ಹಿರಿಯೂರು :
ತಾಲ್ಲೂಕಿನ ಜವಗೊಂಡನಹಳ್ಳಿ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈತರ ಜಮೀನಿನಲ್ಲಿ ಅಳವಡಿಸಿರುವ ಮೋಟರ್ ಪಂಪ್ ಸೆಟ್ ಹಾಗೂ ಕೇಬಲ್ ವೈರ್ ಗಳು ಕಳ್ಳತನವಾಗುತ್ತಿದ್ದು, ರೈತರ ಜಮೀನುಗಳ ಸುತ್ತಮುತ್ತ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂಬುದಾಗಿ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಕಾಳಿಕೃಷ್ಣ ಹೇಳಿದರು.
ಹಿರಿಯೂರು ಗ್ರಾಮಾಂತರ ಪೊಲೀಸ್ ಉಪಠಾಣೆಯ ಆವರಣದಲ್ಲಿ ಅಪರಾಧ ತಡೆ ಮಾಸಾಚಾರಣೆಯ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮದ ರೈತರನ್ನು ಕೆರೆದು ಮೋಟರ್ ಪಂಪ್ ಸೆಟ್ ಹಾಗೂ ಕೇಬಲ್ ವೈರ್ ಕಳುವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ರೈತರಿಗೆ ಮಾಹಿತಿ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ರೈತರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments