಂಪುರವರ ಮಂತ್ರ ಮಾಂಗಲ್ಯದ ಅರ್ಥವನ್ನು ತಿಳಿದ ಮೇಲೆ ನಾವಿಬ್ಬರು ಈ ನಿರ್ಧಾರಕ್ಕೆ ಬಂದು ಇಂದು ವಿವಾಹ ಮಾಡಿಕೊಂಡಿದ್ದೇವೆ ವೇದಕಾಲದಲ್ಲಿನ ಉತ್ತಮ ಅಂಶಗಳನ್ನು ಸೇರಿಸಿ ಕುವೆಂಪುರವರ ಮಂತ್ರ ಮಾಂಗಲ್ಯ ರಚಿತವಾಗಿದೆ ಇಂತಹ ವಿವಾಹ ಕಾರ್ಯಗಳು ಇನ್ನು ಹೆಚ್ಚಿನ ರೀತಿಯಲ್ಲಿ ನಡೆಯಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಧುವರರ ಪೋಷಕರು ಹಾಗೂ ಆಪ್ತರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page